ಕನ್ನಡ ಸುದ್ದಿ  /  Karnataka  /  Imd Weather Forecast Karnataka Heavy Rain In Parts Of Bengaluru Northern, Southern Inland Climate Updates In Kannada Pcp

Bengaluru Rains: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇಂದು ಗುಡುಗು ಮಿಂಚು ಸಹಿತ ಮಳೆ

ಹವಾಮಾನ ಇಲಾಖೆ ಬೆಂಗಳೂರು (Met Centre Bengaluru) ಮೇ 21ರ ಹವಾಮಾನ ವರದಿ (IMD weather forecast karnataka) ಪ್ರಕಟಿಸಿದ್ದು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮತ್ತು ಉತ್ತರ ಒಳನಾಡು, ಕರಾವಳಿಯ ಕೆಲವು ಕಡೆ ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆಯಾಗಲಿದೆ.

Bengaluru Rains: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇಂದು ಗುಡುಗು ಮಿಂಚು ಸಹಿತ ಮಳೆ
Bengaluru Rains: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇಂದು ಗುಡುಗು ಮಿಂಚು ಸಹಿತ ಮಳೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧೆಡೆ ತಾಪಮಾನ ಹೆಚ್ಚಾಗಿ ಸೆಖೆಯಿಂದ ಜನರು ಪರಿತಪಿಸುತ್ತಿದ್ದರು. ನಿನ್ನೆ ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗಿದ್ದು, ಜನರಿಗೆ ತುಸು ಕೂಲ್‌ ಕೂಲ್‌ ಅನುಭವವಾಗಿದೆ. ಮುಂದಿನ 24 ಗಂಟೆಯೂ ರಾಜ್ಯದ ವಿವಿಧೆಡೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹವಾಮಾನ ಇಲಾಖೆ ಬೆಂಗಳೂರು (Met Centre Bengaluru) ಮೇ 21ರ ಹವಾಮಾನ ವರದಿ (IMD weather forecast karnataka) ಪ್ರಕಟಿಸಿದ್ದು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮತ್ತು ಉತ್ತರ ಒಳನಾಡು, ಕರಾವಳಿಯ ಕೆಲವು ಕಡೆ ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆಯಾಗಲಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಮಳೆ

ನಿನ್ನೆ ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ವಿವಿಧ ಮರಗಳು ಉರುಳಿ ಬಿದ್ದು, ವಾಹನ ಸಂಚಾರ ಏರುಪೇರಾಗಿದೆ. ವಿಶೇಷವಾಗಿ ಕಾಂಗ್ರೆಸ್‌ ಸರಕಾರದ ಪ್ರಮಾಣವಚನಕ್ಕೆ ಬಂದವರು ವಾಪಸ್‌ ತಮ್ಮ ಊರಿಗೆ ಹೋಗಲು ಪರದಾಡಿದ್ದಾರೆ. ಮೆಜೆಸ್ಟಿಕ್‌, ದೀಪಾಂಜಲಿ ನಗರ, ಕಾಮಾಕ್ಷಿಪಾಳ್ಯ, ಮಲ್ಲೇಶ್ವರಂ, ಚಾಮರಾಜಪೇಟೆ, ಅಶೋಕ ನಗರ ಸೇರಿದಂತೆ ವಿವಿಧೆಡೆ ಧಾರಕಾರ ಮಳೆಯಾಗಿದೆ.

ಕರಾವಳಿ ಹವಾಮಾನ ವರದಿ

ಮುಂದಿನ 24 ಗಂಟೆ ದಕ್ಷಿಣ ಕನ್ನಡ ಮತ್ತು ಉಡುಪಿಯ ವಿವಿಧ ಕಡೆಗಳಲ್ಲಿ ಹಗುರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡದಲ್ಲಿ ಒಣ ಹವೆ ಮುಂದುವರೆಯಲಿದೆ. ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗಿದ್ದು, ಸೆಖೆಯಿಂದ ಜನರು ಪರಿತಪಿಸುತ್ತಿದ್ದಾರೆ. ಮಂಗಳೂರು ಸೇರಿದಂತೆ ಕೆಲವು ಕಡೆಗಳಲ್ಲಿ ನೀರಿಗೆ ತತ್ವಾರ ಉಂಟಾಗಿದೆ.

ಮುಂದಿನ 48 ಗಂಟೆಗಳ ಕಾಲ ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಉಷ್ಣಾಂಶವು 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ. ಮೇ 22ರಿಂದ 24ರವರೆಗೆ ಕರಾವಳಿಯ ಕೆಲವು ಕಡೆಗಳಲ್ಲಿ ಗುಡುಗು ಮಿಂಚಿನ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು ವರದಿ

ಬೆಂಗಳೂರು ಹವಾಮಾನ ಕೇಂದ್ರದ ಅಪ್‌ಡೇಟ್‌ ಪ್ರಕಾರ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿಯಲ್ಲಿ ಹಗುರ ಸಾಧಾರಣ ಮಳೆಯಾಗಲಿದೆ. ಕೊಪ್ಪಳ, ಬೆಳಗಾವಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು ಸೇರಿದಂತೆ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆಯಾಗಲಿದೆ. ಮುಂದಿನ 48 ಗಂಟೆಗಳ ಕಾಲ ಉತ್ತರ ಒಳನಾಡಿನಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಉಷ್ಣಾಂಶವು 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ. ಮೇ 22ರಿಂದ 24ರವರೆಗೆ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಮಿಂಚಿನ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು ಹವಮಾನ ವರದಿ

ಇಂದು ದಕ್ಷಿಣ ಒಳನಾಡಿನ ಎಲ್ಲಾ ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರ/ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆಯಾಗಲಿದೆ. ಈ ಪ್ರದೇಶಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್‌ವರೆಗೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.