ಕರ್ನಾಟಕದಲ್ಲಿ 10,000 ದಾಟಿದ ಡೆಂಗ್ಯೂ ಪ್ರಕರಣ, ಬೆಂಗಳೂರಿನ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಬೆಡ್ ಮೀಸಲು
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕದಲ್ಲಿ 10,000 ದಾಟಿದ ಡೆಂಗ್ಯೂ ಪ್ರಕರಣ, ಬೆಂಗಳೂರಿನ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಬೆಡ್ ಮೀಸಲು

ಕರ್ನಾಟಕದಲ್ಲಿ 10,000 ದಾಟಿದ ಡೆಂಗ್ಯೂ ಪ್ರಕರಣ, ಬೆಂಗಳೂರಿನ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಬೆಡ್ ಮೀಸಲು

ಕರ್ನಾಟಕದಲ್ಲಿ 10,000 ದಾಟಿದ ಡೆಂಗ್ಯೂ ಪ್ರಕರಣಗಳು ಕಳವಳ ಮೂಡಿಸಿವೆ. ಇದೇ ವೇಳೆ ಹೆಚ್ಚು ಕೇಸ್‌ಗಳುರುವ ಬೆಂಗಳೂರಿನಲ್ಲಿ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಬೆಡ್ ಮೀಸಲು ಇರಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಕರ್ನಾಟಕದಲ್ಲಿ 10,000 ದಾಟಿದ ಡೆಂಗ್ಯೂ ಪ್ರಕರಣ, ಬೆಂಗಳೂರಿನ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಬೆಡ್ ಮೀಸಲು ಇರಿಸುವಂತೆ ಆರೋಗ್ಯ ಇಲಾಖೆ ಆದೇಶ ನೀಡಿದೆ.
ಕರ್ನಾಟಕದಲ್ಲಿ 10,000 ದಾಟಿದ ಡೆಂಗ್ಯೂ ಪ್ರಕರಣ, ಬೆಂಗಳೂರಿನ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಬೆಡ್ ಮೀಸಲು ಇರಿಸುವಂತೆ ಆರೋಗ್ಯ ಇಲಾಖೆ ಆದೇಶ ನೀಡಿದೆ.

ಬೆಂಗಳೂರು: ಕರ್ನಾಟಕದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗಿದ್ದು, ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿನ ಪ್ರಕರಣ ದೃಢಪಟ್ಟಿವೆ. ಹೀಗಾಗಿ, ಮಧ್ಯಮ ಮತ್ತು ತೀವ್ರತರವಾದ ಡೆಂಗ್ಯೂ ಪ್ರಕರಣಗಳ ಪರಿಣಾಮಕಾರಿ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಆರೋಗ್ಯ ಇಲಾಖೆಯು ಮುಂದಾಗಿದೆ. ಇದರಂತೆ, ಆರೋಗ್ಯ ಇಲಾಖೆ ಬುಧವಾರ ವೆಕ್ಟರ್-ಹರಡುವ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ನಿರ್ದಿಷ್ಟ ಸಂಖ್ಯೆಯ ಹಾಸಿಗೆಗಳನ್ನು ಬೆಂಗಳೂರಿನ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾಯ್ದಿರಿಸುವಂತೆ ನಿರ್ದೇಶಿಸಿದೆ.

ಆದ್ದರಿಂದ, ಮುಂದಿನ ಆದೇಶದವರೆಗೆ ಬೆಂಗಳೂರು ನಗರದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ರೋಗಿಗಳ ನಿರ್ವಹಣೆಗೆ ನಿರ್ದಿಷ್ಟ ಸಂಖ್ಯೆಯ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ ಎಂಬುದನ್ನು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಡೆಂಗ್ಯೂ ಚಿಕಿತ್ಸೆಗೆ ಬೆಂಗಳೂರು ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಮೀಸಲು

ಆರೋಗ್ಯ ಇಲಾಖೆಯ ಆದೇಶದ ಪ್ರಕಾರ, ಕೆಸಿ ಜನರಲ್ ಆಸ್ಪತ್ರೆ, ಸಿವಿ ರಾಮನ್ ಆಸ್ಪತ್ರೆ ಮತ್ತು ಜಿಎಚ್ ಜಯನಗರದಲ್ಲಿ ತಲಾ 25 ಹಾಸಿಗೆಗಳನ್ನು ಕಾಯ್ದಿರಿಸುವಂತೆ ತಿಳಿಸಲಾಗಿದೆ. ಯಲಹಂಕ ಮತ್ತು ಕೆಆರ್ ಪುರಂ ತಾಲೂಕು ಆಸ್ಪತ್ರೆಗಳಲ್ಲಿ ತಲಾ 10 ಹಾಸಿಗೆಗಳನ್ನು ಕಾಯ್ದಿರಿಸಲು ತಿಳಿಸಲಾಗಿದೆ ಎಂದು ವರದಿ ವಿವರಿಸಿದೆ.

