Shiggaon Accident: ಶಿಗ್ಗಾಂವಿ ಸಮೀಪ ಡಿವೈಡರ್ ಹಾರಿ ಟಾಟಾ ಆಲ್ಟ್ರೋಜ್ ಮೇಲೆ ಬಿದ್ದ ಮಹೀಂದ್ರಾ ಎಕ್ಸ್‌ಯುವಿ 700, ಮಗು ಸೇರಿ 4 ಜನರ ದುರ್ಮರಣ
Shiggaon Accident: ಶಿಗ್ಗಾಂವಿ ತಾಲೂಕು ತಿಮ್ಮಾಪುರದ ಬೆಳ್ಳಿಗಟ್ಟಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಡಿವೈಡರ್ ಹಾರಿ ಟಾಟಾ ಆಲ್ಟ್ರೋಜ್ ಮೇಲೆ ಮಹೀಂದ್ರಾ ಎಕ್ಸ್‌ಯುವಿ 700 ಬಿದ್ದ ಕಾರಣ ಮಗು ಸೇರಿ 4 ಜನರ ದುರ್ಮರಣಕ್ಕೀಡಾದ ಕಳವಳಕಾರಿ ದುರಂತ ಸಂಭವಿಸಿದೆ.
Shiggaon Accident: ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕು ತಿಮ್ಮಾಪುರದ ಬೆಳ್ಳಿಗಟ್ಟಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ರಸ್ತೆ ಅಪಘಾತದಲ್ಲಿ 10-12 ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಬೆಂಗಳೂರು ಚಾಮರಾಜಪೇಟೆಯ ಚಂದ್ರಮ್ಮ (59), ಅವರ ಮಗಳು ಹರಿಹರದ ಮೀನಾ (38), ಹರಿಹರದ ಮಹೇಶ್ ಕುಮಾರ್ (41), ಧನವೀರ್ (11) ಎಂದು ಗುರುತಿಸಲಾಗಿದೆ. ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ.
ಶಿಗ್ಗಾಂವಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ
ಶಿಗ್ಗಾಂವಿ ತಾಲೂಕು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾವೇರಿ-ಧಾರವಾಡ ಗಡಿಯ ಸಮೀಪ ಅಪಘಾತ ಸಂಭವಿಸಿರುವಂಥದ್ದು. ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಬಿಳಿ ಮಹೀಂದ್ರಾ ಎಕ್ಸ್‌ಯುವಿ 700 ವಾಹನವು ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಕೆಂಪು ಬಣ್ಣದ ಟಾಟಾ ಆಲ್ಟ್ರೋಜ್ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಕೆಂಪು ಕಾರಿನಲ್ಲಿದ್ದ 10-12 ವರ್ಷದ ಒಂದು ಮಗು ಸೇರಿ 4 ಜನರಿದ್ದರು, ಅವರೆಲ್ಲರೂ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 2 ಜನರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಕೂಡ ಮೃತಪಟ್ಟಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ತಡಸ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.