ಕರ್ನಾಟಕ ಹವಾಮಾನ; ರಾಜ್ಯದ ಉದ್ದಗಲಕ್ಕೂ ಇಂದು ಮಳೆ, ಕರಾವಳಿ, ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ತುಸು ಹೆಚ್ಚು ವರ್ಷಧಾರೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ; ರಾಜ್ಯದ ಉದ್ದಗಲಕ್ಕೂ ಇಂದು ಮಳೆ, ಕರಾವಳಿ, ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ತುಸು ಹೆಚ್ಚು ವರ್ಷಧಾರೆ

ಕರ್ನಾಟಕ ಹವಾಮಾನ; ರಾಜ್ಯದ ಉದ್ದಗಲಕ್ಕೂ ಇಂದು ಮಳೆ, ಕರಾವಳಿ, ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ತುಸು ಹೆಚ್ಚು ವರ್ಷಧಾರೆ

ಹಿಂಗಾರು ಮಳೆ ಶುರುವಾಗುತ್ತಿದ್ದು, ವಾಯುಭಾರ ಕುಸಿತದ ಕಾರಣ ಕರ್ನಾಟಕದ ಉದ್ದಗಲಕ್ಕೂ ಇಂದು (ಅಕ್ಟೋಬರ್ 15) ಮಳೆಯಾಗಲಿದೆ. ಬೆಂಗಳೂರು ಹವಾಮಾನ ಇಂದು ಮೋಡಕವಿದಂತೆ ಇರಲಿದ್ದು, ಬೆಂಗಳೂರು ನಗರ, ಗ್ರಾಮಾಂತರ ಸೇರಿ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ತುಸು ಹೆಚ್ಚು ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಅದರ ವಿವರ ಇಲ್ಲಿದೆ.

ಕರ್ನಾಟಕದ ಉದ್ದಗಲಕ್ಕೂ ಇಂದು ಮಳೆಯಾಗಲಿದ್ದು, ಕರಾವಳಿ, ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ತುಸು ಹೆಚ್ಚು ವರ್ಷಧಾರೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ಎಚ್ಚರಿಸಿದೆ. (ಸಾಂಕೇತಿಕ ಚಿತ್ರ)
ಕರ್ನಾಟಕದ ಉದ್ದಗಲಕ್ಕೂ ಇಂದು ಮಳೆಯಾಗಲಿದ್ದು, ಕರಾವಳಿ, ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ತುಸು ಹೆಚ್ಚು ವರ್ಷಧಾರೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ಎಚ್ಚರಿಸಿದೆ. (ಸಾಂಕೇತಿಕ ಚಿತ್ರ) (Pexels)

ಬೆಂಗಳೂರು: ಬಂಗಾಳಕೊಲ್ಲಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಕರ್ನಾಟಕದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ಪ್ರಕಾರ ಮುಂದಿನ 4 ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ. ಇಂದು (ಅಕ್ಟೋಬರ್ 15) ರಾಜ್ಯದ ಉದ್ದಗಲಕ್ಕೂ ಮಳೆಯಾಗಲಿದ್ದು, ಕರಾವಳಿ, ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ತುಸು ಹೆಚ್ಚು ಮಳೆ ಸುರಿಯಲಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ಪ್ರಕಾರ, ನಾಳೆ (ಅಕ್ಟೋಬರ್ 16) ಬೆಳಗ್ಗೆ 8.30ರ ತನಕ ಅವಧಿಯಲ್ಲಿ ಕರಾವಳಿಯ ಮೂರು ಜಿಲ್ಲೆಗಳು ಅಂದರೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅದೇ ರೀತಿ ದಕ್ಷಿಣ ಒಳನಾಡು ಜಿಲ್ಲೆಗಳು ಅಂದರೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇನ್ನುಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ಹವಾಮಾನ; ಯಾವ ಜಿಲ್ಲೆಯಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್‌

ಬಂಗಾಳದ ಉಪಸಾಗರದ ಆಗ್ನೆಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದಾಗಿ ಪಾಂಡಿಚೇರಿ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಮಂಗಳವಾರ (ಅಕ್ಟೋಬರ್ 15) ದಿಂದ ಮೂರಾಲ್ಕು ದಿನಗಳ ಕಾಲ ಕೆಲವು ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ಈಗಾಗಲೇ ಭಾನುವಾರದಿಂದ ರಾಜ್ಯದಲ್ಲಿ ಸಾಧಾರಣ ಪ್ರಮಾಣದ ಮಳೆಯಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ಮೂಲಗಳು ತಿಳಿಸಿವೆ.

ಯೆಲ್ಲೋ ಅಲರ್ಟ್‌ - ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ತುಮಕೂರು

ಆರೆಂಜ್ ಅಲರ್ಟ್‌ - ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ

ಅಕ್ಟೋಬರ್ 17ರ ತನಕವೂ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ

ಮಳೆ ಹೆಚ್ಚಾಗುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇಂದಿನಿಂದ ಮಳೆ ಹೆಚ್ಚಲಿದ್ದು, ಅ. 17 ರಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಕೆಲವೆಡೆ ಭಾರಿ ಗಾಳಿ ಬೀಸಲಿದ್ದು, ಗುಡುಗು ಮಿಂಚಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಇನ್ನು ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಆಗಾಗ್ಗೆ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಂಗಾರು ಶುರು; ಕೇರಳದಲ್ಲೂ ಮಳೆ ಶುರು: ಮುಂದಿನ ಮೂರು ದಿನಗಳ ಅವಧಿಯಲ್ಲಿ ನೈಋತ್ಯ ಮುಂಗಾರಿಗೆ ದೇಶ ವಿದಾಯ ಹೇಳಲಿದ್ದು, ಈಶಾನ್ಯ (ಹಿಂಗಾರು) ಮಾರುತ ಕೇರಳಕ್ಕೆ ತಲುಪುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದರ ಪರಿಣಾಮ ಕೇರಳದ ಹಲವೆಡೆ ಭಾರೀ ಮಳೆಯಾಗಲಿದ್ದು, 64.5ರಿಂದ 115.5ಮಿ.ಮೀ.ವರೆಗೆ ಮಳೆಯಾಗಬಹುದೆಂದು ಎಚ್ಚರಿಸಿದೆ. ಇಡುಕ್ಕಿ, ಪಾಲಕ್ಕಾಡ್, ಮಲಪುರಮ್, ಕೋಜಿಕ್ಕೋಡ್, ವಯನಾಡ್, ಕಣ್ಣೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅ.17ರವರೆಗೆ ಕೇರಳ, ಕರ್ನಾಟಕ, ಲಕ್ಷದ್ವೀಪ ಕರಾವಳಿಗಳಲ್ಲಿ ಪ್ರತಿಕೂಲ ಹವಾಮಾನ ಇರಲಿದ್ದು, ಗಂಟೆಗೆ 35-45ಕಿ.ಮೀ.ವೇಗ ಮತ್ತು ಇದು 55ಕಿ.ಮೀ.ವರೆಗೂ ವೇಗ ಪಡೆಯುವ ಸಾಧ್ಯತೆ ಇದೆ. ಅ.19ರವರೆಗೆ ಕೇರಳದ ಬಹುತೇಕ ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಅನ್ನು ಇಲಾಖೆ ಘೋಷಿಸಿದೆ.

Whats_app_banner