ಕರ್ನಾಟಕದಲ್ಲಿ ಮಾದಕ ವಸ್ತು ಬಳಕೆಗೆ ಬ್ರೇಕ್, ಮಾರಾಟ ಕಂಡರೆ ಎಸ್ಪಿ, ಠಾಣಾಧಿಕಾರಿಗಳೇ ಹೊಣೆ; ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್
ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಯಥೇಚ್ಛವಾಗಿ ಸರಬರಾಜು ಆಗುತ್ತಿರುವ ಡ್ರಗ್ಸ್ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ಧಾರೆ.
ಬೆಂಗಳೂರು: ಕರ್ನಾಟಕ ನಿಧಾನವಾಗಿ ಮಾದಕವಸ್ತುಗಳ ಬಳಕೆ ಹಾಗೂ ಮಾರಾಟ ತಾಣವಾಗುತ್ತಿದೆ. ಕೋಟ್ಯಂತರ ರೂ. ವಹಿವಾಟು ನಡೆಯುವ ಜತೆಗೆ ಯುವ ಜನತೆ ತಮ್ಮ ಬದುಕನ್ನೇ ಕಳೆದುಕೊಳ್ಳುತ್ತಿದೆ. ಕಾಲೇಜುಗಳ ಬಳಿಯೇ ಮಾದಕ ವಸ್ತುಗಳ ಮಾರಾಟ ಜಾಲ ವಿಸ್ತರಣೆಯಾಗುತ್ತಿರುವ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರವು ಮಾದಕ ವಸ್ತುಗಳ ಮಾರಾಟ, ಬಳಕೆಗೆ ಬ್ರೇಕ್ ಹಾಕಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತೂ ಈ ವಿಚಾರದಲ್ಲಿ ಆಸಕ್ತಿ ವಹಿಸಿದ್ದು, ಮಾದಕ ವಸ್ತುಗಳ ಮಾರಾಟಗಾರರು ಹಾಗೂ ಬಳಕೆದಾರರ ಮೇಲೆ ನಿಗಾ ಇಡಲು ಪೊಲೀಸ್ ಇಲಾಖೆಗೆ ಕಟ್ಟಾಜ್ಞೆ ಹೊರಡಿಸಿದ್ದಾರೆ. ಬೆಂಗಳೂರು ಸೇರಿದಂತೆ ಹಲವೆಡೆ ಮಾದಕ ವಸ್ತುಗಳ ಜಾಲವನ್ನು ಬೇಧಿಸಿ ರಾಜ್ಯದಲ್ಲಿ ಡ್ರಗ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದಾರೆ. ಇದರ ನಂತರವೂ ಮಾರಾಟ ಕಂಡು ಬಂದರೆ ಎಸ್ಪಿಗಳು ಹಾಗೂ ಆಯಾ ಠಾಣಾಧಿಕಾರಿಗಳನ್ನೇ ಹೊಣೆಗಾರರನ್ನಾಗಿಸುವುದಾಗಿಯೂ ಸಿಎಂ ಎಚ್ಚರಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಆಯುಕ್ತ ಬಿ.ದಯಾನಂದ ಸಹಿತ ಪ್ರಮುಖರ ಉಪಸ್ಥಿತಿಯಲ್ಲಿ ಬುಧವಾರ ಸಭೆ ನಡೆಸಿದ ಸಿಎಂ ನಂತರ ಪತ್ರಿಕಾಗೋಷ್ಠಿಯಲ್ಲೂ ಈ ವಿಚಾರಗಳನ್ನು ಹಂಚಿಕೊಂಡರು.
