ಮಲೆಮಹದೇಶ್ವರ ತಪ್ಪಲಿನಲ್ಲಿ 5 ಹುಲಿಗಳ ಸಾವು, ವಿಷ ಹಾಕಿ ಕೊಂದರಾ ದುರುಳರು? ತನಿಖೆಗೆ ಆದೇಶ
ಕನ್ನಡ ಸುದ್ದಿ  /  ಕರ್ನಾಟಕ  /  ಮಲೆಮಹದೇಶ್ವರ ತಪ್ಪಲಿನಲ್ಲಿ 5 ಹುಲಿಗಳ ಸಾವು, ವಿಷ ಹಾಕಿ ಕೊಂದರಾ ದುರುಳರು? ತನಿಖೆಗೆ ಆದೇಶ

ಮಲೆಮಹದೇಶ್ವರ ತಪ್ಪಲಿನಲ್ಲಿ 5 ಹುಲಿಗಳ ಸಾವು, ವಿಷ ಹಾಕಿ ಕೊಂದರಾ ದುರುಳರು? ತನಿಖೆಗೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ 5 ಹುಲಿಗಳು ಸಾವನ್ನಪ್ಪಿವೆ. ತಾಯಿ ಹುಲಿ ಸೇರಿ ನಾಲ್ಕು ಹುಲಿ ಮರಿಗಳಿಗೆ ವಿಷ ಹಾಕಿ ಕೊಲ್ಲಲಾಗಿದ್ಯಾ ಎಂಬ ಅನುಮಾನ ಮೂಡಿದ್ದು, ತನಿಖೆಗೆ ಆದೇಶಿಸಲಾಗಿದೆ.

ಮಲೆಮಹದೇಶ್ವರ ತಪ್ಪಲಿನಲ್ಲಿ 5 ಹುಲಿಗಳ ಸಾವು, ವಿಷ ಹಾಕಿ ಕೊಂದರಾ ದುರುಳರು? ತನಿಖೆಗೆ ಆದೇಶ
ಮಲೆಮಹದೇಶ್ವರ ತಪ್ಪಲಿನಲ್ಲಿ 5 ಹುಲಿಗಳ ಸಾವು, ವಿಷ ಹಾಕಿ ಕೊಂದರಾ ದುರುಳರು? ತನಿಖೆಗೆ ಆದೇಶ

ಚಾಮರಾಜನಗರ: ಇಲ್ಲಿನ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ 5 ಹುಲಿಗಳು ಸಾವನ್ನಪ್ಪಿವೆ. ತಾಯಿ ಹುಲಿ ಸೇರಿ ನಾಲ್ಕು ಹುಲಿ ಮರಿಗಳಿಗೆ ವಿಷ ಹಾಕಿ ಕೊಲ್ಲಲಾಗಿದ್ಯಾ ಎಂಬ ಅನುಮಾನ ಮೂಡಿದ್ದು, ಈ ಘಟನೆ ಸಂಬಂಧ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂನಲ್ಲಿ ಈ ಘಟನೆ ನಡೆದಿದೆ. ಬುಧವಾರದಂದು ಹುಲಿಗಳ ಮೃತದೇಹಗಳು ಅರಣ್ಯ ಇಲಾಖೆಯ ಕಣ್ಣಿಗೆ ಬಿದ್ದಿದ್ದು, ವಿಷಪ್ರಾಶನದಿಂದ ಹುಲಿಗಳು ಸಾವನ್ನಪ್ಪಿರಬಹುದೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಚಿವ ಈಶ್ವರ್‌ ಖಂಡ್ರೆ, "ಮಲೆ ಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು ತೀವ್ರ ದುಃಖಕರ. PCCF ನೇತೃತ್ವದ ತನಿಖಾ ತಂಡ ರಚಿಸಿ, 3 ದಿನಗಳಲ್ಲಿ ವರದಿ ಕೋರಲಾಗಿದೆ. ನಿರ್ಲಕ್ಷ್ಯವಿದ್ದರೆ ಅಥವಾ ಯಾವುದೇ ಕಾರಣಕ್ಕಾಗಿಯೂ ಹುಲಿಗಳು ಸಾವಿಗೀಡಾಗಿದ್ದರೆ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕ್ರಮಕ್ಕೆ ಆದೇಶ ನೀಡಲಾಗಿದೆ" ಎಂದಿದ್ದಾರೆ.

ತನಿಖೆಗೆ ಆದೇಶ

"ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾಗಾಂಧೀ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದ್ದು, 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ"

ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ (ಪಿಸಿಸಿಎಫ್‌) ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಮತ್ತು 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ" ಎಂದಿದ್ದಾರೆ.