ಇನ್ನಷ್ಟು ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಹಿಂದೂಸ್ತಾನ್ ಟೈಮ್ಸ್ ಕನ್ನಡದ ವಾಟ್ಸ್ಆಪ್ ಚಾನೆಲ್ ಸೇರಿ.

"ಜಿಲ್ಲಾ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಸ್ಪತ್ರೆಗಳಲ್ಲಿ ತಲಾ 10 ಹಾಸಿಗೆಗಳು ಮತ್ತು ತಾಲೂಕು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಸ್ಪತ್ರೆಗಳಲ್ಲಿ ತಲಾ ಐದು ಹಾಸಿಗೆಗಳನ್ನು ಕಾಯ್ದಿರಿಸುವ ಕುರಿತು ಈ ಹಿಂದೆ ನೀಡಲಾದ ಆದೇಶಗಳ ಮುಂದುವರಿದ ಭಾಗ ಇದಾಗಿದೆ. ಈ ಆದೇಶವು ಮುಂದಿನ ಆದೇಶದವರೆಗೆ ಮುಂದುವರಿಯುತ್ತದೆ" ಎಂದು ಆರೋಗ್ಯ ಇಲಾಖೆಯ ಆದೇಶ ವಿವರಿಸಿದ್ದಾಗಿ ವರದಿ ಹೇಳಿದೆ.

ಕರ್ನಾಟಕದಲ್ಲಿ 10,000ದ ಗಡಿ ದಾಟಿದ ಡೆಂಗ್ಯೂ ಪ್ರಕರಣ, ಬೆಂಗಳೂರಲ್ಲಿ ಜಾಗೃತಿ ಅಭಿಯಾನ

ಕರ್ನಾಟಕ ರಾಜ್ಯ ಕಣ್ಗಾವಲು ಘಟಕದ ಸಾಂಕ್ರಾಮಿಕ ರೋಗಗಳ ವಾರದ ವರದಿ ಪ್ರಕಾರ, ಮೇ 27 ಮತ್ತು ಜೂನ್ 30 ರ ನಡುವಿನ ಐದು ವಾರಗಳಲ್ಲಿ 16,595 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇದರಲ್ಲಿ 2,588 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಬೆಂಗಳೂರು ನಗರವೊಂದರಲ್ಲೇ ಜುಲೈ 1 ಮತ್ತು ಜುಲೈ 6 ರ ನಡುವೆ 776 ಪ್ರಕರಣಗಳು ದೃಢಪಟ್ಟಿವೆ. ದಿನಕ್ಕೆ ಸರಾಸರಿ 130-140 ಪ್ರಕರಣಗಳು ದಾಖಲಾಗುತ್ತಿವೆ. ಈ ನಡುವೆ, ಈ ವರ್ಷ ಮೊದಲ ಬಾರಿಗೆ ಕರ್ನಾಟಕದಲ್ಲಿ ಡೆಂಗ್ಯೂ ಪ್ರಕರಣ 10,000ದ ಗಡಿ ದಾಟಿದೆ. ನಿಖರವಾಗಿ ಹೇಳುವುದಾದರೆ ಈ ವರ್ಷ ಜನವರಿಯಿಂದ ನಿನ್ನೆ ತನಕ 10,499 ಡೆಂಗ್ಯೂ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿವೆ.

ಬೆಂಗಳೂರಿನಲ್ಲಿ 3,000 ಕ್ಕೂ ಹೆಚ್ಚು ತಂಡಗಳು ಮನೆ-ಮನೆಗೆ ತೆರಳಿ ಜಾಗೃತಿ ಅಭಿಯಾನ ನಡೆಸುತ್ತಿವೆ. ಇದು ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲಾ 25 ಲಕ್ಷ ಮನೆಗಳನ್ನು ಒಳಗೊಂಡಿದೆ. ಇದಕ್ಕಾಗಿ ಕಿರಿಯ ಆರೋಗ್ಯ ನಿರೀಕ್ಷಕರು, ಆಶಾ ಕಾರ್ಯಕರ್ತೆಯರು, ಎಎನ್‌ಎಂ ಸಿಬ್ಬಂದಿ, ಲಿಂಕ್ ವರ್ಕರ್‌ಗಳು ಮತ್ತು ಸ್ವಯಂಸೇವಕರನ್ನು ನಿಯೋಜಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಕಮಿಷನರ್ ತುಷಾರ್ ಗಿರಿನಾಥ್ ಜುಲೈ 8 ರಂದು ಹೇಳಿದ್ದರು.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.

Whats_app_banner