CM Siddaramaiah: ಕಾಂಗ್ರೆಸ್ ಗ್ಯಾರಂಟಿಗಳನ್ನ ಜನರ ಮನೆ ಬಾಗಿಲಿಗೆ ತಲುಪಿಸಬೇಕು; ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಸಿಎಂ
ಕನ್ನಡ ಸುದ್ದಿ  /  ಕರ್ನಾಟಕ  /  Cm Siddaramaiah: ಕಾಂಗ್ರೆಸ್ ಗ್ಯಾರಂಟಿಗಳನ್ನ ಜನರ ಮನೆ ಬಾಗಿಲಿಗೆ ತಲುಪಿಸಬೇಕು; ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಸಿಎಂ

CM Siddaramaiah: ಕಾಂಗ್ರೆಸ್ ಗ್ಯಾರಂಟಿಗಳನ್ನ ಜನರ ಮನೆ ಬಾಗಿಲಿಗೆ ತಲುಪಿಸಬೇಕು; ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಸಿಎಂ

ಪದಗ್ರಹಣ ಆದ ಮರು ದಿನವೇ ನೂತನ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಹೊಸ ಜವಾಬ್ದಾರಿಯನ್ನು ನೀಡಿದ್ದಾರೆ. ಕೊಟ್ಟ ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದು, ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕಬೇಕೆಂಬುದು ಸೇರಿದಂತೆ ಕೆಲ ಟಾರ್ಗೆಟ್‌ಗಳನ್ನು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ನೂತನ ಸಚಿವರಿಗೆ ಹೊಸ ಜವಾಬ್ದಾರಿಯನ್ನು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ನೂತನ ಸಚಿವರಿಗೆ ಹೊಸ ಜವಾಬ್ದಾರಿಯನ್ನು ನೀಡಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ (CM Siddaramaiah Govt) ನೂತನ ಸಚಿವರ (Ministers) ಸರ್ಪೇಡೆಯಾಗಿದ್ದು, ಇದೀಗ ಚುನಾವಣಾ ಫಲಿತಾಂಶ ಪ್ರಕಟವಾದ 15 ದಿನಗಳ ಒಳಗೆ ಪೂರ್ಣ ಪ್ರಮಾಣದ ಸರ್ಕಾರ ಅಸ್ತಿತ್ವಕ್ಕೆ ಬಂದಂತಾಗಿದೆ.

ನೂತನ ಸಚಿವರು ನಿನ್ನೆ (ಮೇ 27, ಶನಿವಾರ) ಪ್ರಮಾಣ ವಚನ ಸ್ವೀಕರಿಸಿದ ಮರು ದಿನವೇ ಅಂದರೆ ಇಂದು ಸಿಎಂ ಸಿದ್ದರಾಮಯ್ಯ ಅವರು ಸಚಿವರಿಗೆ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಹೊಸ ಟಾರ್ಗೆಟ್ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಚಿವರಿಗೆ ನೀಡಿರುವ ಟಾರ್ಗೆಟ್ ಹೀಗಿದೆ

