ಕನ್ನಡ ಸುದ್ದಿ  /  ಕರ್ನಾಟಕ  /  Indian Railways: ಹುಬ್ಬಳ್ಳಿಗೆ ಆಗಮಿಸುವ 5 ರೈಲುಗಳ ಸಮಯದಲ್ಲಿ ಬದಲಾವಣೆ, ಯಾವ್ಯಾವ ರೈಲು ತಡ?

Indian Railways: ಹುಬ್ಬಳ್ಳಿಗೆ ಆಗಮಿಸುವ 5 ರೈಲುಗಳ ಸಮಯದಲ್ಲಿ ಬದಲಾವಣೆ, ಯಾವ್ಯಾವ ರೈಲು ತಡ?

Hubli News ಭಾರತೀಯ ರೈಲ್ವೆ( Indian Railway) ಹುಬ್ಬಳ್ಳಿಯ ನೈರುತ್ಯ ವಲಯವು ಹುಬ್ಬಳ್ಳಿ ಆಗಮಿಸಿ ನಿರ್ಗಮಿಸುವ ಐದು ರೈಲುಗಳ ಸಮಯದಲ್ಲಿ ಬದಲಾವಣೆ ಮಾಡಿದೆ.

ಹುಬ್ಬಳ್ಳಿಗೆ ಆಗಮಿಸುವ ಕೆಲವು ರೈಲುಗಳ ಸಮಯದಲ್ಲಿ ಬದಲಾವಣೆಯಾಗಲಿದೆ.
ಹುಬ್ಬಳ್ಳಿಗೆ ಆಗಮಿಸುವ ಕೆಲವು ರೈಲುಗಳ ಸಮಯದಲ್ಲಿ ಬದಲಾವಣೆಯಾಗಲಿದೆ.

ಹುಬ್ಬಳ್ಳಿ: ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ಕೆಲವು ರೈಲುಗಳ ಆಗಮನ ಮತ್ತು ನಿರ್ಗಮನದ ಸಮಯವನ್ನು ಪರಿಷ್ಕರಿಸಲಾಗಿದೆ. ಈ ರೈಲುಗಳ ಬದಲಾವಣೆಯು ಕೆಳಗೆ ತಿಳಿಸಿದ ಪ್ರಯಾಣದ ದಿನಾಂಕಗಳಿಂದ ಜಾರಿಗೆ ಬರಲಿದೆ ಎಂದು ನೈರುತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ. ಮುಖ್ಯವಾಗಿ ಬೆಂಗಳೂರು ಅಜ್ಮೀರ್‌ ಗರೀಬ್‌ ನವಾಜ್‌, ಬೆಂಗಳೂರು ಗಾಂಧಿಧಾಮ ಎಕ್ಸ್‌ಪ್ರೆಸ್‌, ಬೆಂಗಳೂರು ಜೋಧಪುರ ಹಾಗೂ ಮೈಸೂರು ಅಜ್ಮೀರ್‌ ರೈಲುಗಳ ಆಗಮನ ಹಾಗೂ ನಿರ್ಗಮನದಲ್ಲಿ ಮಾತ್ರ ಬದಲಾವಣೆಯಾಗಲಿದೆ.ಸುಗಮ ಮತ್ತು ತೊಂದರೆ ರಹಿತ ಪ್ರಯಾಣ ಬೆಳೆಸುವುದನ್ನು ಖಚಿತಪಡಿಸಿಕೊಳ್ಳಲು ಪ್ರಯಾಣಿಕರು ಈ ಪರಿಷ್ಕೃತ ಸಮಯವನ್ನು ಗಮನಿಸಬೇಕು ಎಂದು ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

1. ಜೂನ್ 21, 2024 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16532 ಕೆಎಸ್ಆರ್ ಬೆಂಗಳೂರು-ಅಜ್ಮೀರ್ ಗರೀಬ್ ನವಾಜ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ.

2. ಜೂನ್ 22, 2024 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16506 ಕೆಎಸ್ಆರ್ ಬೆಂಗಳೂರು-ಗಾಂಧಿ ಧಾಮ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ.

3. ಜೂನ್ 23, 2024 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16534 ಕೆಎಸ್ಆರ್ ಬೆಂಗಳೂರು-ಜೋಧಪುರ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ.

4. ಜೂನ್ 24, 2024 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16508 ಕೆಎಸ್ಆರ್ ಬೆಂಗಳೂರು-ಜೋಧಪುರ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ.

5. ಜೂನ್ 25, 2024 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16210 ಮೈಸೂರು-ಅಜ್ಮೀರ್ ದ್ವಿ-ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ.

ರೈಲುಗಳ ಸಂಚಾರ ತಾತ್ಕಾಲಿಕ ರದ್ದು ಮುಂದುವರಿಕೆ

ಗುಂಟೂರು ವಿಭಾಗದಲ್ಲಿ ನಡೆಯುತ್ತಿರುವ ಸುರಕ್ಷತಾ ಸಂಬಂಧಿತ ಕಾಮಗಾರಿ ಸಲುವಾಗಿ ಹುಬ್ಬಳ್ಳಿ ವಿಜಯವಾಡ ರೈಲುಗಳ ರದ್ದತಿಯನ್ನು ಮುಂದುವರಿಸಲಾಗುತ್ತಿದೆ ಎಂದು ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದೆ.

1.ರೈಲು ಸಂಖ್ಯೆ 17329 ಎಸ್ಎಸ್ಎಸ್ ಹುಬ್ಬಳ್ಳಿ-ವಿಜಯವಾಡ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಮತ್ತೆ ಜೂನ್ 30, 2024 ರವರೆಗೆ ರದ್ದು ಮಾಡಲಾಗುತ್ತಿದೆ. ಮೊದಲು ಮೇ 31, 2024 ರವರೆಗೆ ರದ್ದುಗೊಳಿಸಲಾಗುತ್ತಿದೆ ಎಂದು ಸೂಚಿಸಲಾಗಿತ್ತು.

2. ರೈಲು ಸಂಖ್ಯೆ 17330 ವಿಜಯವಾಡ-ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಮತ್ತೆ ಜುಲೈ 1, 2024 ರವರೆಗೆ ರದ್ದು ಮಾಡಲಾಗುತ್ತಿದೆ. ಮೊದಲು ಜೂನ್ 1, 2024 ರವರೆಗೆ ರದ್ದುಗೊಳಿಸಲಾಗುತ್ತಿದೆ.

ರೈಲುಗಳ ಸಂಬಂಧಿತ ಮಾಹಿತಿಗೆ 139 ಕ್ಕೆ ಕರೆ ಮಾಡಬಹುದು. ಇಲ್ಲವೇ www.enquiry.indianrail.gov.in. ಮೂಲಕವೂ ವಿವರ ಪಡೆಯಬಹುದಾಗಿ ಎಂದು ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024

ವಿಭಾಗ