ಮೈಸೂರು ದಸರಾ ಉದ್ಘಾಟನಾ ಸಮಯ ಎಷ್ಟೊತ್ತಿಗೆ, ಈ ಬಾರಿ ಏರ್ ಶೋ ಇರುತ್ತಾ, ಇರಲ್ವಾ; ನಿಮ್ಮೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ-hc mahadevappa said mysore dasara will be inaugurated on october 3 at 9 15 am also respond cm resignation debate prs ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಮೈಸೂರು ದಸರಾ ಉದ್ಘಾಟನಾ ಸಮಯ ಎಷ್ಟೊತ್ತಿಗೆ, ಈ ಬಾರಿ ಏರ್ ಶೋ ಇರುತ್ತಾ, ಇರಲ್ವಾ; ನಿಮ್ಮೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ಮೈಸೂರು ದಸರಾ ಉದ್ಘಾಟನಾ ಸಮಯ ಎಷ್ಟೊತ್ತಿಗೆ, ಈ ಬಾರಿ ಏರ್ ಶೋ ಇರುತ್ತಾ, ಇರಲ್ವಾ; ನಿಮ್ಮೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

Mysore Dasara 2024: ಬಹುನಿರೀಕ್ಷಿತ ಮೈಸೂರು ದಸರಾ ಉದ್ಘಾಟನೆ ಸಮಯ ಎಷ್ಟೊತ್ತಿಗೆ? ಯಾವೆಲ್ಲಾ ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ ಎಂಬುದರ ವಿವರವನ್ನು ಸಚಿವ ಹೆಚ್​​ಸಿ ಮಹದೇವಪ್ಪ ಅವರು ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ, ಸಚಿವ ಹೆಚ್​ಸಿ ಮಹದೇವಪ್ಪ, ಜಿಲ್ಲಾ ಪಂಚಾಯತಿ ಸಿಇಒ ಗಾಯತ್ರಿ ಇದ್ದರು.
ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ, ಸಚಿವ ಹೆಚ್​ಸಿ ಮಹದೇವಪ್ಪ, ಜಿಲ್ಲಾ ಪಂಚಾಯತಿ ಸಿಇಒ ಗಾಯತ್ರಿ ಇದ್ದರು.

ಮೈಸೂರು: ವಿಶ್ವ ವಿಖ್ಯಾತ ಹಾಗೂ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2024 ಸಮೀಪಿಸಿದೆ. ಎಲ್ಲಾ ಸಿದ್ದತಾ ಕಾರ್ಯಗಳು ಹಂತಿಮ ಹಂತಕ್ಕೆ ತಲುಪಿವೆ. ಅಕ್ಟೋಬರ್ 3ರಂದು ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉತ್ಸವ ಉದ್ಘಾಟನೆಯಾಗಲಿದೆ. ಅಂದೇ ಎಲ್ಲಾ ಕಾರ್ಯಕ್ರಮಗಳಿಗೂ ಚಾಲನೆ ಸಿಗಲಿದೆ. ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯೂ ಆಗುತ್ತದೆ. ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಸಿಎಂ ನೀಡಲಿದ್ದಾರೆ. 11 ವೇದಿಕೆಗಳಲ್ಲಿ 508 ಕಲಾ ತಂಡಗಳ ಕಲಾವಿದರು ಟೌನ್ ಹಾಲ್​ನಲ್ಲಿ ನಾಟಕ ಪ್ರದರ್ಶನ ನೀಡಲಿದ್ದಾರೆ. ಅಕ್ಟೋಬರ್ 5ರಂದು ಪ್ರಭುತ್ವ ಮತ್ತು ಸಂವಿಧಾನ ಆಶಯದಲ್ಲಿ ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ ಎಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸಚಿವ ಹೆಚ್​ಸಿ ಮಹದೇವಪ್ಪ ಹೇಳಿದ್ದಾರೆ.

ದಸರಾ ವೇಳೆ ಏರ್ ಶೋ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಮಹದೇವಪ್ಪ, ಈ ಬಾರಿ ಏರ್ ಶೋ ಅನುಮಾನ. ಈ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಏರ್ ಶೋ ಇರುವುದಿಲ್ಲ. ಆದರೆ ಇತರೆ ಕಾರ್ಯಕ್ರಮಗಳು ನಡೆಯುತ್ತವೆ ಎಂದರು. ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಸೆಪ್ಟೆಂಬರ್ 26ರಿಂದಲೇ ದಸರಾ ಗೋಲ್ಡ್ ಪಾಸ್ ಮಾರಾಟ ಮಾಡಲಾಗುತ್ತಿದೆ. ಸಾರ್ವಜನಿಕರ ಉತ್ತಮ ಸ್ಪಂದನೆ ದೊರೆಯುತ್ತಿದೆ. ಈಗಲೂ ಕೂಡ ಆನ್​ಲೈನ್​ನಲ್ಲಿ ಗೋಲ್ಡ್ ಪಾಸ್ ಮಾರಾಟಕ್ಕಿದೆ. ಪರಿಸ್ಥಿತಿ ನೋಡಿ ಮತ್ತು ಸಮಸ್ಯೆ ಬಾರದ ಹಾಗೆ ದಸರಾ ಗೋಲ್ಡ್ ಪಾಸ್ ವಿತರಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಯುವ ದಸರಾಕ್ಕೆ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಖ್ಯಾತ ಸಂಗೀತ ನಿರ್ದೇಶಕರು ಭಾಗಿಯಾಗುತ್ತಿದ್ದಾರೆ. ಮಹಾರಾಜ ಕಾಲೇಜು ಮೈದಾನದಲ್ಲಿ ಟ್ರಾಫಿಕ್ ಸಮಸ್ಯೆ, ಲಾ ಅಂಡ್ ಆರ್ಡರ್​ಗೆ ತೊಂದರೆಯಾಗಬಹುದು. ಹಾಗಾಗಿ ನಗರದ ಹೊರ ವಲಯದಲ್ಲಿ ಯುವ ದಸರಾ ಆಯೋಜನೆ ಮಾಡಲಾಗಿದೆ. ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಲಾಗಿದೆ. ಯುವ ದಸರಾಕ್ಕೆ ಆಗಮಿಸುವ ಜನರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮ ಸ್ಥಳದ ಸುತ್ತಮುತ್ತ ಸಿಸಿಟಿವಿ ಕ್ಯಾಮರಾ ವ್ಯವಸ್ಥೆ ಮಾಡಲಾಗುತ್ತದೆ. ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸುತ್ತೇವೆ ಎಂದು ಸಚಿವರು ಹೇಳಿದ್ದಾರೆ.

