HSRP Number Plate: ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಫೆ 17 ಕೊನೆಯ ದಿನ; ಗಡುವು ವಿಸ್ತರಿಸಲು ವಾಹನ ಸವಾರರ ಒತ್ತಾಯ
ಕನ್ನಡ ಸುದ್ದಿ  /  ಕರ್ನಾಟಕ  /  Hsrp Number Plate: ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಫೆ 17 ಕೊನೆಯ ದಿನ; ಗಡುವು ವಿಸ್ತರಿಸಲು ವಾಹನ ಸವಾರರ ಒತ್ತಾಯ

HSRP Number Plate: ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಫೆ 17 ಕೊನೆಯ ದಿನ; ಗಡುವು ವಿಸ್ತರಿಸಲು ವಾಹನ ಸವಾರರ ಒತ್ತಾಯ

HSRP Number Plate: ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ಅಳವಡಿಸಲು ಫೆ 17 ಕೊನೆಯ ದಿನವಾಗಿತ್ತು. ಆದರೆ ಸರ್ವರ್‌ ಹಾಗೂ ಇನ್ನಿತರ ತಾಂತ್ರಿಕ ಸಮಸ್ಯೆಗಳಿಂದ ಇನ್ನೂ ಬಹಳಷ್ಟು ವಾಹನಗಳಿಗೆ ನಂಬರ್‌ ಪ್ಲೇಟ್‌ ಅಳವಡಿಸಬೇಕಿದ್ದು ವಾಹನ ಸವಾರರು ಗಡುವು ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ.

ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಗಡುವು ವಿಸ್ತರಿಸಲು ವಾಹನ ಸವಾರರ ಒತ್ತಾಯ
ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಗಡುವು ವಿಸ್ತರಿಸಲು ವಾಹನ ಸವಾರರ ಒತ್ತಾಯ

ಬೆಂಗಳೂರು: ಸಾರಿಗೆ ಇಲಾಖೆಯು ವಾಹನ ಸವಾರರಿಗೆ ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ನೀಡಿದ್ದ ಗಡುವು ಇನ್ನು ಕೆಲವೇ ದಿನಗಳು ಮುಕ್ತಾಯವಾಗುತ್ತಿದೆ. ಇದಕ್ಕೂ ಮುನ್ನ ನವೆಂಬರ್‌ 17ಕ್ಕೆ ನಂಬರ್‌ ಪ್ಲೇಟ್‌ ಅವಧಿ ಸಮಯ ಮುಕ್ತಾಯವಾಗಬೇಕಿತ್ತು. ಆದರೆ ನಂತರ ಫೆಬ್ರವರಿ 17ವರೆಗೂ ವಿಸ್ತರಿಸಲಾಗಿತ್ತು. ಆದರೆ ಇದೀಗ ಮತ್ತೆ ಅವಧಿ ವಿಸ್ತರಣೆಗೆ ವಾಹನ ಸವಾರರು ಒತ್ತಾಯಿಸುತ್ತಿದ್ದಾರೆ.

ತಾಂತ್ರಿಕ ಸಮಸ್ಯೆ

ಹಳೆಯ ನಂಬರ್‌ ಪ್ಲೇಟ್‌ಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ಅಳವಡಿಸಲು ಗಡುವು ಸಮೀಪಿಸುತ್ತಿದೆ. ಆದರೆ ಈ ಪ್ರಕ್ರಿಯೆಗೆ ತಾಂತ್ರಿಕ ದೋಷಗಳು ಅಡ್ಡಿಯಾಗಿರುವುದರಿಂದ ಅದನ್ನು ವಿಸ್ತರಿಸುವಂತೆ ವಾಹನ ಮಾಲೀಕರು ಒತ್ತಾಯಿಸುತ್ತಿದ್ದಾರೆ. ಫೆಬ್ರವರಿ 17 ಕ್ಕೆ ಗಡುವು ನಿಗದಿಪಡಿಸಲಾಗಿದ್ದು, ಸರ್ವರ್ ನಿಧಾನಗತಿ ಮತ್ತು ಇತರ ತಾಂತ್ರಿಕ ಸಮಸ್ಯೆಗಳಿಂದ ಎಚ್‌ಎಸ್‌ಆರ್‌ಪಿಗಳನ್ನು ಬುಕ್ ಮಾಡುವಲ್ಲಿ ವಾಹನ ಸವಾರರು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದಾರೆ.

ಫೆ 17ಕ್ಕೆ ಕೊನೆಯ ದಿನ

1 ಏಪ್ರಿಲ್‌ 2019 ಕ್ಕಿಂತ ಮುನ್ನ ನೋಂದಣಿಯಾದ ವಾಹನಗಳಿಗೆ 90 ದಿನಗಳಲ್ಲಿ ಎಚ್‌ಎಸ್‌ಆರ್‌ಪಿ ಫಲಕ ಅಳವಡಿಸಬೇಕು ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಕಳೆದ ವರ್ಷ ನವೆಂಬರ್‌ 17 ವರೆಗೂ ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಈ ನಡುವೆ ಕೋರ್ಟ್‌ನಲ್ಲಿ ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನಂಬರ್‌ ಪ್ಲೇಟ್‌ ವಿಸ್ತರಣೆ ಗಡುವು ವಿಸ್ತರಿಸುವಂತೆ ರಾಜ್ಯಕ್ಕೆ ಸೂಚನೆ ನೀಡಿತ್ತು. ಹೈ ಕೋರ್ಟ್‌ ಸೂಚನೆ ಮೇರೆಗೆ ಸಾರಿಗೆ ಇಲಾಖೆ 90 ದಿನಗಳಿಗೆ ಅಂದರೆ ಫೆ 17ವರೆಗೂ ಅವಧಿ ವಿಸ್ತರಣೆ ಮಾಡಿತ್ತು. ಆದರೆ ಇದೀಗ ಮತ್ತೆ ಗಡುವು ವಿಸ್ತರಿಸಲು ವಾಹನ ಸವಾರರು ಮತ್ತೆ ಸಾರಿಗೆ ಇಲಾಖೆಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಸಾರಿಗೆ ಅಧಿಕಾರಿಯೊಬ್ಬರು ಕಳೆದ 4 ತಿಂಗಳಲ್ಲಿ ಹೆಚ್‌ಎಸ್‌ಆರ್‌ಪಿ ಫಲಕ ಅಳವಡಿಸಲು ನಿಗದಿಪಡಿಸಲಾದ ವಾಹನಗಳ ಶೇ. 10 ರಷ್ಟು ಮಾತ್ರ ನವೀಕರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

‌ಏನಿದು ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್‌ ಪ್ಲೇಟ್?

ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್‌ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್‌ ಪ್ಲೇಟ್‌ಗಳನ್ನು ಅಳವಡಿಸಬೇಕಿದೆ. ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಹೆಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕವಾಗಲಿದೆ.

Whats_app_banner