ಉದ್ಯೋಗ ಹುಡುಕುತ್ತಿರುವವರೇ ಗಮನಿಸಿ; ಕರ್ನಾಟಕದಲ್ಲಿ ಉದ್ಯೋಗ ಮೇಳ ನಡೆಸಲು ಸರ್ಕಾರ ನಿರ್ಧಾರ, ಸಚಿವರ ನೇತೃತ್ವದ ಸಮಿತಿ ರಚನೆ
ಕನ್ನಡ ಸುದ್ದಿ  /  ಕರ್ನಾಟಕ  /  ಉದ್ಯೋಗ ಹುಡುಕುತ್ತಿರುವವರೇ ಗಮನಿಸಿ; ಕರ್ನಾಟಕದಲ್ಲಿ ಉದ್ಯೋಗ ಮೇಳ ನಡೆಸಲು ಸರ್ಕಾರ ನಿರ್ಧಾರ, ಸಚಿವರ ನೇತೃತ್ವದ ಸಮಿತಿ ರಚನೆ

ಉದ್ಯೋಗ ಹುಡುಕುತ್ತಿರುವವರೇ ಗಮನಿಸಿ; ಕರ್ನಾಟಕದಲ್ಲಿ ಉದ್ಯೋಗ ಮೇಳ ನಡೆಸಲು ಸರ್ಕಾರ ನಿರ್ಧಾರ, ಸಚಿವರ ನೇತೃತ್ವದ ಸಮಿತಿ ರಚನೆ

ಯುವ ಪದವೀಧರರಿಗೆ ಯುವನಿಧಿ ಯೋಜನೆ ಜಾರಿ ನಂತರ ರಾಜ್ಯಾದ್ಯಂತ ಉದ್ಯೋಗ ಮೇಳ ನಡೆಸಲು ಸರ್ಕಾರ ನಿರ್ಧಾರಿಸಿದ್ದು, ಕೌಶಲಾಭಿವೃದ್ಧಿ ಸಚಿವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ.

ಕರ್ನಾಟಕದಲ್ಲಿ ಉದ್ಯೋಗ ಮೇಳ ನಡೆಸಲು ಸರ್ಕಾರ ನಿರ್ಧಾರಿಸಿದ್ದು, ಸಚಿವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ
ಕರ್ನಾಟಕದಲ್ಲಿ ಉದ್ಯೋಗ ಮೇಳ ನಡೆಸಲು ಸರ್ಕಾರ ನಿರ್ಧಾರಿಸಿದ್ದು, ಸಚಿವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ

ಬೆಂಗಳೂರು: ಜಿಲ್ಲಾ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಕೌಶಲಾಭಿವೃದ್ಧಿ, ಜೀವನೋಪಾಯ ಸಚಿವ ಶರಣಪ್ರಕಾಶ ಪಾಟೀಲ ಅಧ್ಯಕ್ಷತೆಯಲ್ಲಿ 7 ಸಚಿವರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ.

ಸಚಿವರಾದ ಎಂ.ಬಿ.ಪಾಟೀಲ, ಎಚ್.ಕೆ.ಪಾಟೀಲ, ಡಾ.ಎಂ.ಸಿ.ಸುಧಾಕರ್‌, ದಿನೇಶ್‌ ಗುಂಡೂರಾವ್‌, ಪ್ರಿಯಾಂಕ್‌ ಖರ್ಗೆ, ಸಂತೋಷ್‌ ಲಾಡ್‌, ಬಿ.ನಾಗೇಂದ್ರ ಹಾಗೂ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.ಚುನಾವಣೆ ಸಂದರ್ಭದಲ್ಲಿ ಯುವಕರಿಗೆ ಉದ್ಯೋಗ ಒದಗಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. 2024ರ ಜನವರಿ 12ರಂದು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಸಲಾಗಿತ್ತು.

ಈ ಸಮಿತಿಯು ಪ್ರಮುಖ, ಸಣ್ಣ ಕೈಗಾರಿಕೆಗಳು ಮತ್ತು ಸಾಫ್ಟ್‌ವೇರ್ ಕಂಪನಿಗಳ ಸಮನ್ವಯದಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸುತ್ತದೆ. ರಾಜ್ಯಾದ್ಯಂತ ಉದ್ಯೋಗ ಮೇಳಗಳನ್ನು ಆಯೋಜಿಸುವ ಮೂಲಕ ನಿರುದ್ಯೋಗಿ ಯುವಕರು ಉದ್ಯೋಗಗಳನ್ನು ಕಂಡುಕೊಳ್ಳಲು ಮತ್ತು ಸ್ವಾವಲಂಬಿಗಳಾಗಲು ಸರ್ಕಾರ ಸಹಾಯ ಮಾಡಲಿದೆ. ಉದ್ಯೋಗದ ಬೇಡಿಕೆಗೆ ಅನುಗುಣವಾಗಿ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸಲು ಸಮಿತಿ ನಿರಂತರವಾಗಿ ಶ್ರಮಿಸಲಿದೆ.

