ಕನ್ನಡ ಸುದ್ದಿ  /  ಕರ್ನಾಟಕ  /  ಕೈಮಗ್ಗ ಜವಳಿ ತಂತ್ರಜ್ಞಾನ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಪ್ರವೇಶ, ಯಾರಿಗೆ ಉಂಟು ಅವಕಾಶ

ಕೈಮಗ್ಗ ಜವಳಿ ತಂತ್ರಜ್ಞಾನ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಪ್ರವೇಶ, ಯಾರಿಗೆ ಉಂಟು ಅವಕಾಶ

ಗದಗದಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ ಡಿಪ್ಲೊಮಾ ಶಿಕ್ಷಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ
ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ

ಮೈಸೂರು: 2024-25ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 02 ನೇ ವರ್ಷದ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಪ್ರವೇಶಕ್ಕಾಗಿ 32 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವ್ಯಾಸಂಗದ ಸಮಯದಲ್ಲಿ ಪ್ರತಿ ತಿಂಗಳು 2,500 ರೂ. ಶಿಷ್ಯವೇತನ ನೀಡಲಾಗುವುದು ಹಾಗೂ ಆಯ್ಕೆಯಾದ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಗದಗ ಜಿಲ್ಲಾ ಪಂಚಾಯತ್ ನ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ವಿದ್ಯಾರ್ಹತೆ: ಗಣಿತ, ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದೊಂದಿಗೆ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಯಾವುದೇ ಜವಳಿ ವಿಭಾಗದ ವೃತ್ತಿಪರ ವಿಭಾಗದಲ್ಲಿ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ 10ನೇ ತರಗತಿ ತೇರ್ಗಡೆ (2 ವರ್ಷಗಳ ಐಟಿಐ) ತೇರ್ಗಡೆ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್‌ಗೆ ಪ್ರವೇಶಕ್ಕೆ ಅರ್ಹರಾಗಿರುತ್ತಾರೆ.

ಅಥವಾ 12 ನೇ ತರಗತಿ ಪಾಸ್ (2 ವರ್ಷಗಳ ಐಟಿಐ) ತೇರ್ಗಡೆ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್‌ಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜುಲೈ 01,2024 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ 25 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವಯೋಮಿತಿ 27 ವರ್ಷ ಆಗಿರಬೇಕು.

ಈಗಷ್ಟೇ ಪಿಯುಸಿ ಮುಗಿಸಿ ಈ ಕೋರ್ಸ್‌ನಲ್ಲಿ ಆಸಕ್ತಿ ಹೊಂದಿರುವವರೂ ಸೇರಲು ಅವಕಾಶವಿದೆ.

ಈ ನಿಯಮದಡಿ ವಯೋಮಿತಿ ಹಾಗೂ ಶೈಕ್ಷಣಿಕ ಹಿನ್ನಲೆ ಹೊಂದಿರುವವರು ಡಿಪ್ಲೊಮಾ ಸೇರಲು ಅರ್ಹರಾಗಿತ್ತಾರೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು https://khtigadag.ac.in/Lateralentryadmissionform.pdf ಲಿಂಕ್ ಮೂಲಕ ಆನ್ಲೈನ್ ನಲ್ಲಿ ಡೌನಲೊಡ್ ಮಾಡಿಕೊಂಡು, ಪೂರ್ಣವಾಗಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಗದಗ ಜಿಲ್ಲೆಯ ಬೆಟಗೇರಿಯ ನರಸಾಪೂರದಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯ ಪಾಂಶುಪಾಲರ ಕಚೇರಿಗೆ ಮೇ.31 ರೊಳಗಾಗಿ ಸಲ್ಲಿಸಬಹುದು.

ಇಲ್ಲಿ ತರಬೇತಿ ಪಡೆದವರು ಕೈಮಗ್ಗ ಹಾಗೂ ಜವಳಿ ಇಲಾಖೆ ಮೂಲಕ ನೆರವು ಪಡೆದು ಸ್ವ ಉದ್ಯೋಗವನ್ನು ಆರಂಭಿಸಬಹುದು. ಇಲ್ಲವೇ ಜವಳಿ ಸಂಸ್ಥೆಗಳಲ್ಲ ಉದ್ಯೋಗಕ್ಕೂ ಸೇರಲು ಅವಕಾಶವಿದೆ. ಡಿಪ್ಲೊಮಾ ಕೋರ್ಸ್‌ ಮುಗಿಸಿದ ಹಲವರಿಗೆ ಉದ್ಯೋಗ ಕೂಡ ದೊರೆತಿದೆ. ಹಲವರು ಸ್ವ ಉದ್ಯೋಗವನ್ನು ತಮ್ಮ ಊರುಗಳಲ್ಲಿ ಆರಂಭಿಸಿ ಯಶಸ್ವಿ ಕೂಡ ಆಗಿದ್ದಾರೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಗದಗ ಜಿಲ್ಲೆಯ ಬೆಟಗೇರಿಯ ನರಸಾಪೂರದಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯ ಪಾಂಶುಪಾಲರ ದೂ.ಸಂ.08372-297221, 944162822 ಅಥವಾ ಸಯ್ಯಾಜಿರಾವ್ ರಸ್ತೆಯಲ್ಲಿರುವ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ದೂ. ಸಂ. 0821-2441353 ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.

(This copy first appeared in Hindustan Times Kannada website. To read more like this please logon to kannada.hindustantimes.com)

IPL_Entry_Point

ವಿಭಾಗ