Laxman Savadi: ಲಕ್ಷ್ಮಣ ಸವದಿ ಕಾರು ಪಲ್ಟಿ: ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಮಾಜಿ ಡಿಸಿಎಂ!
ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರ ಕಾರು ಪಲ್ಟಿಯಾಗಿದ್ದು, ಕೂದಲೆಳೆ ಅಂತರದಲ್ಲಿ ಬಿಜೆಪಿ ನಾಯಕ ಅಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಹಾರೂಗೇರಿ ಕ್ರಾಸ್ ಬಳಿ ಸವದಿ ಸಂಚರಿಸುತ್ತಿದ್ದ ಕಾರು ಪಲ್ಟಿಯಾಗಿದ್ದು, ಸವದಿ ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಮೂಲಗಳು ಖಚಿತಪಡಿಸಿವೆ.
ಬೆಳಗಾವಿ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರ ಕಾರು ಪಲ್ಟಿಯಾಗಿದ್ದು, ಕೂದಲೆಳೆ ಅಂತರದಲ್ಲಿ ಬಿಜೆಪಿ ನಾಯಕ ಅಪಾಯದಿಂದ ಪಾರಾಗಿದ್ದಾರೆ.
ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಹಾರೂಗೇರಿ ಕ್ರಾಸ್ ಬಳಿ ಸವದಿ ಸಂಚರಿಸುತ್ತಿದ್ದ ಕಾರು ಪಲ್ಟಿಯಾಗಿದ್ದು, ಸವದಿ ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಮೂಲಗಳು ಖಚಿತಪಡಿಸಿವೆ. ಸಣ್ಣಪುಟ್ಟ ಗಾಯಗಳನ್ನು ಹೊರತುಪಡಿಸಿದರೆ ಸವದಿ ಅವರು ಸುರಕ್ಷಿತವಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಲಾಗಿದೆ.
ಇಂದು (ಆ.31-ಬುಧವಾರ) ಮಧ್ಯಾಹ್ನ ಅವದಿ ಅವರು ಅಥಣಿಯಿಂದ ಗೋಕಾಕ್ ಮಾರ್ಗವಾಗಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಹಾರೋಗೇರಿ ಕ್ರಾಸ್ ಬಳಿ ಇರುವ ಏಕಲವ್ಯ ಕಾಲೇಜು ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ರಸ್ತೆ ಮಧ್ಯೆ ಬೈಕ್ ಸವಾರರು ಏಕಾಏಕಿ ಎದುರಿಗೆ ಬಂದಾಗ, ಅಪಘಾತ ತಪ್ಪಿಸಲು ಕಾರು ಚಾಲಕ ಮುಂದಾಗಿದ್ದಾನೆ. ಕಾರು ರಸ್ತೆ ಪಕ್ಷ ಚಲಿಸುತ್ತಿದ್ದಂತೇ, ಚಾಲಕನ ನಿಯಂತ್ರಣ ತಪ್ಪಿ, ಘಟಪ್ರಭಾ ಎಡದಂಡೆ ಕಾಲುವೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ.
ಘಟನೆಯಲ್ಲಿ ಸವದಿ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಯಾವುದೇ ರೀತಿಯ ಗಂಭೀರ ಸ್ವರೂಪದ ಗಾಯಗಳಾಗಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಸ್ಥಳೀಯರ ಸಹಾಯದಿಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಕಾರ್ ಚಾಲಕನನ್ನು ಅಪಫಾತಕ್ಕೀಡಾದ ಕಾರಿನಿಂದ ಹೊರಗೆ ಸುರಕ್ಷಿತವಾಗಿ ತೆಗೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.