ಕನ್ನಡ ಸುದ್ದಿ / ಕರ್ನಾಟಕ /
Chennamma Health: ಎಚ್ಡಿ ದೇವೇಗೌಡ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದೌಡಾಯಿಸಿದ ಹೆಚ್ಡಿ ಕುಮಾರಸ್ವಾಮಿ
HD Devegowda Wife: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರಿಗೆ ಆರೋಗ್ಯ ಹದಗೆಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಚ್ಡಿ ದೇವೇಗೌಡ ಅವರೊಂದಿಗೆ ಪತ್ನಿ ಚೆನ್ನಮ್ಮ (Mysuru Online Facebookl)
ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಎಚ್ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪುತ್ರ, ಕೇಂದ್ರ ಸಚಿವ ಕುಮಾರಸ್ವಾಮಿ ಸೇರಿದಂತೆ ಅವರ ಕುಟುಂಬದ ಸದಸ್ಯರು ಆಸ್ಪತ್ರೆಗೆ ಆಗಮಿಸಿದ್ದಾರೆ. ಹೆಚ್ಡಿಕೆ ಅವರು ಮಹತ್ವದ ಸಭೆಯೊಂದನ್ನು ರದ್ದುಪಡಿಸಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ ಎಂದು ವರದಿಯಾಗಿದೆ. ಹಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.