ಕನ್ನಡ ಸುದ್ದಿ  /  Karnataka  /  Gruha Lakshmi Guarantee Scheme Guidelines Details About Application Process Implementation Mechanism News In Kannada Kub

Congress Guarantees: ಗೃಹಲಕ್ಷ್ಮಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ; ಮನೆಯೊಡತಿ ಯಾರು, ಫಲಾನುಭವಿಯಾಗಲು ಅರ್ಹತೆ ಏನು, ಅರ್ಜಿ ಸಲ್ಲಿಕೆ ಹೇಗೆ

ಕಾಂಗ್ರೆಸ್‌ ಪಕ್ಷವು ಕರ್ನಾಟಕ ವಿಧಾನಸಭೆ ವೇಳೆ ಐದು ಗ್ಯಾರಂಟಿಯನ್ನು ಘೋಷಿಸಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದ್ದು, ಐದೂ ಘೋಷಣೆಗಳನ್ನೂ ಪ್ರಕಟಿಸಲಾಗಿದೆ. ಒಂದೊಂದೇ ಯೋಜನೆಯ ಮಾನದಂಡಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಇದರಲ್ಲಿ ಗೃಹಲಕ್ಷ್ಮಿಯೋಜನೆಯೂ ಒಂದು.

ಚುನಾವಣೆಗೂ ಮುನ್ನ ಕಾಂಗ್ರೆಸ್‌ ಬಿಡುಗಡೆ ಮಾಡಿದ್ದ ಗೃಹಲಕ್ಷ್ಮಿ ಗ್ಯಾರಂಟಿ ಕಾರ್ಡ್‌
ಚುನಾವಣೆಗೂ ಮುನ್ನ ಕಾಂಗ್ರೆಸ್‌ ಬಿಡುಗಡೆ ಮಾಡಿದ್ದ ಗೃಹಲಕ್ಷ್ಮಿ ಗ್ಯಾರಂಟಿ ಕಾರ್ಡ್‌

ಬೆಂಗಳೂರು: ನೀವು ಪಡೆದಿರುವ ಪಡಿತರ ಕಾರ್ಡ್‌ನಲ್ಲಿ ನಿಮ್ಮ ಹೆಸರಿನೊಂದಿಗೆ ಯಜಮಾನಿ ಎನ್ನುವ ಉಲ್ಲೇಖವಿದೆಯೇ? ಹಾಗಿದ್ದರೆ ಕರ್ನಾಟಕ ಸರ್ಕಾರ ಘೋಷಿಸಿರುವ ಗೃಹ ಲಕ್ಷ್ಮಿ ಯೋಜನೆಗೆ ನೀವು ಅರ್ಹರು.

ಆದರೆ ಅರ್ಜಿ ಸಲ್ಲಿಸುವಾಗ ತಪ್ಪು ಮಾಹಿತಿ ನೀಡಿ ಸಿಕ್ಕಿ ಬಿದ್ದರೆ ಗೃಹಲಕ್ಷ್ಮಿ ನೆರವನ್ನು ವಾಪಾಸ್‌ ಪಡೆಯುವ ಜತೆಗೆ ಶಿಕ್ಷೆಗೆ ಗುರಿಯಾಗುವ ಸಾಧ್ಯತೆಯೂ ಇದೆ ಹುಷಾರು.

ರಾಜ್ಯ ಸರ್ಕಾರ ಕಳೆದ ವಾರ ಘೋಷಿಸಿದ್ದ ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಆಯ್ಕೆಯ ಮಾನದಂಡಗಳನ್ನು ಪ್ರಕಟಿಸಲಾಗಿದ್ದು, ಯಜಮಾನಿ ಅಥವಾ ಮನೆಯೊಡತಿ ಯಾರು ಎನ್ನುವುದನ್ನು ಸ್ಪಷ್ಟವಾಗಿ ತಿಳಿಸಲಾಗಿದೆ.

ಎರಡು ತಿಂಗಳ ಕಾಲ ಫಲಾನುಭವಿಗಳ ಅರ್ಜಿ ನೊಂದಣಿ, ಪರಿಶೀಲನೆ ಕಾರ್ಯ ನಡೆಯಲಿದ್ದು, ಆಗಸ್ಟ್‌ 15ರಿಂದ ಅರ್ಹರಿಗೆ ಗೃಹಲಕ್ಷ್ಮಿ ನೆರವು ಸಿಗಲಿದೆ.

