ಕನ್ನಡ ಸುದ್ದಿ  /  Karnataka  /  Imd Weather Forecast, The Day Before Karnataka Election Thunderstorms Light Rain May 9 Meteorological Department Pcp

Karnataka Rain: ಚುನಾವಣಾ ಮುನ್ನ ದಿನ ಅಭ್ಯರ್ಥಿಗಳ ಮನದಲ್ಲಿ ಕಾರ್ಮೋಡ, ಇಂದೂ ಕರ್ನಾಟಕದ ವಿವಿಧೆಡೆ ಗುಡುಗು ಮಿಂಚು ಸಹಿತ ಮಳೆ

ಕರ್ನಾಟಕ ವಿಧಾನಸಭೆ ಚುನಾವಣೆ (Karnataka Election)ಯ ಮುನ್ನದಿನವಾದ ಇಂದು ಬೆಂಗಳೂರು ಸೇರಿದಂತೆ (Bengaluru Rain) ಕರ್ನಾಟಕದ ವಿವಿಧೆಡೆ ಗುಡುಗು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD weather forecast karnataka) ನೀಡಿದೆ.

ಇಂದೂ ಕರ್ನಾಟಕದ ವಿವಿಧೆಡೆ ಗುಡುಗು ಮಿಂಚು ಸಹಿತ ಮಳೆ
ಇಂದೂ ಕರ್ನಾಟಕದ ವಿವಿಧೆಡೆ ಗುಡುಗು ಮಿಂಚು ಸಹಿತ ಮಳೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Election)ಯ ಅಬ್ಬರದ ಪ್ರಚಾರದ ಶಬ್ದ ಮಾಲಿನ್ಯವಿಲ್ಲದೆ ಪರಿಸರ ಶಾಂತವಾಗಿದೆ. ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ದೇಗುಲಗಳಿಗೆ ಭೇಟಿ ನೀಡಿ ದೇವರಲ್ಲಿ ಗೆಲುವಿಗಾಗಿ ಮೊರೆ ಇಡುತ್ತಿದ್ದಾರೆ. ಬದಲಾದ ವಾತಾವರಣಕ್ಕೆ ತಕ್ಕಂತೆ ಕಳೆದ ಹಲವು ದಿನಗಳಿಂದ ಮಳೆಯಿಲ್ಲದ ರಾಜ್ಯದ ವಿವಿಧ ಪ್ರದೇಶಗಳಲ್ಲಿಯೂ ಗುಡುಗು ಮಿಂಚು ಸಹಿತ ಮಳೆಯಾಗಿ ತಣ್ಣನೆಯ ವಾತಾವರಣ ಕಂಡುಬರುತ್ತಿದೆ. ಇದೇ ಸಮಯದಲ್ಲಿ ಕರ್ನಾಟಕದ ವಿವಿಧೆಡೆ ಇಂದು ಸಹ ