ಕನ್ನಡ ಸುದ್ದಿ  /  Karnataka  /  Ias Officer Rohini Sindhuri Sends Notice To Ips D Roopa For Defamatory Posts

IAS vs IPS: ಮಾನಹಾನಿಕರ ಪೋಸ್ಟ್‌ ಆರೋಪ; ಐಪಿಎಸ್ ಅಧಿಕಾರಿ ಡಿ ರೂಪಾ ಅವರಿಗೆ ನೋಟಿಸ್ ಕಳುಹಿಸಿದ ರೋಹಿಣಿ ಸಿಂಧೂರಿ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ವಿರುದ್ಧ ಸುಳ್ಳು ಮತ್ತು ಮಾನಹಾನಿಕರ ಪೋಸ್ಟ್‌ಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಐಪಿಎಸ್ ಅಧಿಕಾರಿ ಡಿ ರೂಪ ಅವರಿಗೆ ನೋಟಿಸ್ ಕಳುಹಿಸಿದ್ದಾರೆ. 24 ಗಂಟೆಗಳ ಒಳಗೆ ಲಿಖಿತವಾಗಿ ಬೇಷರತ್ ಕ್ಷಮೆಯಾಚಿಸದಿದ್ದರೆ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಐಪಿಎಸ್ ಅಧಿಕಾರಿ ಡಿ ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ
ಐಪಿಎಸ್ ಅಧಿಕಾರಿ ಡಿ ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಐಎಎಸ್ ಹಾಗೂ ಐಪಿಎಸ್ ಮಹಿಳಾ ಅಧಿಕಾರಿಗಳ ನಡುವಿನ ಸಮರ ಕೋರ್ಟ್ ಮೆಟ್ಟಿಲೇರಿದೆ. ಡಿ ರೂಪಾ ಹಾಗೂ ಮಾಧ್ಯಮಗಳು ತಮ್ಮ ವಿರುದ್ಧ ಸುದ್ದಿ ಅಥವಾ ಯಾವುದೇ ವಿಚಾರಗಳನ್ನು ಹಂಚಿಕೊಳ್ಳದಂತೆ ತಡೆಯಾಜ್ಞೆ ಕೋರಿದ್ದರು. ಇದಕ್ಕೆ ನಗರದ ಸಿವಿಲ್ ಮತ್ತು ಸೆಷೆನ್ಸ್ ಕೋರ್ಟ್ ಸಮ್ಮತಿಸಿದೆ.

ಇದರ ಬೆನ್ನಲ್ಲೇ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ವಿರುದ್ಧ ಸುಳ್ಳು ಮತ್ತು ಮಾನಹಾನಿಕರ ಪೋಸ್ಟ್‌ಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಐಪಿಎಸ್ ಅಧಿಕಾರಿ ಡಿ ರೂಪ ಅವರಿಗೆ ನೋಟಿಸ್ ಕಳುಹಿಸಿದ್ದಾರೆ. 24 ಗಂಟೆಗಳ ಒಳಗೆ ಲಿಖಿತವಾಗಿ ಬೇಷರತ್ ಕ್ಷಮೆಯಾಚಿಸದಿದ್ದರೆ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಐಪಿಎಸ್ ಅಧಿಕಾರಿ ಡಿ ರೂಪಾ ಅವರು ಐಎಎಸ್ ಅಧಿಕಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ನಂತರ ಈ ಬೆಳವಣಿಗೆ ನಡೆದಿದೆ. ರೂಪಾ ಅವರು 2021 ಮತ್ತು 2022 ರಲ್ಲಿ ಮೂವರು ಐಎಎಸ್ ಅಧಿಕಾರಿಗಳೊಂದಿಗೆ ಸಿಂಧೂರಿ ಅವರ ಚಿತ್ರಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಿಂಧೂರಿ ಅವರು ತಮ್ಮ ಚಿತ್ರಗಳನ್ನು ಪುರುಷ ಐಎಎಸ್ ಅಧಿಕಾರಿಗಳಿಗೆ ಕಳುಹಿಸುವ ಮೂಲಕ ಸೇವಾ ನಡವಳಿಕೆಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ರೂಪಾ ಹೇಳಿದ್ದರು.

ಆರೋಪದ ನಂತರ, ಐಎಎಸ್ ಅಧಿಕಾರಿ ಸಿಂಧೂರಿ ಅವರು ವಕೀಲ ಸಿವಿ ನಾಗೇಶ್ ಮೂಲಕ ನೋಟಿಸ್ ಕಳುಹಿಸಿದ್ದಾರೆ. ತಮ್ಮ ವಿರುದ್ಧದ ಗಂಭೀರ ಆರೋಪ ಮಾಡಿರುವ ಬಗ್ಗೆ ಬೇಷರತ್ ಕ್ಷಮೆಯಾಚಿಸಲು ಒತ್ತಾಯಿಸಿದ್ದಾರೆ.

ಸಿಂಧೂರಿ ಅವರ ವೃತ್ತಿಪರ, ವೈಯಕ್ತಿಕ ಮತ್ತು ಸಾಮಾಜಿಕ ಇಮೇಜ್‌ಗೆ ಕಳಂಕ ತರುವ ಉದ್ದೇಶದಿಂದ ಪೋಸ್ಟ್‌ಗಳು ಮತ್ತು ಆರೋಪಗಳನ್ನು ಮಾಡಲಾಗಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ಇದಕ್ಕಾಗಿ 1 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಐಎಎಸ್ ಅಧಿಕಾರಿ ಕೋರಿದ್ದಾರೆ.

ಡಿ ರೂಪಾ ಅವರ ಸ್ಪಷ್ಟನೆ ಇದು

ನಾನು ಪ್ರಸ್ತಾಪಿಸಿದ ವಿಚಾರದ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ಎಂದು ಡಿ. ರೂಪಾ ಅವರು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಓರ್ವ ಐಎಎಸ್​ ಅಧಿಕಾರಿ, ತಮಿಳುನಾಡಿನಲ್ಲಿ ಐಪಿಎಸ್​ ಅಧಿಕಾರಿಯೊಬ್ಬರು ಸಾವನ್ನಪ್ಪಿದರು. ಅಲ್ಲದೇ ಕರ್ನಾಟಕದಲ್ಲಿಯೇ ಓರ್ವ ಐಎಎಸ್​ ದಂಪತಿ ಬೇರ್ಪಟ್ಟಿದ್ದಾರೆ. ಈ ಮಾದರಿಯ ಬಗ್ಗೆಯೂ ತನಿಖೆ ನಡೆಸಿ ಎಂದಿದ್ದಾರೆ.

ನಾನು ನನ್ನ ಪತಿ ಒಗ್ಗಟ್ಟಾಗಿದ್ದೇವೆ. ಈ ಬಗ್ಗೆ ಊಹಾಪೋಹ ಹರಡಿಸಬೇಡಿ. ಕುಟುಂಬಕ್ಕೆ ಧಕ್ಕೆ ತರುತ್ತಿರುವ ವ್ಯಕ್ತಿಗಳನ್ನು ಪ್ರಶ್ನಿಸಿ. ಇಲ್ಲದಿದ್ದರೆ ಇನ್ನೂ ಹಲವು ಕುಟುಂಬಗಳು ಇದಕ್ಕೆ ಬಲಿಯಾಗುತ್ತವೆ ಎಂದು ಮನವಿ ಮಾಡಿದ್ದಾರೆ. ನಾನೊಬ್ಬಳು ಧೈರ್ಯದ ಹೆಣ್ಣು. ಎಲ್ಲಾ ಸಂತ್ರಸ್ತ ಮಹಿಳೆಯರಿಗಾಗಿ ಹೋರಾಟ ನಡೆಸುತ್ತೇನೆ. ಎಲ್ಲಾ ಮಹಿಳೆಯರಿಗೆ ಹೋರಾಡಲು ಒಂದೇ ರೀತಿಯ ಶಕ್ತಿ ಇರುವುದಿಲ್ಲ. ದಯವಿಟ್ಟು ಅಂತಹ ಮಹಿಳೆಯರಿಗೆ ಧ್ವನಿಗೂಡಿಸಿ. ನಮ್ಮ ದೇಶ ಕೌಟುಂಬಿಕ ಮೌಲ್ಯಗಳಿಗೆ ಹೆಸರುವಾಸಿ. ಅವುಗಳನ್ನು ಮುಂದುವರಿಸಿಕೊಂಡು ಹೋಗೋಣ ಎಂದು ಡಿ. ರೂಪಾ ಹೇಳಿದ್ದರು.

ಸಾರ್ವಜನಿಕವಾಗಿ ಒಬ್ಬರ ಮೇಲೊಬ್ಬರು ಪರಸ್ಪರ ಆರೋಪದೊಂದಿಗೆ ಜಗಳಕ್ಕೆ ಇಳಿದಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾಗೆ ರಾಜ್ಯ ಸರ್ಕಾರ ನೋಟಿಸ್ ನೀಡಿತ್ತು. ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ನೋಟಿಸ್ ನೀಡಿ ಸೇವಾ ನಿಯಮದ ಉಲ್ಲಂಘನೆ‌‌ ಮಾಡದಂತೆ ಇಬ್ಬರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರು. ನೋಟಿಸ್ ನೀಡಿದ ಮರುದಿವೇ ಸ್ಥಳ ನಿಯೋಜನೆ ಮಾಡದೆ ಈ ಇಬ್ಬರು ಅಧಿಕಾರಿಗಳನ್ನು ಸರ್ಕಾರ ಎತ್ತಂಗಡಿ ಮಾಡಿತ್ತು.

IPL_Entry_Point

ವಿಭಾಗ