KS Eshwarappa: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ರಿಲೀಫ್; ಬಿ ರಿಪೋರ್ಟ್ ಅಂಗೀಕರಿಸಿದ ಕೋರ್ಟ್​
ಕನ್ನಡ ಸುದ್ದಿ  /  ಕರ್ನಾಟಕ  /  Ks Eshwarappa: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ರಿಲೀಫ್; ಬಿ ರಿಪೋರ್ಟ್ ಅಂಗೀಕರಿಸಿದ ಕೋರ್ಟ್​

KS Eshwarappa: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ರಿಲೀಫ್; ಬಿ ರಿಪೋರ್ಟ್ ಅಂಗೀಕರಿಸಿದ ಕೋರ್ಟ್​

Contractor santosh patil suicide case: 2022ರ ಏಪ್ರಿಲ್ 11 ರಂದು ಉಡುಪಿಯ ಲಾಡ್ಜ್​ನಲ್ಲಿ ಗುತ್ತಿಗೆದಾರ ಸಂತೋಷ್​ ಪಾಟೀಲ್ ಈಶ್ವರಪ್ಪರ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಇದರಿಂದಾಗಿ ಅಂದಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಈಶ್ವರಪ್ಪ ಅವರು ಸಂಪುಟಕ್ಕೆ ರಾಜೀನಾಮೆ ನೀಡಿದ್ದರು.

ಮಾಜಿ ಸಚಿವ ಕೆಎಸ್ ಈಶ್ವರಪ್ಪ
ಮಾಜಿ ಸಚಿವ ಕೆಎಸ್ ಈಶ್ವರಪ್ಪ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯವು ಬಿ ರಿಪೋರ್ಟ್ (ಸಾಕ್ಷ್ಯದ ಕೊರತೆಯಿಂದ ಮುಚ್ಚುವ ವರದಿ) ಅಂಗೀಕರಿಸಿದೆ.

2022ರ ಏಪ್ರಿಲ್ 11 ರಂದು ಉಡುಪಿಯ ಲಾಡ್ಜ್​ನಲ್ಲಿ ಗುತ್ತಿಗೆದಾರ ಸಂತೋಷ್​ ಪಾಟೀಲ್ ಈಶ್ವರಪ್ಪರ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಇದರಿಂದಾಗಿ ಅಂದಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಈಶ್ವರಪ್ಪ ಅವರು ಸಂಪುಟಕ್ಕೆ ರಾಜೀನಾಮೆ ನೀಡಿದ್ದರು.

ಕೆ.ಎಸ್.ಈಶ್ವರಪ್ಪ ವಿರುದ್ಧ 40 ಪರ್ಸೆಂಟ್​ ಕಮಿಷನ್​ ಆರೋಪ ಮಾಡಲಾಗಿತ್ತು. ಕಾಮಗಾರಿ ನಡೆಸಿದ ಸಂಬಂಧ ಸರ್ಕಾರದಿಂದ ಬಿಲ್ ಮಂಜೂರು ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಅವರು ಶೇ.40ರಷ್ಟು ಕಮೀಷನ್ ಕೇಳಿದ್ದರು ಎಂದು ಮೃತ ಸಂತೋಷ್ ಪಾಟೀಲ್​​ ಆರೋಪಿಸಿದ್ದರು. ಇದರಿಂದ ಹಿಂದಿನ ಬಿಜೆಪಿ ಸರ್ಕಾರಕ್ಕೆ 40 ಪರ್ಸೆಂಟ್​ ಕಮಿಷನ್ ಸರ್ಕಾರ ಎಂದು ಪ್ರತಿಪಕ್ಷಗಳು ಟೀಕಿಸಲು ಶುರುಮಾಡಿದ್ದವು.

ಪ್ರಕರಣ ಸಂಬಂಧ ಎಸ್​ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ತನಿಖೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ ಸಾಕ್ಷ್ಯಗಳೇ ಇಲ್ಲ ಎಂದು ಅಂತಿಮ ವರದಿಯಲ್ಲಿ ಉಡುಪಿ ಪೊಲೀಸರು ಉಲ್ಲೇಖಿಸಿದ್ದರು.

ಆದರೆ ಇದನ್ನು ಪ್ರಶ್ನಿಸಿ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಸ್ಥರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಬೆಂಗಳೂರಿನ ವಿಶೇಷ ಜನಪ್ರತಿನಿಧಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಸಂತೋಷ್ ಪಾಟೀಲ್ ಅಹೋದರ ಪ್ರಶಾತ್ ಪಾಟೀಲ್, ರಾಜಕೀಯ ಪ್ರಭಾವಕ್ಕೆ ಒಳಗಾಗಿ ಎಸ್‌ಐಟಿ ಅಧಿಕಾರಿಗಳು ಬಿ-ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದರು. ಇಂದು (ಜುಲೈ 15, ಶನಿವಾರ) ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ.

Whats_app_banner