  • ಅಭೂತಪೂರ್ವ ಬಹುಮತದಿಂದ ಜನರು ನಮ್ಮನ್ನು ಗೆಲ್ಲಿಸಿ ಬಹಳ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಜನಪರ ಆಡಳಿತ ನೀಡಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ
  • ಜನರ ಸಮಸ್ಯೆಗಳನ್ನು ಕೇಳಿಸಿಕೊಳ್ಳಿ. ತಮ್ಮ ತಮ್ಮ ಕ್ಷೇತ್ರದಲ್ಲೇ ಸಮಸ್ಯೆ ಬಗೆಹರಿಸಲು ಬೇಕಾದ ಕ್ರಿಯಾಶೀಲತೆಯನ್ನು ರೂಢಿಸಿಕೊಳ್ಳಿ. ಸಣ್ಣ ಪುಟ್ಟ ಕೆಲಸಗಳಿಗೂ ಕ್ಷೇತ್ರದ ಜನ ಸರ್ಕಾರಿ ಕಚೇರಿಗಳಿಗೆ ಪದೇ ಪದೆ ಅಲೆಯುವುದನ್ನು ತಪ್ಪಿಸಿ.
  • ಜನರು ತಮ್ಮ ಕೆಲಸಗಳನ್ನು ಪೂರೈಸಿಕೊಳ್ಳಲು ಬಸ್ಸು, ರೈಲು ಹತ್ತಿಕೊಂಡು ವಿಧಾನಸೌಧಕ್ಕೆ ಬರುವ ಹೊರೆಯನ್ನು ತಪ್ಪಿಸಲು ಸೂಚನೆ
  • ಒಂದು ವರ್ಷದಲ್ಲಿ ಲೋಕಸಭಾ ಚುನಾವಣೆ ಬರಲಿದೆ. ನಾವು ಕನಿಷ್ಠ 20 ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತು ವರಿಷ್ಠರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರಿಗೆ ಉಡುಗೊರೆ ನೀಡಬೇಕು. ಈ ಗುರಿ ಇಟ್ಟುಕೊಂಡು ಶ್ರದ್ದೆ, ಪ್ರಾಮಾಣಿಕತೆ ಹಾಗೂ ಚುರುಕಾಗಿ ಜವಾಬ್ದಾರಿ ನಿರ್ವಹಿಸಿ ಎಂದು ಎಲ್ಲಾ ಸಚಿವರಿಗೂ ಮನವರಿಕೆ ಮಾಡಿಸಿದ್ದಾರೆ
  • ನಾವು ನೀಡಿರುವ ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪುವಂತೆ ಪ್ರಾಮಾಣಿಕವಾಗಿ ಶ್ರಮಿಸಬೇಕು. ಹಿಂದಿನ ಬಾರಿಯ ತಪ್ಪುಗಳು ಈ ಬಾರಿ ಮರುಕಳಿಸಬಾರದು
  • ಖಾತೆ ಹಂಚಿಕೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ನೀವೆಲ್ಲಾ ಸಕ್ರಿಯರಾಗಬೇಕು
  • ವಿರೋಧಪಕ್ಷದಲ್ಲಿದ್ದಾಗ ನಾವು ನಡೆಸಿದ ಹೋರಾಟದ ಫಲವಾಗಿ ಜನತೆ ಬಿಜೆಪಿಯ ದುರಾಡಳಿತವನ್ನು ತಿರಸ್ಕರಿಸಿ ನಮ್ಮ ಕೈ ಹಿಡಿದಿದ್ದಾರೆ. ಈಗ ನಾವು ಸರ್ಕಾರವನ್ನು, ಸರ್ಕಾರದ ಸವಲತ್ತುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು
  • ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ನಮ್ಮ ಜನಪರ ನಿಷ್ಠೆ ಮತ್ತು ಕೆಲಸಗಳ ಮೂಲಕ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ದಾಖಲಿಸಬೇಕಿದೆ ಎಂದು ಸಚಿವರಿಗೆ ಸೂಚಿಸಿದ್ದಾರೆ
  • ಕೇಂದ್ರದ ದುರಾಡಳಿತವನ್ನು ಕರ್ನಾಟಕದ ಮೂಲಕ ಕೊನೆಗೊಳಿಸಲು ಪರಿಸ್ಥಿತಿ ಹದವಾಗಿದೆ. ಇದನ್ನು ನಾವು ಮರೆಯಬಾರದು. ಹೀಗಾಗಿ ಸಚಿವರು ತಮಗೆ ಉಸ್ತುವಾರಿ ವಹಿಸಲಾಗುವ ಜಿಲ್ಲೆಗಳಿಗೆ ಹೆಚ್ಚೆಚ್ಚು ಪ್ರವಾಸ ಮಾಡಬೇಕು.
  • ಜಿಲ್ಲೆ, ತಾಲ್ಲೂಕು ಮಟ್ಟದಲ್ಲೇ ಸಮಸ್ಯೆಗಳನ್ನು ಬಗೆಹರಿಸಬೇಕು. ಅಧಿಕಾರಿಗಳ ಮೇಲೆ ಕಟ್ಟು ನಿಟ್ಟಿನ ನಿಗಾ ಇಟ್ಟು ಭ್ರಷ್ಟಾಚಾರಕ್ಕೆ ಬರೆ ಎಳೆಯಬೇಕು ಎಂದು ಮುಖ್ಯಮಂತ್ರಿಗಳು ಎಲ್ಲಾ ಸಚಿವರಿಗೂ ಟಾರ್ಗೆಟ್ ನೀಡಿ ಶುಭ ಹಾರೈಸಿದ್ದಾರೆ

ಇದನ್ನೂ ಓದಿ: ಕರ್ನಾಟಕ ಸಂಪುಟ ವಿಸ್ತರಣೆ, ನೂತನ ಸಚಿವರಿಗೆ ಖಾತೆ ಹಂಚಿಕೆ, ಅಧಿಕೃತ ಘೋಷಣೆ ಬಾಕಿ, ಯಾರಿಗೆ ಯಾವ ಖಾತೆ? ಇಲ್ಲಿದೆ ವಿವರ

Whats_app_banner