ಅಲ್ಲದೇ ಫಲಾನುಭವಿಗಳು ಯಾರು, ಆಯ್ಕೆಗೆ ಬೇಕಾಗಿರುವ ದಾಖಲೆ, ಅರ್ಜಿ ಸಲ್ಲಿಸುವ ಮಾರ್ಗಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ರಾಜ್ಯದ ಮಹಿಳೆಯ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಕುಟುಂಬದ ಆರ್ಥಿಕ ನಿರ್ವಹಣೆಯಲ್ಲಿ ಮನೆ ಯಜಮಾನಿಯ ಪಾತ್ರ ಪ್ರಮುಖವಾದದ್ದು. ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆಯು ಉತ್ತವಾಗಿರುತ್ತದೆ. ಇದರಿಂದ ಮನೆಯೊಡತಿಗೆ 2000 ರೂ. ನೀಡುವ ಗೃಹ ಲಕ್ಷ್ಮಿ ಯೋಜನೆ ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನ ರು ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಅಧೀನ ಕಾರ್ಯದರ್ಶಿ ನಿರ್ಮಲಾ ಖಟಾವ್‌ಕರ್‌ ತಿಳಿಸಿದ್ದಾರೆ.

ಕಾಂಗ್ರೆಸ್‌ ಪಕ್ಷವು ಕರ್ನಾಟಕ ವಿಧಾನಸಭೆ ವೇಳೆ ಐದು ಗ್ಯಾರಂಟಿಯನ್ನು ಘೋಷಿಸಿತ್ತು. ಬಹುಮತ ಪಡೆದು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದ್ದು, ಈಗಾಗಲೇ ಐದೂ ಘೋಷಣೆಗಳನ್ನೂ ಪ್ರಕಟಿಸಲಾಗಿದೆ. ಒಂದೊಂದೇ ಯೋಜನೆಯ ಮಾನದಂಡಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಇದರಲ್ಲಿ ಗೃಹಲಕ್ಷ್ಮಿಯೋಜನೆಯೂ ಒಂದು. ಈಗಾಗಲೇ ಜೂನ್‌ 11ರಿಂದ ಮಹಿಳೆಯರಿಗೆ ಉಚಿತ್‌ ಬಸ್‌ ಸಾರಿಗೆ ಸೇವೆ ಜಾರಿಗೆ ಬರುತ್ತಿದೆ. ಉಳಿದ ಗ್ಯಾರಂಟಿಗಳೂ ಜಾರಿಯಾಗುತ್ತಿವೆ.

ಮಾನದಂಡ, ಸೂಚನೆಗಳೇನು? ಇಲ್ಲಿದೆ ಡಿಟೈಲ್ಸ್

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ನೀಡುವ ಅಂತ್ಯೋದಯ, ಬಿಪಿಎಲ್‌ ಹಾಗೂ ಎಪಿಎಲ್‌ ಕಾರ್ಡ್‌ನಲ್ಲಿ ಕುಟುಂಬದ ಯಜಮಾನಿ ಎಂದು ಉಲ್ಲೇಖಿಸಿರುವ ಮಹಿಳೆ ಅರ್ಹ ಫಲಾನುಭವಿಯಾಗಿರುತ್ತಾರೆ.

ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರು ಇದ್ದದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯವಾಗಲಿದೆ.

ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ ಮೂಲಕವಾಗಲಿ ಅಥವಾಗಿ ಭೌತಿಕವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ .

ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣದ ಅರ್ಜಿಯಲ್ಲಿನ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡಲಾಗುತ್ತದೆ.

ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್‌ ಖಾತೆ ಹಾಗೂ ಆಧಾರ್‌ ಕಾರ್ಡ್‌ಗಳನ್ನುಜೋಡಣೆ ಮಾಡುವುದು.

ತೆರಿಗೆ ಪಾವತಿದಾರರಿಗೆ ಅವಕಾಶವಿಲ್ಲ

ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದಲ್ಲಿ ಯೋಜನೆಗೆ ಅರ್ಹರಲ್ಲ. ಅಲ್ಲದೇ ಯಜಮಾನಿ ಅಥವಾ ಅವರ ಪತಿ ಜಿಎಸ್‌ಟಿ ರಿಟರ್ನ್ಸ್‌ ಸಲ್ಲಿಸುತ್ತಿದ್ದರೂ ಯೋಜನೆಗೆ ಫಲಾನುಭವಿ ಆಗುವುದಿಲ್ಲ.

ಈ ಯೋಜನೆಯ ಫಲಾನುಭವಿಗಳು 2023ರ ಜೂನ್‌ 15ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಬೇಕು. ನಂತರ ಜುಲೈ 15ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್‌ 15ರಿಂದ ಅವರ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ.

ಇದನ್ನು ಗಮನಿಸಿ

ಅರ್ಜಿಯಲ್ಲಿನ ಆಂಶಗಳ ಬಗ್ಗೆ ತದನಂತರ ಪರಿಶೀಲನೆ ಮಾಡುವುದು, ತಪ್ಪು ಮಾಹಿತಿ ನೀಡಿರುವುದು ಕಂಡು ಬಂದಲ್ಲಿ ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡುವುದು ಹಾಗೂ ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

IPL_Entry_Point

ವಿಭಾಗ