ಹುಬ್ಬಳ್ಳಿಯಲ್ಲಿ ಸಿಲೆಂಡರ್‌ ಸ್ಪೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು, ಉಳಿದವರಿಗೆ ಚಿಕಿತ್ಸೆ ಮುಂದುವರಿಕೆ
ಕನ್ನಡ ಸುದ್ದಿ  /  ಕರ್ನಾಟಕ  /  ಹುಬ್ಬಳ್ಳಿಯಲ್ಲಿ ಸಿಲೆಂಡರ್‌ ಸ್ಪೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು, ಉಳಿದವರಿಗೆ ಚಿಕಿತ್ಸೆ ಮುಂದುವರಿಕೆ

ಹುಬ್ಬಳ್ಳಿಯಲ್ಲಿ ಸಿಲೆಂಡರ್‌ ಸ್ಪೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು, ಉಳಿದವರಿಗೆ ಚಿಕಿತ್ಸೆ ಮುಂದುವರಿಕೆ

ಹುಬ್ಬಳ್ಳಿ ನಗರದಲ್ಲಿ ನಾಲ್ಕು ದಿನದ ಹಿಂದೆ ಸಿಲೆಂಡರ್‌ ಸ್ಪೋಟದಿಂದ ತೀವ್ರವಾಗಿ ಗಾಯಗೊಂಡಿದ್ದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ಸಿಲೆಂಡರ್‌ ಸ್ಪೋಟದಿಂದ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳು.
ಹುಬ್ಬಳ್ಳಿಯಲ್ಲಿ ಸಿಲೆಂಡರ್‌ ಸ್ಪೋಟದಿಂದ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳು.

ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಸಿಲೆಂಡರ್‌ ಸ್ಪೋಟದಿಂದ ತೀವ್ರವಾಗಿ ಗಾಯಗೊಂಡಿದ್ದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಲ್ಲಿ ಇಬ್ಬರು ಮೃತಪಟ್ಟಿದ್ದು, ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ಘೋಷಣೆ ಮಾಡಲಾಗಿದೆ. ತಲಾ ಐದು ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿಗಳ ಸುರಕ್ಷಾ ನಿಧಿಯಿಂದ ವಿತರಣೆ ಮಾಡಲಾಗಿದೆ. ಹುಬ್ಬಳ್ಳಿ ನಗರದ ಸಾಯಿನಗರದ ಅಚ್ಚವ್ವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ ಭಾನುವಾರ ತಡರಾತ್ರಿ 1.30ರ ವೇಳೆ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ, 10 ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡಿದ್ದರು. ಇವರಲ್ಲಿ ಅಜ್ಜಾಸ್ವಾಮಿ(58) ಆಲಿಯಾಸ್‌ ನಿಜಲಿಂಗಪ್ಪ ಬೇಪುರಿ ಹಾಗೂ ಸಂಜಯ ಸವದತ್ತಿ(20) ಎಂಬುವವರು ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಇನ್ನೂ ಎಂಟು ಮಂದಿ ಹುಬ್ಬಳ್ಳಿ ಕೆಎಂಸಿ-ಆರ್‌ಐನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆಲ ದಿನದಿಂದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಾಗಿ ಗುಂಪೊಂದು ಪೂಜೆ ಸಲ್ಲಿಸಿ ರಾತ್ರಿ ಮಲಗಿತ್ತು. ನಿದ್ದೆಗಣ್ಣಿನಲ್ಲಿ ಮಾಲಾಧಾರಿಯೊಬ್ಬರು ಸಿಲೆಂಡರ್‌ಗೆ ಒದ್ದಿದರಿಂದ ಉರುಳಿ ಬಿದ್ದು ಸೋರಿಕೆ ನಂತರ ಸ್ಪೋಟಿಸಿತ್ತು. ಈ ವೇಳೆ ಹತ್ತು ಮಂದಿ ಗಾಯಗೊಂಡು ಹಲವರ ಸ್ಥಿತಿ ಗಂಭೀರವಾಗಿತ್ತು. ಅವರಲ್ಲಿ ಇಬ್ಬರು ಗುರುವಾರ ಅಸುನೀಗಿದ್ದಾರೆ.

