Bank recruitment:ಮಂಡ್ಯ ಡಿಸಿಸಿ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ, 94 ಹುದ್ದೆಗಳಿಗೆ ಫೆ 16ರ ಮೊದಲು ಅರ್ಜಿ ಸಲ್ಲಿಸಿ
ಕನ್ನಡ ಸುದ್ದಿ  /  ಕರ್ನಾಟಕ  /  Bank Recruitment:ಮಂಡ್ಯ ಡಿಸಿಸಿ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ, 94 ಹುದ್ದೆಗಳಿಗೆ ಫೆ 16ರ ಮೊದಲು ಅರ್ಜಿ ಸಲ್ಲಿಸಿ

Bank recruitment:ಮಂಡ್ಯ ಡಿಸಿಸಿ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ, 94 ಹುದ್ದೆಗಳಿಗೆ ಫೆ 16ರ ಮೊದಲು ಅರ್ಜಿ ಸಲ್ಲಿಸಿ

ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನಲ್ಲಿ ನಾನಾ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿಯಲ್ಲಿ ಉತ್ತೀರ್ಣರಾದವರಿಗೆ ಹೆಚ್ಚು ಹುದ್ದೆಗಳಿವೆ.

ಮಂಡ್ಯ ಡಿಸಿಸಿ ಬ್ಯಾಂಕ್‌ನಲ್ಲಿ ನಾನಾ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಂಡ್ಯ ಡಿಸಿಸಿ ಬ್ಯಾಂಕ್‌ನಲ್ಲಿ ನಾನಾ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಂಡ್ಯ: ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು, ಕಿರಿಯ ಸಹಾಯಕರು, ವಾಹನ ಚಾಲಕರು ಹಾಗೂ ಅಟೆಂಡರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಜನವರಿ 18ರಂದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ. ಫೆಬ್ರವರಿ 16ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಎಲ್ಲಾ ಹುದ್ದೆಗಳಿಗೂ ಶೈಕ್ಷಣಿಕ ಅರ್ಹತೆ, ಕೆಲವು ನಿಯಮಗಳನ್ನು ನಿಗದಿಪಡಿಸಲಾಗಿದೆ.

ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್‌ 1 ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಸರ್ಕಾರದ ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ನಲ್ಲಿ ಎಂ.ಟೆಕ್ ಸ್ನಾತಕೊತ್ತರ ಪದವಿಯಲ್ಲಿ ತೇರ್ಗಡೆಯಾಗಿರಬೇಕು. ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆಗೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು ಮತ್ತು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.

ಕಿರಿಯ ಸಹಾಯಕರ 70 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆಗೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು ಮತ್ತು ಅರ್ಥ ಮಾಡಿಕೊಳ್ಳಬೇಕು. ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.

ವಾಹನ ಚಾಲಕರ 2 ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ಕಾನೂನುಬದ್ದ ಡ್ರೆವಿಂಗ್ ಲೈಸನ್ಸ್ ಹೊಂದಿರಬೇಕು.

ಅಟೆಂಡರ್ ನ 21 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ಇಂತಹವು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು.

ವೆಬ್‌ಸೈಟ್‌ ವಿವರ

https://www.mandyadccbank.com/recruitment_notification.html ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಹಾಯವಾಣಿ 91085328218 ಮೂಲಕವೂ ಮಾಹಿತಿ ಪಡೆಯಬಹುದು.

