ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಸಾಹಿತಿ, ವಿಮರ್ಶಕ ಜಿಎಸ್‌ ಸಿದ್ದಲಿಂಗಯ್ಯ ನಿಧನ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಸಾಹಿತಿ, ವಿಮರ್ಶಕ ಜಿಎಸ್‌ ಸಿದ್ದಲಿಂಗಯ್ಯ ನಿಧನ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಸಾಹಿತಿ, ವಿಮರ್ಶಕ ಜಿಎಸ್‌ ಸಿದ್ದಲಿಂಗಯ್ಯ ನಿಧನ

ಜಿಎಸ್‌ ಸಿದ್ದಲಿಂಗಯ್ಯ ನಿಧನ: ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ, ಸಾಹಿತಿ, ವಿಮರ್ಶಕ ಜಿಎಸ್‌ ಸಿದ್ದಲಿಂಗಯ್ಯ ಅವರು ಇಂದು ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಸಾಹಿತಿ, ವಿಮರ್ಶಕ ಜಿಎಸ್‌ ಸಿದ್ದಲಿಂಗಯ್ಯ ಇಂದು (ಮೇ 7) ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಸಾಹಿತಿ, ವಿಮರ್ಶಕ ಜಿಎಸ್‌ ಸಿದ್ದಲಿಂಗಯ್ಯ ಇಂದು (ಮೇ 7) ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಜಿಎಸ್‌ ಸಿದ್ದಲಿಂಗಯ್ಯ ನಿಧನ: ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕ್ರೀಯಾಶೀಲವಾಗಿ ಸೇವೆ ಸಲ್ಲಿಸಿದ್ದ ತುಮಕೂರು ಮೂಲದ ಜಿ ಎಸ್ ಸಿದ್ದಲಿಂಗಯ್ಯ(94) ಅವರು ಇಂದು ಬೆಂಗಳೂರು ವಿಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ತುಮಕೂರು ಜಿಲ್ಲೆ ಬೆಳ್ಳಾವಿ ಮೂಲದವರಾದ ಜಿಎಸ್‌ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು. ಕುವೆಂಪು ಅವರ ನೆಚ್ಚಿನ ಶಿಷ್ಯರ ಪೈಕಿ ಒಬ್ಬರಾಗಿದ್ದ ಜಿಎಸ್ ಸಿದ್ದಲಿಂಗಯ್ಯ ನಿಧನಕ್ಕೆ ಕನ್ನಡ ಸಾರಸ್ವತ ಲೋಕ ಕಂಬನಿ ಮಿಡಿದಿದೆ. ಮೃತರು ಪತ್ನಿಯನ್ನು ಅಗಲಿದ್ದಾರೆ. ಇಂದು (ಮೇ 7) ಅಪರಾಹ್ನ 3 ಗಂಟೆಗೆ ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಜಿಎಸ್ ಸಿದ್ದಲಿಂಗಯ್ಯ ಬದುಕಿನ ಪಥ

ಜಿಎಸ್ ಸಿದ್ದಲಿಂಗಯ್ಯ ಅವರು 1931ರಲ್ಲಿ ತುಮಕೂರು ಜಿಲ್ಲೆಯ ಬೆಳ್ಳಾವಿಯಲ್ಲಿ ಜನಿಸಿದರು. ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿ ಬದುಕು ಶುರುಮಾಡಿದ ಅವರು, ವಿವಿಧ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಸಾಹಿತ್ಯ ಕ್ಷೇತ್ರದ ಅವರ ಕೊಡುಗೆಗಳನ್ನು ಗಮನಿಸಿ ಅವರಿಗೆ ಸಾಹಿತ್ಯ ಅಕಾಡೆಮಿಯ ವಿಶೇಷ ಗೌರವ, ರಾಜ್ಯೋತ್ಸವ ಪ್ರಶಸ್ತಿ, ಬಸವ ಪ್ರಸಸ್ತಿ, ಮಾಸ್ತಿ ಪ್ರಸಸ್ತಿ ಸೇರಿ ಹಲವು ಪುರಸ್ಕಾರಗಳು ಸಿಕ್ಕಿದ್ದವು.

ಹಿರಿಯ ಕವಿ ಪ್ರೊ. ಜಿ ಎಸ್ ಸಿದ್ದಲಿಂಗಯ್ಯ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ

ಕನ್ನಡದ ಖ್ಯಾತ ಹಿರಿಯ ಕವಿ, ಶಿಕ್ಷಣ ತಜ್ಞ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿದ್ದ ಪ್ರೊ. ಜಿ ಎಸ್ ಸಿದ್ದಲಿಂಗಯ್ಯ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ಸಾಂಸ್ಕೃತಿಕ ಜಗತ್ತಿಗೆ ಕವಿ ಜಿ ಎಸ್ ಸಿದ್ದಲಿಂಗಯ್ಯ ಅವರ ಕೊಡುಗೆ ಗಮನಾರ್ಹವಾದದ್ದು. ಕನ್ನಡ ಸಾಹಿತ್ಯ ಪರಿಷತ್ತಿನ 17ನೇ ಅಧ್ಯಕ್ಷರಾಗಿ ಅವರು ಕೈಗೊಂಡ ಕೆಲಸಗಳು ಕನ್ನಡ ಸಾಹಿತ್ಯ ಪರಿಷತ್ತನ್ನು ಸದೃಢವಾಗಿ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದವು. ಸಾಹಿತ್ಯ ಪರಿಷತ್ತಿಗೆ ಒಂದು ನಿರ್ದಿಷ್ಟ ಧ್ವಜವನ್ನು ರೂಪಿಸುವಲ್ಲಿ ಅವರ ಪಾತ್ರ ಮಹತ್ವದ್ದು. ಆಡಳಿತಾತ್ಮಕವಾಗಿ, ಆರ್ಥಿಕವಾಗಿ ಪರಿಷತ್ತನ್ನು ಕಟ್ಟುವಲ್ಲಿ ಶ್ರಮಿಸಿದವರು ಜಿ ಎಸ್ ಸಿದ್ದಲಿಂಗಯ್ಯ. ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣೆಗಳಿಗೆ ವಿಶೇಷ ಗಮನ ಕೊಟ್ಟರು.

ಅವರು ಕವಿಯಾಗಿ ,ವಿಮರ್ಶಕ ರಾಗಿ, ಅನುವಾದಕರಾಗಿ ಕನ್ನಡ ಪುಸ್ತಕ ಲೋಕಕ್ಕೆ ಅನನ್ಯ ಕೊಡುಗೆ ಕೊಟ್ಟಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿಯು ಸೇರಿದಂತೆ ಅನೇಕ ಪ್ರತಿಷ್ಠಿತ ಗೌರವ ಪ್ರಶಸ್ತಿಗಳಿಗೆ ಭಾಜನರಾಗಿದ್ದ ಕವಿ ಜಿ ಎಸ್ ಸಿದ್ದಲಿಂಗಯ್ಯ ಅವರ ನಿಧನದಿಂದ ಕನ್ನಡ ಸಾರಸ್ಪತ ಲೋಕ ಒಂದು ಅದ್ಭುತ ಚೇತನವನ್ನು ಕಳೆದುಕೊಂಡಿದೆ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.