- ಬೆಂಗಳೂರು ಪೂರ್ವ ವಿಭಾಗದಲ್ಲಿ ಡ್ರಗ್ ಹಾವಳಿ ತೀವ್ರವಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದಕ್ಕೆ ಬಲಿ ಹಾಕಲು ನಿರ್ಣಯ ಮಾಡಿದ್ದೇವೆ
- ಒಡಿಶ್ಶಾ, ಆಂಧ್ರ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಿಂದ ಮಾದಕ ವಸ್ತು ರಾಜ್ಯಕ್ಕೆ ಸರಬರಾಜು ಆಗುತ್ತಿದೆ. ಇದನ್ನು ತಡೆಯಲು ಹೊಸ ಕಾರ್ಯತಂತ್ರ ರೂಪಿಸುತ್ತಿದ್ದೇವೆ
- ಕರ್ನಾಟಕದಲ್ಲಿ ಡ್ರಗ್ ಹಾವಳಿ ತೊಡೆದು ಹಾಕಲು ಕ್ಷಿಪ್ರ ಮತ್ತು ತೀಕ್ಷ್ಣ ಕ್ರಮ ಕೈಗೊಳ್ಳುತ್ತೇವೆ
- ಗೃಹ ಇಲಾಖೆ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆ ಸೇರಿ ಹಲವು ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿ ಹಲವು ಕ್ಷಿಪ್ರ ತೀರ್ಮಾನಗಳನ್ನು ಕೈಗೊಂಡಿದ್ದೇವೆ
- ವಿದ್ಯಾರ್ಥಿ, ಯುವ ಜನರ ಮೇಲೆ, ಕುಟುಂಬಗಳ ಮೇಲೆ ಕೆಟ್ಟ ಪರಿಣಾಮ ಬೀರುತಗತಿರುವುದನ್ನು ತಡೆಯಲು ಕ್ರಮ
ಇದನ್ನೂ ಓದಿರಿ: ಬೆಂಗಳೂರಿನಲ್ಲಿ ಖರೀದಿಸಿ ಮಂಗಳೂರಿಗೆ ಎಂಡಿಎಂಎ ಡ್ರಗ್ ಸಾಗಿಸುತ್ತಿದ್ದ ಕೇರಳದವರ ಸೆರೆ; ಐಷಾರಾಮಿ ಜೀವನ ನಡೆಸಲು ಈ ದಂಧೆ - ಡ್ರಗ್ ಸೇವಿಸಿ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರಕರಣಗಳಿಗೆ ಬ್ರೇಕ್. ಮಾದಕ ವಸ್ತುಗಳ ಬಳಕೆ ತಡೆ ನಿಟ್ಟನಲ್ಲಿ ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ. ಟಾಸ್ಕ್ ಫೋರ್ಸ್ ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಟಾಸ್ಕ್ ಫೋರ್ಸ್ ನಲ್ಲಿ ಇರುತ್ತಾರೆ. ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ
- ಪೊಲೀಸರ ಕೆಲಸಕ್ಕೆ ಮುಕ್ತ ಅವಕಾಶ ಕೊಡುವ ಜೊತೆಗೆ ಅವರನ್ನೇ ಹೊಣೆ ಮಾಡಿ ಕ್ರಮ ಕೂಡ ತಗೊತೀವಿ. ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಠಾಣಾಧಿಕಾರಿ ಡಿವೈಎಸ್ ಪಿ, ಎಸಿಪಿ ಮತ್ತು SP ಗಳನ್ನು ಹೊಣೆ ಮಾಡಲು ತೀರ್ಮಾನ. ಇವರ ವಿರುದ್ಧವೇ ಕ್ರಮ ಖಚಿತ
- ಈಗ ಇರುವ ಮಾದಕ ವಸ್ತು ತಡೆ ಕಾನೂನನ್ನು ಇನ್ನಷ್ಟು ಗಟ್ಟಿ ಮಾಡುವ ಜತೆಗೆ ಅಗತ್ಯಬಿದ್ದರೆ ಹೊಸ ಕಾನೂನು ಮಾಡಲು ಸಿದ್ದ
ಇದನ್ನೂ ಓದಿರಿ: ದೋಹಾದಿಂದ ಬೆಂಗಳೂರಿಗೆ ಬಂದ ಕೀನ್ಯಾ ಪ್ರಜೆ ಬಳಿ 30 ಕೋಟಿ ರೂ ಮೌಲ್ಯ ಕೊಕೇನ್ ಪತ್ತೆ; ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಬಂಧನ - ಪೆಡ್ಲರ್ ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿಗೆ ಕ್ರಮ
- ಮಾದಕ ವಸ್ತು ವ್ಯಸನಿಗಳಅಗಿದ್ದರೆ ಪುನರ್ವಸತಿ ಕೇಂದ್ರಗಳನ್ನು ಹೆಚ್ಚಿಸಲು, ಸಮರ್ಪಕಗೊಳಿಸಲು ಕ್ರಮ
- ವಿದ್ಯಾರ್ಥಿ-ಯುವ ಜನರ, ಪೋಷಕರ ಸಹಭಾಗಿತ್ವದಲ್ಲಿ ಮಾಹಿತಿ ಸಂಗ್ರಹಿಸಿ ಡ್ರಗ್ ಹಾವಳಿಗೆ ಬ್ರೇಕ್ ಹಾಕುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದೇವೆ
- ಈಗಾಗಲೇ ಇರುವ ರಾಜ್ಯ ಮಟ್ಟದ ಸಮಿತಿಯಿಂದ ಮಾಹಿತಿ, ಅಭಿಪ್ರಾಯ ಸಂಗ್ರಹಿಸಿದ್ದೇವೆ ಜಾಗೃತಿ ಮತ್ತು ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರವಾಗಿ ನಡೆಸಲು ಸ್ಪಷ್ಟ ಸೂಚನೆ ನೀಡಲಾಗಿದೆ