ದ್ವೇಷಭಾಷಣ ಆರೋಪ: ಬಜರಂಗದಳ ಮುಖಂಡ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪುತ್ತೂರು ನಗರ ಠಾಣೆ ಪೊಲೀಸರು, ಎಸ್‌ಡಿಪಿಐ ಮುಖಂಡರ ದೂರು
ಪುತ್ತೂರು: ಬಜರಂಗದಳದ ಮುಖಂಡ ಭರತ್ ಕುಮ್ಡೇಲು ಕೋಮುದ್ವೇಷವನ್ನು ಉಂಟುಮಾಡುವ ಭಾಷಣ ಮಾಡಿದ್ದಾರೆ ಎಂದು ಎಸ್‌ಡಿಪಿಐ ಮುಖಂಡರು ನೀಡಿದ ದೂರು ಆಧರಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

ಮಂಗಳೂರು: ಪುತ್ತೂರು ಬೈಪಾಸ್ ರಸ್ತೆಯ ಜೈನಭವನದಲ್ಲಿ ಮೇ 15ರಂದು ನಡೆದ ಕಾರ್ಯಕ್ರಮದಲ್ಲಿ ಬಜರಂಗದಳದ ಮುಖಂಡ ಭರತ್ ಕುಮ್ಡೇಲು ಕೋಮುದ್ವೇಷವನ್ನು ಉಂಟುಮಾಡುವ ಭಾಷಣ ಮಾಡಿದ್ದಾರೆ ಎಂದು ಎಸ್‌ಡಿಪಿಐ ಮುಖಂಡರು ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದ್ವೇಷಭಾಷಣ ಆರೋಪ: ಬಜರಂಗದಳ ಮುಖಂಡ ವಿರುದ್ಧ ಪ್ರಕರಣ ದಾಖಲು
ಪುತ್ತೂರು ಜೈನಭವನದಲ್ಲಿ ಮೇ 15 ರಂದು ನಡೆದ ಕಾರ್ಯಕ್ರಮದಲ್ಲಿ ಬಜರಂಗ ದಳದ ಮುಖಂಡ ಭರತ್ ಕುಮ್ಡೇಲು ಕೋಮು ದ್ವೇಷದ ಮಾತುಗಳನ್ನು ಆಡಿದ್ದಾರೆ. ಆ ಮಾತುಗಳು ಕೋಮು ಸಾಮರಸ್ಯ ಕದಡುವ ಹಾಗೂ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟುಮಾಡುವ ಸಾಧ್ಯತೆ ಇರುವ ಕಾರಣ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಎಸ್‌ಡಿಪಿಐ ಮುಖಂಡರು ದೂರು ನೀಡಿದ್ದಾರೆ. ಈ ದೂರಿನ ಪ್ರಕಾರ, ಭರತ್ ಕುಮ್ಡೇಲು ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ 35/2025 ಕಲಂ-196,353(2) BNS 2023. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭರತ್ ಕುಮ್ಡೇಲು ಭಾಷಣ ಸಮಾಜದಲ್ಲಿ ಒಡಕುಂಟುಮಾಡುವ ಯತ್ನವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಎಸ್‌ಡಿಪಿಐ ಮುಖಂಡರು ಕಿಡಿಕಾರಿದ್ದಾರೆ. ಆಂಟಿ ಕಮ್ಯೂನಲ್ ವಿಂಗ್ ಫೋರ್ಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ಗೆ ಮನವಿ ಮಾಡಿ ಈ ಕುರಿತು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಿ ಎಂದು ಮುಖಂಡ ಅನ್ವರ್ ಸಾದತ್ ಬಜತ್ತೂರು ಮನವಿ ಮಾಡಿದ್ದರು. ಮುಖಂಡರಾದ ರಿಯಾಝ್ ಫರಂಗಿಪೇಟೆ ತನ್ನ ಎಕ್ಸ್ ಖಾತೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿ, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇದೀಗ ಪುತ್ತೂರು ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
(ವರದಿ- ಹರೀಶ್ ಮಾಂಬಾಡಿ, ಮಂಗಳೂರು)


