Dakshina Kannada News:ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿ ಮೇಲೆ ಶಾಲಾ ಕೊಠಡಿಯೊಳಗೆ ಅತ್ಯಾಚಾರ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಮುಕನ ಬಂಧನ
ಕನ್ನಡ ಸುದ್ದಿ  /  ಕರ್ನಾಟಕ  /  Dakshina Kannada News:ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿ ಮೇಲೆ ಶಾಲಾ ಕೊಠಡಿಯೊಳಗೆ ಅತ್ಯಾಚಾರ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಮುಕನ ಬಂಧನ

Dakshina Kannada News:ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿ ಮೇಲೆ ಶಾಲಾ ಕೊಠಡಿಯೊಳಗೆ ಅತ್ಯಾಚಾರ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಮುಕನ ಬಂಧನ

Dakshina Kannada News ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿಯನ್ನು ಎಳೆದೊಯ್ದು ಶಾಲೆಯ ಕೊಠಡಿಯಲ್ಲಿ ಅತ್ಯಾಚಾರ ವೆಸಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ವ್ಯಕ್ತಿಯನ್ನು ಬಂಧಿಸಲಾಗಿದೆವರದಿ: ಹರೀಶ ಮಾಂಬಾಡಿ. ಮಂಗಳೂರು

ದಕ್ಷಿಣ ಜಿಲ್ಲೆಯಲ್ಲಿ ಶಾಲೆಯಲ್ಲಿ ಅತ್ಯಾಚಾರವೆಸಗಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
ದಕ್ಷಿಣ ಜಿಲ್ಲೆಯಲ್ಲಿ ಶಾಲೆಯಲ್ಲಿ ಅತ್ಯಾಚಾರವೆಸಗಿದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಮಂಗಳೂರು: ಶಾಲಾ ವಾರ್ಷಿಕೋತ್ಸವಕ್ಕೆಂದು ಬಂದಿದ್ದ ಯುವತಿಯನ್ನು ಕಾಮುಕನೋರ್ವನು ಶಾಲಾ ಕೊಠಡಿಯಲ್ಲಿಯೇ ಕೂಡಿಹಾಕಿ ಬಲವಂತದಿಂದ ಅತ್ಯಾಚಾರ ‌ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲ್ಲೂಕಿನ ನಿವಾಸಿ ಜಯಂತ ಬಂಧಿತ ಕಾಮುಕ. ಕಳೆದ ವಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವಿತ್ತು. ಅಂದು ಕಾರ್ಯಕ್ರಮ ನೋಡಲು ಮನೆಯವರೊಂದಿಗೆ ಯುವತಿ ಶಾಲೆಗೆ ಬಂದಿದ್ದಳು. ಈ ವೇಳೆ ಆರೋಪಿ ಜಯಂತ ಶಾಲಾ ಕೊಠಡಿಯಲ್ಲಿ ಯುವತಿಯನ್ನು ಕೂಡಿ ಹಾಕಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿದ್ದಾನೆ. ಆಕೆ ರಕ್ಷಣೆಗೆ ಕೂಗಿಕೊಂಡರೂ ಬಿಟ್ಟಿರಲಿಲ್ಲ. ಈ ಬಗ್ಗೆ ಯುವತಿಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಳು.

ಪ್ರಕರಣ ದಾಖಲಿಸಿಕೊಂಡ ಬಂಟ್ವಾಳ ಗ್ರಾಮಾಂತರ ಎಸ್.ಐ. ಹರೀಶ್ ಹಾಗೂ ಪೋಲೀಸ್ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿ ಈಗ ಜೈಲು ಸೇರಿದ್ದಾನೆ.

ಯುವತಿ ಮೇಲೆ ಅತ್ಯಾಚಾರವೆಸಗಿದ ಕುರಿತು ದೂರು ಬಂದಿತ್ತು. ಕೂಡಲೇ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿತ್ತು. ಮೇಲ್ನೋಟಕ್ಕೆ ಆರೋಪ ನಿಜ ಎನ್ನಿಸಿದ್ದರಿಂದ ಆರೋಪಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಆತನ ಹೇಳಿಕೆ, ಸ್ಥಳೀಯ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಪ್ರಕರಣದ ತನಿಖೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Whats_app_banner