ಕನ್ನಡ ಸುದ್ದಿ  /  ಕರ್ನಾಟಕ  /  Haveri News: ಪ್ರೀತಿಸಿದ ಯುವತಿ ಜೊತೆ ಮಗ ಪರಾರಿ; ಹಾವೇರಿಯ ರಾಣೆಬೆನ್ನೂರಿನಲ್ಲಿ ತಾಯಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ

Haveri News: ಪ್ರೀತಿಸಿದ ಯುವತಿ ಜೊತೆ ಮಗ ಪರಾರಿ; ಹಾವೇರಿಯ ರಾಣೆಬೆನ್ನೂರಿನಲ್ಲಿ ತಾಯಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ

ಪ್ರೀತಿಸಿದ ಯುವತಿ ಜೊತೆ ಮಗ ಪರಾರಿಯಾಗಿದ್ದಾನೆಂದು ಆತನ ತಾಯಿಗೆ ಶಿಕ್ಷೆ ನೀಡಿ ಅಮಾನವೀಯವಾಗಿ ನಡೆಸಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೀತಿಸಿದ ಯುವತಿಯೊಂದಿಗೆ ಮಗ ಪರಾರಿಯಾಗಿರುವುದಕ್ಕೆ ಯುವತಿಯ ಕಡೆಯವರು ಯುವಕನ ತಾಯಿ ಮೇಲೆ ಹಲ್ಲೆ ಮಾಡಿ ಅಮಾನವೀಯವಾಗಿ ನಡೆಸಿಕೊಂಡಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಪ್ರೀತಿಸಿದ ಯುವತಿಯೊಂದಿಗೆ ಮಗ ಪರಾರಿಯಾಗಿರುವುದಕ್ಕೆ ಯುವತಿಯ ಕಡೆಯವರು ಯುವಕನ ತಾಯಿ ಮೇಲೆ ಹಲ್ಲೆ ಮಾಡಿ ಅಮಾನವೀಯವಾಗಿ ನಡೆಸಿಕೊಂಡಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ರಾಣೆಬೆನ್ನೂರು (ಹಾವೇರಿ): ಪ್ರೀತಿಸಿದ ಯುವತಿ ಹಾಗೂ ಯುವಕ ಪರಾರಿಯಾಗಿರುವ ಹಿನ್ನೆಲೆಯಲ್ಲಿ ಯುವಕನ ತಾಯಿ ಮೇಲೆ ಹಲ್ಲೆ ಮಾಡಿ ಅಮಾನವೀಯವಾಗಿ ನಡೆಸಿಕೊಂಡಿರುವ ಘಟನೆ ರಾಣೆಬೆನ್ನೂರಿನಲ್ಲಿ ನಡೆದಿದೆ. ಯುವಕನ ತಾಯಿಯನ್ನು ಊರ ಮಧ್ಯದಲ್ಲಿ ಇರುವ ವಿದ್ಯುತ್ ಕಂಬಕ್ಕೆ ಹಗ್ಗದಿಂದ ಕಟ್ಟಿ ಹಲ್ಲೆ ಮಾಡಿರುವ ಅಮಾನವೀಯ ಕೃತ್ಯ ರಾಣೆಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಯುವತಿಯ ಕಡೆಯವರಾದ ಚಂದ್ರಪ್ಪ ತೆಲಗಿ, ಬಸಪ್ಪ ಹಾಗೂ ಗುತ್ತೆವ್ವ ಎಂಬುವರು ಹಲ್ಲೆ ಮಾಡಿರುವ ಆರೋಪಿಗಳಾಗಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಹಲ್ಲೆಯಿಂದ ಗಾಯಗೂಂಡಿರುವ ಯುವಕ ತಾಯಿಯನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು ಚಿಕಿತ್ಸೆ ಕೊಡಿಸಿದ್ದಾರೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆ ಮಾಡಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಈ ಬಗ್ಗೆ ಮಾಹಿತಿ ನೀಡಿರುವ ಹಾವೇರಿ ಎಸ್‌ಪಿ ಅಂಶು ಕುಮಾರ್, ರಾಣೆಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ಮಾರ್ಚ್ 30 ರಂದು ಪರಸ್ಪರ ಪ್ರೀತಿಸುತ್ತಿದ್ದ ಯುವಕ ಮತ್ತು ಯುವತಿ ಪರಾರಿಯಾಗಿದ್ದಾರೆ. ಈ ಸಂಬಂಧ ಹುಡುಗಿಯ ಕಡೆಯವರು ಯುವಕನ ತಾಯಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ಸಂಬಂಧ ಮೂವರು ಮಹಿಳೆಯರನ್ನು ಬಂಧಿಸಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದೇವೆ.

ಯುವಕನ ತಾಯಿಗೆ ಪ್ರಾಣ ಭಯ ಇದೆ ಎಂಬ ಪ್ರಶ್ನೆಗೆ, ಸದ್ಯಕ್ಕೆ ಯುವಕನ ತಾಯಿ ದಾವಣಗೆರೆಯ ತನ್ನ ಮಗಳ ಮನೆಯಲ್ಲಿದ್ದಾಳೆ. ಅಗತ್ಯ ಪೊಲೀಸ್ ರಕ್ಷಣೆ ನೀಡಲಾಗುವುದು ಎಂದು ಹೇಳಿದ್ದಾರೆ. ಯುವತಿಯ ಕುಟುಂಬದವರು ದೂರು ನೀಡಿದ್ದಾರೆ. ಎರಡೂ ಕಡೆಯವರು ದೂರಿನ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದಿದ್ದಾರೆ.

IPL_Entry_Point