Breaking News: ಜುಲೈ 14ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ಆರಂಭ ಸಾಧ್ಯತೆ
Gruhalakshmi Yojane: ಬಹು ನಿರೀಕ್ಷೆಯ ಗೃಹಲಕ್ಷ್ಮಿ ಯೋಜನೆಯ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಿದೆ. ಇದರ ಅರ್ಜಿ ಬಿಡುಗಡೆ ಜುಲೈ 14ಕ್ಕೆ ನಡೆಯುವ ಸಾಧ್ಯತೆ ಇದೆ.

ಬೆಂಗಳೂರು: ಕರ್ನಾಟಕದ ಜನತೆ ಕಾತರದಿಂದ ನಿರೀಕ್ಷಿಸುತ್ತಿರುವ ಗೃಹಲಕ್ಷ್ಮಿ ಯೋಜನೆ ಕುರಿತು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆಯಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.
ಟ್ರೆಂಡಿಂಗ್ ಸುದ್ದಿ
ಯೋಜನೆಯ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಕುರಿತು ಶೀಘ್ರದಲ್ಲಿಯೇ ಅಧಿಕೃತ ಹೇಳಿಕೆ ನೀಡಲಿದ್ದಾರೆ. ಜುಲೈ 14ರಿಂದ ಈ ಯೋಜನೆ ಆರಂಭವಾಗುವ ನಿರೀಕ್ಷೆಯಿದೆ. ಈ ಕುರಿತು ಚರ್ಚೆ ನಡೆದಿದೆ ಎಂದು ಅವರು ತಿಳಿಸಿದರು.
ಗೃಹಲಕ್ಷ್ಮಿ ವಿಚಾರವಾಗಿ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಕುರಿತು ಅಧಿಕೃತವಾಗಿ ನಿಮ್ಮ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಜುಲೈ 14ರಿಂದ ಗೃಹಲಕ್ಷ್ಮಿ ಆರಂಭಿಸಲು ಚರ್ಚೆಯಾಗಿದೆ. ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ವಿವರವಾದ ಕಾರ್ಯಕ್ರಮ ಪಟ್ಟಿ ಹೊರಬರಬಹುದು ಎಂದು ಮಾಹಿತಿ ನೀಡಿದರು. ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಕುರಿತು ಮುಖ್ಯಮಂತ್ರಿಯೊಂದಿಗೆ ಸಮಾಲೋಚನೆ ಮಾಡಿದ್ದಾರೆ. ಅವರೇ ಹೆಚ್ಚಿನ ವಿವರ ಒದಗಿಸುತ್ತಾರೆ ಎಂದು ತಿಳಿಸಿದರು.
ಪರಿಶಿಷ್ಟ ಜಾತಿ ಹಾಗೂ ಪಂಗಡವರಿಗೆ ಟೆಂಡರ್ ಮೂಲಕ ವಹಿಸಲಾದ ಕಾಮಗಾರಿಗಳ ಮೊತ್ತದ ಮಿತಿ 50 ಲಕ್ಷ ರೂಪಾಯಿ ಇತ್ತು. 2017-18ರ ಬಜೆಟ್‌ನಲ್ಲಿ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದರು. ಇದೀಗ ಈ ಮೊತ್ತವನ್ನು 1 ಕೋಟಿ ರೂಪಾಯಿ ಹೆಚ್ಚಿಸಲು ಪಾರದರ್ಶಕ ಅಧಿನಿಯಮಕ್ಕೆ ತಿದ್ದುಪಡಿ ಮಾಡಲು ಉದ್ದೇಶಿಸಲಾಗಿದೆ. ಇದನ್ನು ವಿಧಾನಸಭೆಯಲ್ಲಿ ಮಂಡಿಸುತ್ತೇವೆ ಎಂದು ಹೇಳಿದರು. ಕರ್ನಾಟಕ ರಸ್ತೆ ಸುರಕ್ಷತಾ ಪ್ರಾಧಿಕಾರ ಕಾಯ್ದೆಗೆ ತಿದ್ದುಪಡಿ ಮಾಡಲು ಉದ್ದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಪ್ರಾಧಿಕಾರದ ವ್ಯಾಪ್ತಿಗೆ ಬಿಬಿಎಂಪಿ ಕೂಡ ಸೇರಲಿದೆ ಎಂದು ಸಚಿವ ಪಾಟೀಲ ಹೇಳಿದರು.