Reservation: ಒಕ್ಕಲಿಗ, ಪಂಚಮಸಾಲಿ ಮೀಸಲಾತಿ ವಿಚಾರ: ಮುಂದಿನ ವಿಚಾರಣೆವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಸೂಚನೆ!
ಮಹತ್ವದ ಬೆಳವಣಿಗೆಯೊಂದರಲ್ಲಿಒಕ್ಕಲಿಗ ಹಾಗೂ ಲಿಂಗಾಯತ ಪಂಚಮಸಾಲಿ ಸಮಯದಾಯಕ್ಕೆ, ರಾಜ್ಯ ಸರ್ಕಾರ ನೀಡಿರುವ 2ಸಿ ಹಾಗೂ 2ಡಿ ಮೀಸಲಾತಿಗೆ ಹೈಕೋರ್ಟ್ ಬ್ರೇಕ್ ನೀಡಿದೆ. ಮೀಸಲಾತಿ ವಿಚಾರದಲ್ಲಿ ಮುಂದಿನ ವಿಚಾರಣೆವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ, ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿಒಕ್ಕಲಿಗ ಹಾಗೂ ಲಿಂಗಾಯತ ಪಂಚಮಸಾಲಿ ಸಮಯದಾಯಕ್ಕೆ, ರಾಜ್ಯ ಸರ್ಕಾರ ನೀಡಿರುವ 2ಸಿ ಹಾಗೂ 2ಡಿ ಮೀಸಲಾತಿಗೆ ಹೈಕೋರ್ಟ್ ಬ್ರೇಕ್ ನೀಡಿದೆ. ಮೀಸಲಾತಿ ವಿಚಾರದಲ್ಲಿ ಮುಂದಿನ ವಿಚಾರಣೆವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ, ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದಂತೆ ರಾಘವೇಂದ್ರ ಡಿ.ಜಿ. ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಜ.30ರಂದು ಮುಂದಿನ ವಿಚಾರಣೆ ನಡೆಸುವುದಾಗಿ ತಿಳಿಸಿತು. ಅಲ್ಲಿಯವರೆಗೂ ಮೀಸಲಾತಿ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆಯೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ರವಿವರ್ಮ್ ಕುಮಾರ್, ಹೊಸ ಮೀಸಲಾತಿಗೆ ತಡೆ ನೀಡಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಿದರು. ಕಾಲಾವಕಾಶದ ಕೊರತೆ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಜ.30ಕ್ಕೆ ಮುಂದೂಡಲಾಗುತ್ತಿದ್ದು, ಅಲ್ಲಿಯವರೆಗೆ ಮೀಸಲಾತಿ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತು. ವಿಚಾರಣೆ ಜ. ಕ್ಕೆ ಮುಂದೂಡಿದ್ದು, ಅಲ್ಲಿಯವರೆಗೆ ಮೀಸಲಾತಿಯನ್ನು ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದೆ.
ಒಕ್ಕಲಿಗ ಹಾಗೂ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲು, ಪ್ರತ್ಯೇಕ ವರ್ಗಗಳನ್ನು ರಚಿಸಿರುವುದು ಗೊಂದಲಕ್ಕೆ ಕಾರಣವಾಗಿದೆ. ತನಗೆ ನೀಡಿದ್ದ 2ಡಿ ಕೆಟಗರಿಯನ್ನು ತಿರಸ್ಕರಿಸಿರುವ ಪಂಚಮಸಾಲಿ ಸಮುದಾಯ, 2ಎ ಮೀಸಲಾತಿ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದೆ.
ಒಕ್ಕಲಿಗ ಹಾಗೂ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲು ಹೊಸ ಕೆಟಗಿರಿ ಸೃಷ್ಟಿಸಿದ್ದ ರಾಜ್ಯ ಸರ್ಕಾರ, 3ಎ ಮತ್ತು 3ಬಿನಲ್ಲಿದ್ದ ಉಳಿದ ಸಮುದಾಯಗಳ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಭರವಸೆ ನೀಡಿದೆ. ಆದಾಗ್ಯೂ, ಈ ಕುರಿತು ಗೊಂದಲಗಳು ಮುಂದುವರೆದಿವೆ.
