Heavy Rainfall: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಬಿರುಗಾಳಿ ಸಹಿತ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ
Heavy Rainfall Alert in Karnataka: ಆಗಸ್ಟ್ 25 ಭಾನುವಾರವಾದ ಇಂದು ಕರ್ನಾಟಕದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ಅದರಲ್ಲೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಹೆಚ್ಚು.
ಬೆಂಗಳೂರು: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಮೇತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇಲ್ಲಿ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ಇರಲಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಭಾರಿಯಾಗುವ ಸಾಧ್ಯತೆ ಒದೆ. ಆದರೆ ಇಲ್ಲಿ ಗಾಳಿಯ ವೇಗ ಗಂಟೆಗೆ 4 ರಿಂದ 50 ಕಿಮೀ ಇರಲಿದೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇರುವ ಕಾರಣ ಜನರು ಎಚ್ಚರದಿಂದ ಇರಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ. ಆಗಸ್ಟ್ 26ರ ಸೋಮವಾರವೂ ಕರಾವಳಿ ಜಿಲ್ಲೆಗಳಲ್ಲಿ ಇಂತಹದ್ದೇ ಮಳೆ ಕಾಣಿಸಿಕೊಳ್ಳಲಿದೆ ಎಂದೂ ಮಾಹಿತಿ ನೀಡಿದೆ.
ಮೀನುಗಾರರಿಗೆ ಎಚ್ಚರಿಕೆ
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಬಿರುಗಾಳಿಯೂ ಇರಲಿರುವ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗಾಳಿಯ ವೇಗ ಗಂಟೆಗೆ 35 ಕಿಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವರೆಗೆ ಗಾಳಿ ಬೀಸಲಿದೆ. ಕರಾವಳಿ ಕರ್ನಾಟಕದ ಉದ್ದಕ್ಕೂ ಮತ್ತು ಹೊರಗೆ ಚಾಲ್ತಿಯಲ್ಲಿರಲಿದೆ. ಹಾಗಾಗಿ ಮೀನುಗಾರರು ಎಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು ಸುತ್ತಮುತ್ತ ಮುನ್ಸೂಚನೆ ಏನು?
ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದ್ದು, ಅಲ್ಲಲ್ಲಿ ಗುಡುಗು ಕಾಣಿಸಿಕೊಂಡರೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಮೀ ತಲುಪುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 21° C ಆಗಿರಬಹುದು.
ಆಗಸ್ಟ್ 24ರಂದು ಎಲ್ಲಿಲ್ಲೆ ಮಳೆ ಬಿದ್ದಿತ್ತು?
ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡು ಮೇಲೆ ನೈರುತ್ಯ ಮಾನ್ಸೂನ್ ಸಾಮಾನ್ಯವಾಗಿತ್ತು. ನೈರುತ್ಯ ಮಾನ್ಸೂನ್ ದಕ್ಷಿಣ ಒಳನಾಡು ಮೇಲೆ ದುರ್ಬಲವಾಗಿತ್ತು. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡು ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೇ ಅತಿ ಹೆಚ್ಚು ಮಳೆಯಾಗಿದೆ. ಬೆಳಗಾವಿ, ಧಾರವಾಡ, ಉಡುಪಿ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ.
ಎಲ್ಲಿ ಹೆಚ್ಚು ಮಳೆ ಬಿದ್ದಿದೆ?
ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ನಲ್ಲಿ ಅತಿ ಹೆಚ್ಚು ಮಳೆ (ಆಗಸ್ಟ್24) ಬಿದ್ದಿದೆ. ಇಲ್ಲಿ 13 ಸೆಂ.ಮೀ ಮಳೆ ಸುರಿದಿದೆ. ಅದಲ್ಲದೆ, ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ 11 ಸೆಂ.ಮೀ ಮತ್ತು ಬೆಳಗಾವಿರ ಲೋಂಡಾದಲ್ಲಿ 7 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡದ ಕದ್ರಾ, ಗೋಕರ್ಣ, ಅಂಕೋಲಾದಲ್ಲಿ 5 ಸೆಂ.ಮೀ, ಅದೇ ಜಿಲ್ಲೆಯ ಜೋಯಿಡಾ, ಜಗಲಬೆಟ್ನಲ್ಲಿ 4 ಸೆಂ.ಮೀ ಮಳೆಯಾಗಿದೆ. ಅಲ್ಲದೆ, ಯಲ್ಲಾಪುರ, ಕುಮುಟಾ, ಹಳಿಯಾಳ, ಬೀದರ್ನ ಮುನ್ನಳ್ಳಿ, ಬೆಳಗಾವಿಯ ನಿಪ್ಪಾಣಿಯಲ್ಲಿ 3 ಸೆಂ.ಮೀ ಮಳೆಯಾಗಿದೆ.
ಕಾರವಾರ ವೀಕ್ಷಣಾಯಲಯ, ಕಾರ್ಕಳ, ಉಡುಪಿ, ಭಾಲ್ಕಿ, ಬೆಳಗಾವಿ, ಚಿಕ್ಕೋಡಿ, ಕೊಟ್ಟಿಗೆಹಾರ, ಆಗುಂಬೆಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಶಿರಾಲಿ, ಕೋಟಾ, ಕಿರವತ್ತಿ, ಮುಂಡಗೋಡು, ಸಿದ್ಧಾಪುರ, ಉಪ್ಪಿನಂಗಡಿ, ಹುಕ್ಕೇರಿ, ಸಂಕೇಶ್ವರ, ರಾಯಭಾಗ, ಕಲಘಟಗಿ, ಹುಬ್ಬಳ್ಳಿ, ಹಿಡಕಲ್ ಅಣೆಕಟ್ಟು, ಧಾರವಾಡ, ಬೈಲಹೊಂಗಲ, ವಿರಾಜಪೇಟೆ, ಭಾಗಮಂಡಲ, ಕಮ್ಮರಡಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.