ಉಳಿದ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆಯುತ್ತಿದ್ದು, ವಿನಾಯಕ ಎಂಬ ಯುವಕನನ್ನು ಬರ್ನ ವಾರ್ಡ್ಗೆ ಸ್ಥಳಾಂತರ ಮಾಡಲಾಗಿದೆ. ಆತ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಗುಣಮುಖನಾಗುತ್ತಿದ್ದಾನೆ. ಉಳಿದವರ ಸ್ಥಿತಿ ಇನ್ನೂ ಗಂಭೀರವಾಗಿದೆ. ಅವರಿಗೆ 4 ಜನ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ.

ಪರಿಹಾರ ವಿತರಣೆ

ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವನ ಕಾಲೋನಿಯ ಈಶ್ವರ ದೇವಸ್ಥಾನದಲ್ಲಿ ಅಡುಗೆ ಅನಿಲ (ಸಿಲಿಂಡರ್ ) ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡು, ಕೆಎಂಸಿಆರ್‌ಐನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 9 ಅಯ್ಯಪ್ಪ ಮಾಲಾಧಾರಿಗಳು ಪೈಕಿ ನಿಜಲಿಂಗಪ್ಪ ಬೇಪುರಿ ಹಾಗೂ ಸಂಜಯ ಸವದತ್ತಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಘಟನೆಯನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ರೂ.5 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್‌ ಹೇಳಿದರು.

ಇಂದು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ( ಕೆಎಂಸಿ&ಆರ್‌ಐ ) ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಅವರು ಮಾತನಾಡಿ, ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಕೆಎಂಸಿಆರ್‌ಐ ಸಂಸ್ಥೆಯು ಚಿಕಿತ್ಸೆಗೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗಿತ್ತು. ಅಲ್ಲದೇ ಬೇರೆ ಕಡೆಯ ವಿಶೇಷ ತಜ್ಞ ವೈದ್ಯರು ಮತ್ತು ಪ್ಲಾಸ್ಟಿಕ್ ಸರ್ಜನ್‌ಗಳನ್ನು ಕರೆಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶೇ.80 ರಿಂದ 90 ರಷ್ಟು ದೇಹವು ಸುಟ್ಟಿರುವ ಕಾರಣ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೃತರ ಕುಟುಂಬಸ್ಥರಿಗೆ ನಷ್ಟವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಮುಖ್ಯಮಂತ್ರಿಗಳು ಸಹ ಮೃತರಿಗೆ ಸಾಂತ್ವನ ತಿಳಿಸಿದ್ದಾರೆ ಎಂದರು.

ತಜ್ಞ ವೈದ್ಯರಿಂದ ಚಿಕಿತ್ಸೆ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ. ಕೆಎಂಸಿಆರ್‌ಐ ವೈದ್ಯರು ಹಾಗೂ ಕುಟುಂಬಸ್ಥರೊಂದಿಗೆ ಚಿಕಿತ್ಸೆ ಕುರಿತು ಸಮಾಲೋಚನೆ ನಡೆಸಿ ಚಿಕಿತ್ಸೆ ನೀಡಲಾಗುವುದು. ಇಂತಹ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು ಎಂದು ಅವರು ತಿಳಿಸಿದರು.

ಸಿಎಂ ಸೂಚನೆ

ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಮೃತ ಅಯ್ಯಪ್ಪ ಮಾಲಾಧಾರಿಗಳನ್ನ 58 ವರ್ಷದ ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ ಹಾಗೂ 20 ವರ್ಷದ ಸಂಜಯ ಸವದತ್ತಿ ಎಂದು ಗುರುತಿಸಲಾಗಿದೆ. ಉಳಿದ ಏಳು ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು ಬೆಂಗಳೂರು ಮತ್ತಿತರ ಕಡೆಗಳಿಂದ ಉನ್ನತ ಚಿಕಿತ್ಸೆಗಾಗಿ ತಜ್ಞ ವೈದ್ಯರನ್ನು ಕರೆಸಲಾಗಿದೆ ಎಂದು ಸೂಚಿಸಿದ್ದಾರೆ.

Whats_app_banner