ಮುಂದಿನ ದಿನಗಳಲ್ಲಿ ಈ ಮೀಸಲಾತಿ ಪ್ರಮಾನ ಹೆಚ್ಚು ಕಡಿಮೆಯಾಗಬಹುದು ಎಂಬ ಆತಂಕ ಮನೆ ಮಾಡಿದ್ದು, ಹೊಸ ಕೆಟಗಿರಿ ಸೃಷ್ಟಿಗೆ ಅಪಸ್ವರ ಕೇಳಿಬರುತ್ತಿದೆ. ಅಲ್ಲದೇ ಪ್ರಬಲ ಸಮುದಾಯಗಳ ಒತ್ತಡದಿಂದ ಪಾರಾಗಲು ರಾಜ್ಯ ಸರ್ಕಾರ ಹೊಸ ಕೆಟಗಿರಿಗಳನ್ನು ಸೃಷ್ಟಿಸಿದೆ ಎಂಬ ಆರೋಪವೂ ಕೇಳಿಬಂದಿತ್ತು.
ಆದರೆ 2ಡಿ ಕೆಟಗರಿಯನ್ನು ತಿರಸ್ಕರಿಸಿರುವ ಪಂಚಮಸಾಲಿ ಸಮುದಾಯ, ತನಗೆ 2ಎ ಕೆಟಗಿರಿಯಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸುತ್ತಿದೆ.
ಒಕ್ಕಲಿಗ ಹಾಗೂ ಲಿಂಗಾಯತ ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ, ಕಳೆದ ಡಿಸೆಂಬರ್ 29ರಂದು ಬೆಳಗಾವಿಯಲ್ಲಿ ನಡೆದ ಸಚಿವ ಸಂಪುಟದಲ್ಲಿ, 2ಸಿ ಹಾಗೂ 2ಡಿ ಎಂಬ ಎರಡು ಪ್ರತ್ಯೇಕ ಕೆಟಗಿರಿ ರಚಿಸುವ ತೀರ್ಮಾನ ಮಾಡಲಾಗಿತ್ತು. 3ಎನಲ್ಲಿದ್ದ ಒಕ್ಕಲಿಗರಿಗೆ ಹೊಸದಾಗಿ 2ಸಿ ಕೆಟಗರಿ ಹಾಗೂ 3ಬಿನಲ್ಲಿದ್ದ ಲಿಂಗಾಯತರಿಗೆ 2ಡಿ ಕೆಟಗರಿ ನೀಡುವುದಾಗಿ ಭರವಸೆ ನೀಡಿತ್ತು.
ಒಟ್ಟಿನಲ್ಲಿ ಒಕ್ಕಲಿಗ ಹಾಗೂ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರವಾಗಿ ಗೊಂದಲಗಳು ಮುಂದುವರೆದಿದ್ದು, ಜ.30ರದು ವಿಚಾರಣೆ ಮರು ಆರಂಭಗೊಳ್ಳುವವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಹೈಕೋರ್ಟ್ ಹೇಳಿರುವುದು ಗಮನ ಸೆಳೆದಿದೆ.
ಇಂದಿನ ಪ್ರಮುಖ ಸುದ್ದಿ
PM Modi Security Breach: ಮೋದಿ ಹುಬ್ಬಳ್ಳಿ ರೋಡ್ ಶೋನಲ್ಲಿ ಭದ್ರತಾ ಲೋಪ?: ಹು-ಧಾ ಪೊಲೀಸರ ಸ್ಪಷ್ಟನೆ ಏನು?
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಬ್ಬಳ್ಳಿ ರೋಡ್ ಶೋ ವೇಳೆ, ಬಾಲಕನೋರ್ವ ಅವರಿಗೆ ಹೂಮಾಲೆ ಹಾಕಲು ಪ್ರಯತ್ನಿಸಿದ್ದು, ಭದ್ರತಾ ಲೋಪದ ಪ್ರಶ್ನೆಗಳನ್ನು ಎತ್ತಿದೆ. ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಹು-ಧಾ ಪೊಲೀಸರು, ಇದು ಭದ್ರತಾ ಲೋಪವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.
ವಿಭಾಗ