ಎಫ್​ಐಆರ್​ ಆದ ತಕ್ಷಣ ರಾಜೀನಾಮೆ ಕೊಡ್ಬೇಕಿಲ್ಲ

ಸಿಎಂ ರಾಜೀನಾಮೆಗೆ ಬಿಜೆಪಿ, ಜೆಡಿಎಸ್ ನಾಯಕರ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಮಹದೇವಪ್ಪ, ಇಡೀ ದೇಶದಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಎಫ್ಐಆರ್ ಆಗಿದೆ. ಎಫ್ಐಆರ್ ಆದ ತಕ್ಷಣ ರಾಜೀನಾಮೆ ಕೊಡಬೇಕಾಗಿಲ್ಲ. ಜೈಲಿಗೆ ಹೋದ ತಕ್ಷಣ ರಾಜೀನಾಮೆ ನೀಡು ಅಂತ ಕೋರ್ಟ್ ಹೇಳಿದ್ಯಾ? ಭಾರತದ ಇತಿಹಾಸದಲ್ಲಿ ಚುನಾವಣೆ ಬಾಂಡ್ ಮೂಲಕ ಹಣ ಪಡೆದಿರೋದು ಅತಿ ಹಗರಣ. ಐಟಿ ದಾಳಿಗೆ ಒಳಗಾಗಿದ್ದ ವ್ಯಕ್ತಿಗಳೇ 8 ಸಾವಿರ ಕೋಟಿ ಹಣವನ್ನು ಚುನಾವಣೆ ಬಾಂಡ್ ಮೂಲಕ ನೀಡಿದ್ದಾರೆ. ಚುನಾವಣೆ ಬಾಂಡ್ ಮೂಲಕ ನೀಡಲಾಗುತ್ತಿದ್ದ ಹಣದ ಮಾಹಿತಿಯನ್ನು ಸೀಕ್ರೆಟ್ ಆಗಿ ಇಡಲು ಮುಂದಾಗಿದ್ದೇ ಬಿಜೆಪಿ ನಾಯಕರು ಎಂದು ವಾಗ್ದಾಳಿ ನಡೆಸಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿಎಂ ಕುಗ್ಗಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ ಎತ್ತ ಕಡೆ ಸಾಗುತ್ತಿದೆ ಎಂಬ ಬೇಸರ ಇದೆ. ನೈತಿಕತೆ ಇಟ್ಟುಕೊಂಡಿರುವ ವ್ಯಕ್ತಿಗಳು ಪ್ರಸ್ತುತ ರಾಜಕೀಯದಲ್ಲಿ ಇಲ್ಲ. ಬಿಜೆಪಿಯಲ್ಲಿ ಸಿಎಂ ಆಗಲಿಕ್ಕೆ 3 ಸಾವಿರ ಕೋಟಿ ಕೊಡಬೇಕು. ಇದನ್ನೇ ಯತ್ನಾಳ್ ರವರು ಹೇಳುತ್ತಿರೋದು. ರಾಜ್ಯಪಾಲರ ನಿಲುವುಗಳ ಬಗ್ಗೆ ಸುಪ್ರೀಂಕೋರ್ಟ್ ಈಗಾಗಲೇ ಹೇಳಿದೆ. ನಾವು ಅದನ್ನೆಲ್ಲಾ ಗಮನಿಸಬೇಕು ಎಂದು ಹೇಳಿದ್ದಾರೆ. ಸಿಎಂ ಸ್ಥಾನ ಬದಲಾವಣೆ ವಿಚಾರಕ್ಕೆ ಉತ್ತರಿಸಿದ ಮಹದೇವಪ್ಪ, ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವವರಿಗೆ ಸಿದ್ದರಾಮಯ್ಯ ಪೆಡಂಭೂತದ ರೀತಿ ಕಾಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಬಹುಮತ ಪಡೆದು ಸಿಎಂ ಆಗಿರೋದು. ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ದವಾಗಿರುತ್ತೇವೆ. ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ. ಎಲ್ಲಾ ಸಂದರ್ಭದಲ್ಲಿಯೂ ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ. ಎಲ್ಲಾ ಪಕ್ಷದಲ್ಲೂ ಇದೆ ಇರೋದು ಎಂದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ, ಜಿಲ್ಲಾ ಪಂಚಾಯತಿ ಸಿಇಒ ಗಾಯತ್ರಿ ಇದ್ದರು.

mysore-dasara_Entry_Point