ಹೀಗೆ ಅರ್ಜಿ ಸಲ್ಲಿಸಿ

  • ವೆಬ್‌ಸೈಟ್‌ ಒಳ ಹೊಕ್ಕು “New Registration” ಬಟನ್ ಮೇಲೆ ಕ್ಲಿಕ್ ಮಾಡಿ.
  • ಮೂಲ ವಿವರಗಳನ್ನು ಭರ್ತಿ ಮಾಡಿ, ಅಂದರೆ. ಪೂರ್ಣ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಹುಟ್ಟಿದ ದಿನಾಂಕ, ಮೊಬೈಲ್ ಸಂಖ್ಯೆ, ಇ-ಮೇಲ್ ವಿಳಾಸ ಇತ್ಯಾದಿ
  • ಸೂಚನೆಗಳನ್ನು ಅನುಸರಿಸಿ ಮತ್ತು ಲಾಗಿನ್‌ಗಾಗಿ ನೋಂದಣಿ ಐಡಿ ಮತ್ತು ಪಾಸ್‌ವರ್ಡ್ ಅನ್ನು ರಚಿಸಲು ಹಂತ-ಹಂತದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ
  • ಈಗಾಗಲೇ ನೋಂದಾಯಿಸಿರುವ ಅಭ್ಯರ್ಥಿಗಳು ತಮ್ಮ ನೋಂದಣಿ ಐಡಿ/ಪಾಸ್‌ವರ್ಡ್ ಕಳೆದುಕೊಂಡಿರುವ/ಮರೆತಿರುವವರು 'Forgot Registration ID / Password' ಬಟನ್ ಮೇಲೆ ಕ್ಲಿಕ್ ಮಾಡಿ ಮತ್ತು ತಮ್ಮ ನೋಂದಣಿ ಐಡಿ/ಪಾಸ್‌ವರ್ಡ್ ಪ್ರದರ್ಶಿಸಲು ವಿವರಗಳನ್ನು ಭರ್ತಿ ಮಾಡಿ.
  • ನೋಂದಣಿ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಲಾಗಿನ್ ಮಾಡಿ. ಒಂದು-ಬಾರಿಯ ಸಂಪರ್ಕ ವಿವರಗಳನ್ನು ಭರ್ತಿ ಮಾಡಿ. ನೋಂದಣಿ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಲಾಗಿನ್ ಮಾಡಿ ಮತ್ತು ಸಂಪರ್ಕ ವಿವರಗಳನ್ನು ಭರ್ತಿ ಮಾಡಿ.
  • ಅಭ್ಯರ್ಥಿಗಳ ಅನುಕೂಲಕ್ಕಾಗಿ ವೈಯಕ್ತಿಕ ಮತ್ತು ಸಂಪರ್ಕ ವಿವರಗಳು ಎಲ್ಲಾ ಪೋಸ್ಟ್‌ಗಳಲ್ಲಿ ಪ್ರತಿಫಲಿಸುತ್ತದೆ.
  • ನೀವು ಅರ್ಜಿ ಸಲ್ಲಿಸಲು ಬಯಸುವ ಹುದ್ದೆ ಅನ್ವಯಿಸು Apply ಬಟನ್ ಮೇಲೆ ಕ್ಲಿಕ್ ಮಾಡಿ ಶೈಕ್ಷಣಿಕ ಅರ್ಹತೆ,ನೇರ ಮೀಸಲಾತಿ/ ಸಮತಲ ಮೀಸಲಾತಿ (ಅನ್ವಯವಾಗುವಂತೆ) ಇತ್ಯಾದಿಗಳಂತಹ ಸಂಬಂಧಿತ ಅರ್ಜಿ ವಿವರಗಳನ್ನು ಭರ್ತಿ ಮಾಡಿ, ಸಹಿಯೊಂದಿಗೆ ಫೋಟೋವನ್ನು ಅಪ್‌ಲೋಡ್ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಅಗತ್ಯವಿದ್ದರೆ ನೀವು ಅರ್ಜಿ ವಿವರಗಳನ್ನು ಮಾರ್ಪಡಿಸಬಹುದು, ಇಲ್ಲದಿದ್ದರೆ ನಿಮ್ಮ ಅರ್ಜಿ ಶುಲ್ಕ ಪಾವತಿಯನ್ನು ಮಾಡಲು ಮತ್ತು ಅರ್ಜಿ ಪೂರ್ವವೀಕ್ಷಣೆ ಪಡೆಯಲು 'Final Submit’ ಬಟನ್ ಕ್ಲಿಕ್ ಮಾಡಿ.
  • ಬಟನ್ ಕ್ಲಿಕ್ ಮಾಡಿದ ನಂತರ ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ಯಾವುದೇ ವಿವರಗಳನ್ನು ಮಾರ್ಪಡಿಸಲು ಸಾಧ್ಯವಾಗುವುದಿಲ್ಲ
  • ಆನ್‌ಲೈನ್ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಲು Application Preview ಕ್ಲಿಕ್ ಮಾಡಿ.
  • ಬೇರೆ ಹುದ್ದೆಗೆ ಅರ್ಜಿ ಸಲ್ಲಿಸಲು ಅಥವಾ ಸಲ್ಲಿಸಿದ ಅರ್ಜಿಗಳನ್ನು (ಅನ್ವಯಿಕ ಪೋಸ್ಟ್) ವೀಕ್ಷಿಸಲು Home ಬಟನ್ ಕ್ಲಿಕ್ ಮಾಡಿ. ಯಾವುದೇ ಹಂತದಲ್ಲಿ ಅರ್ಜಿ ಅನ್ನು ಮುಚ್ಚಲು Logout ಬಟನ್ ಅನ್ನು ಕ್ಲಿಕ್ ಮಾಡಿ

Whats_app_banner