ಕನ್ನಡ ಸುದ್ದಿ  /  ಕರ್ನಾಟಕ  /  Health News: ಡೆಂಗ್ಯೂ ನಿಯಂತ್ರಣಕ್ಕೆ ಜಿಲ್ಲಾ ಮಟ್ಟದಲ್ಲಿ ಟಾಸ್ಕ್‌ಫೋರ್ಸ್‌, ಸಮನ್ವಯದ ಕೆಲಸ ಮಾಡಿ, ಸಿಎಂ ಸಿದ್ದರಾಮಯ್ಯ ಸೂಚನೆ

Health News: ಡೆಂಗ್ಯೂ ನಿಯಂತ್ರಣಕ್ಕೆ ಜಿಲ್ಲಾ ಮಟ್ಟದಲ್ಲಿ ಟಾಸ್ಕ್‌ಫೋರ್ಸ್‌, ಸಮನ್ವಯದ ಕೆಲಸ ಮಾಡಿ, ಸಿಎಂ ಸಿದ್ದರಾಮಯ್ಯ ಸೂಚನೆ

Dengue Control ಕರ್ನಾಟಕದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಡಿಸಿಗಳು ಹಾಗೂ ಜಿಪಂ ಸಿಇಒಗಳಿಗೆ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರವೂ ಡಿಸಿ, ಸಿಇಒಗಳ ಸಭೆ ನಡೆಯಿತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಹಾಜರಿದ್ದರು,
ಬೆಂಗಳೂರಿನಲ್ಲಿ ಮಂಗಳವಾರವೂ ಡಿಸಿ, ಸಿಇಒಗಳ ಸಭೆ ನಡೆಯಿತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಹಾಜರಿದ್ದರು,

ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಹಾಗೂ ರೋಗಿಗಳ ಆರೈಕೆ,ಮೃತರ ಕುಟುಂಬದವರಿಗೆ ನೈತಿಕವಾಗಿ ಬಲ ತುಂಬುವ ನಿಟ್ಟಿನಲ್ಲಿ ಆಯಾ ಜಿಲ್ಲೆಗಳಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ಎರಡು ತಿಂಗಳ ಮಟ್ಟಿಗಾದರೂ ಜಿಲ್ಲಾ ಮಟ್ಟದಲ್ಲಿ ಟಾಸ್ಕ್‌ಫೋರ್ಸ್‌ ಅನ್ನು ಆರಂಭಿಸಬೇಕು. ಹೈ ಅಲರ್ಟ್‌ ಆಗಿದ್ದು ಡೆಂಗ್ಯೂ ಉಲ್ಬಣವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಇದಕ್ಕೆ ಡಿಸಿ ಹಾಗೂ ಸಿಇಒಗಳೇ ಜವಾಬ್ದಾರಿ ತೆಗೆದುಕೊಳ್ಳಬೇಕು. ಹಣದ ಕೊರತೆಯಂತೂ ಇಲ್ಲ. ವಿವೇಚನೆ ಬಳಸಿ ಹಣ ಬಳಕೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದಿರುವ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯ ಎರಡನೇ ದಿನವಾದ ಮಂಗಳವಾರ ಅವರು ಡೆಂಗ್ಯೂ ನಿಯಂತ್ರಣವಾಗಿಯೂ ಸೂಚನೆ ನೀಡಿದರು.

ಟ್ರೆಂಡಿಂಗ್​ ಸುದ್ದಿ

ಡಿಸಿ, ಸಿಇಒ ಹಾಗೂ ಡಿಎಚ್‌ಇ ಗಳು ಪ್ರತೀ ದಿನ ಸಮನ್ವಯದಿಂದ ಸಭೆ ನಡೆಸಿ ಡೆಂಗ್ಯು ಹರಡದಂತೆ ಕ್ರಮ ಕೈಗೊಳ್ಳಿ ಎರಡು ತಿಂಗಳ ಮಟ್ಟಿಗೆ ಟಾಸ್ಕ್ ಫೋರ್ಸ್ ಹೈ ಅಲರ್ಟ್ ಆಗಿದ್ದು ಡೆಂಗ್ಯು ತಡೆಗಟ್ಟಬೇಕು ಏನು ಮಾಡಬೇಕು , ಎಷ್ಟು ಹಣ ಅಗತ್ಯವಿದೆ ಎನ್ನುವುದನ್ನು ತಿಳಿಸಿ. ತಕ್ಷಣ ಹಣ ಬಿಡುಗಡೆಗೆ ಸೂಚಿಸಿದ್ದೇನೆ. ಡೆಂಗ್ಯು ಹರಡದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೆ 7362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಡೆಂಗ್ಯೂ ಚಿಕಿತ್ಸೆಗೆ ವಿಶೇಷ ವಾರ್ಡ್‌ ಸಜ್ಜುಗೊಳಿಸಬೇಕು. ಮೆಡಿಕಲ್‌ ಕಾಲೇಜುಗಳಲ್ಲಿಯೂ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕು. ಡೆಂಗ್ಯೂ ಪತ್ತೆಗೆ ಪರೀಕ್ಷೆ ಹೆಚ್ಚಿಸಬೇಕು. ಡೆಂಗ್ಯೂ ಪಾಸಿಟಿವ್‌ ಇರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಬೇಕು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್‌ಫೋರ್ಸ್‌ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಸಭೆಗಳನ್ನು ನಡೆಸಿ ಪರಿಶೀಲನೆ ನಡೆಸಬೇಕು ಎನ್ನುವ ನಿರ್ದೇಶನವನ್ನು ಸಿದ್ದರಾಮಯ್ಯ ನೀಡಿದರು.

ಪ್ರಸ್ತುತ ಸಾಲಿನಲ್ಲಿ 215 ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲು ಅನುಮೋದನೆ ನೀಡಲಾಗಿದ್ದು, 42 ಕಡೆಗಳಲ್ಲಿ ಕಟ್ಟಡ ಗುರುತಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ 503 ನಮ್ಮ ಕ್ಲಿನಿಕ್‌ಗಳು ಕಾರ್ಯಾಚರಿಸುತ್ತಿವೆ. ನಮ್ಮ ಕ್ಲಿನಿಕ್‌ಗಳಲ್ಲಿ ಲಭ್ಯವಿರುವ ಸೇವೆಗಳ ಮಾಹಿತಿಯನ್ನು ಪ್ರಚುರಪಡಿಸಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್‌,‌ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್ ಹಾಗೂ ಸಚಿವರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.