ಗ್ರಾಮೀಣ ಭಾಗದ ಯುವಕ ಯುವತಿಯರಿಗೆ ಹೆಚ್ಚಿನ ಅವಕಾಶ

ಉದ್ಯೋಗ ಮೇಳ ನಡೆಸುವುದರಿಂದ ಐಟಿ- ಬಿಟಿ, ಹೋಟೆಲ್, ಉತ್ಪಾದನಾ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗ್ರಾಮೀಣ ಭಾಗದ ಯುವಕ- ಯುವತಿಯರಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಬೇಡಿಕೆಗೆ ಅನುಗುಣವಾಗಿ ಯುವ ಜನತೆಗೆ ಉದ್ಯೋಗಗಳನ್ನು ನೀಡಿ ಸ್ವಾವಲಂಬಿಯನ್ನಾಗಿ ಮಾಡುವ ಸದುದ್ದೇಶದಿಂದ ರಾಜ್ಯ ಸರ್ಕಾರ ಉದ್ಯೋಗ ಮೇಳವನ್ನು ಆಯೋಜಿಸಲು ಮುಂದಾಗಿದೆ. ಕನ್ನಡಿಗರಿಗೆ ಉದ್ಯೋಗದ ಅವಕಾಶಗಳನ್ನು ಕಲ್ಪಿಸಲು ಸರ್ಕಾರ ಹಲವು ಉದ್ಯೋಗ ಮೇಳಗಳನ್ನು ಹಮ್ಮಿಕೊಳ್ಳಲಿದೆ. ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶ್ರಮಿಸಲಿದೆ. ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿದೆ. ಐಟಿ- ಬಿಟಿ, ಹೋಟೆಲ್‌, ಉತ್ಪಾದನಾ ಕ್ಷೇತ್ರ, ಬ್ಯಾಂಕಿಂಗ್‌ ವಲಯಗಳಲ್ಲಿ ಗ್ರಾಮೀಣ ಭಾಗದ ಯುವಕ- ಯುವತಿಯರಿಗೆ ಹೆಚ್ಚಿನ ಅವಕಾಶ ದೊರಕಿಸಲಾಗುವುದು ಎಂದು ಸಚಿವ ಶರಣಪ್ರಕಾಶ ಪಾಟೀಲ ಮಾಹಿತಿ ಹೇಳಿದ್ದಾರೆ.

ಇಲಾಖೆಯು ಖಾಸಗಿ ವಲಯದ ಸಂಸ್ಥೆಗಳ ಸಹಯೋಗದೊಂದಿಗೆ ರಾಜ್ಯದ ವಿವಿಧ ಉದ್ಯೋಗ ವಿನಿಮಯ ಕೇಂದ್ರಗಳಲ್ಲಿ ಉದ್ಯೋಗ ಮೇಳಗಳನ್ನು ಏರ್ಪಡಿಸುತ್ತಿದೆ. ಇದರಿಂದಾಗಿ ಇಲಾಖೆಯು ನಿಯೋಜಕರು ಹಾಗೂ ಉದ್ಯೋಗಾರ್ಥಿಗಳು ಒಂದೇ ವೇದಿಕೆಯಲ್ಲಿ ಸೇರುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಉದ್ಯೋಗ ಮೇಳಗಳನ್ನು ಆಯೋಜಿಸುತ್ತಿರುವುದರಿಂದ ಖಾಸಗಿ ಉದ್ಯೋಗದಾತರಿಗೆ ಸಿಬ್ಬಂದಿ ಭರ್ತಿ ಮಾಡುವ ಸಂಧರ್ಭದಲ್ಲಿ ವೆಚ್ಚ ಕಡಿಮೆ ಆಗುವುದು ಹಾಗೂ ಉದ್ಯೋಗಾರ್ಥಿಗಳು ಉದ್ಯೋಗದಾತರು ಒಂದೆಡೆ ಮುಖಾಮುಖಿ ಆಗುವುದರಿಂದ ಪತ್ರ ವ್ಯವಹಾರದ ಹಾಗೂ ಸಮಯದ ಉಳಿತಾಯವಾಗುತ್ತದೆ.

ಸರ್ಕಾರಿ ಉದ್ಯೋಗ ಭರ್ತಿಗೆ ಸರ್ಕಾರ ಹಿಂದೇಟು?

2023ರಲ್ಲಿ ನಿರುದ್ಯೋಗ ಪ್ರಮಾಣ ರಾಜ್ಯದಲ್ಲಿ ಶೇ.2.7ರಷ್ಟಿದ್ದು ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಇದೆ. ರಾಷ್ಟ್ರೀಯ ಸರಾಸರಿ ಶೇ.4.7ರಷ್ಟಿದೆ. ಕಳೆದ ನಾಲ್ಕೈದು ವರ್ಷಗಳಿಂದ ಪ್ರತಿ ವರ್ಷ 13.75 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತಿದೆ. ಆರ್ಥಿಕ ಹೊರೆಯಾಗುತ್ತಿದೆ ಎಂಬ ಕಾರಣಕ್ಕೆ ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡಲು ಎಲ್ಲ ಸರ್ಕಾರಗಳು ಹಿಂದೇಟು ಹಾಕುತ್ತಿವೆ. ಹಲವು ಸರ್ಕಾರಗಳು ಉದ್ಯೋಗ ನೀತಿಗಳನ್ನು ಜಾರಿಗೆ ತರುತ್ತಾ ಬಂದಿದ್ದವು. ಈಗಿನ ಸರ್ಕಾರವೂ ಹೊಸ ಉದ್ಯೋಗ ನೀತಿ ತರಲು ಚಿಂತನೆ ನಡೆಸುತ್ತಿದೆ.

ಸರ್ಕಾರಿ, ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮತ್ತು ಉದ್ಯೋಗ ಸೃಷ್ಟಿಯ ಬಗ್ಗೆ ಈಗಾಗಲೇ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟವರ ಜೊತೆ ಚರ್ಚೆ ನಡೆಸುತ್ತಿದ್ದು, ವಿಶೇಷವಾಗಿ ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡಲು ಆಸ್ಥೆ ವಹಿಸಿದ್ದಾರೆ ಎಂದು ತಿಳಿದು ಬಂದಿದೆ.

'ಮನೆ-ಮನದಲ್ಲಿ ಶ್ರೀರಾಮ' ಸರಣಿಗೆ ನೀವೂ ಬರೆಯಿರಿ. ಇಮೇಲ್: ht.kannada@htdigital.in

Whats_app_banner