Traffic fine rebate: ಕರ್ನಾಟಕ ವಾಹನ ಸವಾರರಿಗೆ ಗುಡ್ನ್ಯೂಸ್; ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ 50ರಷ್ಟು ರಿಯಾಯಿತಿ
Karnataka traffic fines: ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇಕಡಾ 50ರಷ್ಟು ರಿಯಾಯಿತಿ ನೀಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು: ವಾಹನ ಸವಾರರಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇಕಡಾ 50ರಷ್ಟು ರಿಯಾಯಿತಿ ನೀಡಿ ಆದೇಶ ಹೊರಡಿಸಿದೆ.
2023ರ ಫೆಬ್ರವರಿ 11 ರ ಒಳಗೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರ ರಿಯಾಯಿತಿ ನೀಡಿ ಆದೇಶಿಸಲಾಗಿದೆ.
ಈ ಹಿಂದೆ 2023ರ ಫೆಬ್ರವರಿ 11 ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಸಂಚಾರಿ ಇಲಾಖೆಯ -ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿತ್ತು.
ಆದರೆ ಈಗ 2023ರ ಫೆಬ್ರವರಿ 11 ರ ಒಳಗೆ ದಾಖಲಾಗಿರುವ ಕೇಸ್ಗಳಿಗೂ ಮತ್ತೊಂದು ಬಾರಿಗೆ ಇದೂ ಅನ್ವಯಿಸುವಂತೆ ಆದೇಶ ನೀಡಲಾಗಿದೆ. ಆದರೆ ಈ ರಿಯಾಯಿತಿಯು ದಿನಾಂಕ 09.09.2023ರವರೆಗೆ (ಸೆಪ್ಟೆಂಬರ್ 9) ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
"ಬೆಂಗಳೂರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು, ಹೈಕೋರ್ಟ್ ನ್ಯಾಯಾಧೀಶರು ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಅಧ್ಯಕ್ಷತೆಯಲ್ಲಿ ದಿನಾಂಕ:14.06.2023 ರಂದು ನಡೆದ ಸಭೆಯ ನಿರ್ಣಯದಂತೆ, ದಿನಾಂಕ:11.02.2023ರೊಳಗಿನ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಪೊಲೀಸ್ ಇಲಾಖೆಯ ಸಂಚಾರಿ ಇಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಮ್ಮ ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:08.07.2023ರವರೆಗೆ ಕಾಲಾವಕಾಶ ನೀಡಿ ಆದೇಶ ಹೂರಡಿಸುವಂತೆ ಕೋರಿರುತ್ತಾರೆ.
ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ- ಚಲನ್ನಲ್ಲಿ ದಿನಾಂಕ:11.02.2023 ಲೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ.ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ" ಎಂದು ಆದೇಶ ಹೊರಡಿಸಲಾಗಿದೆ.
ವಿಭಾಗ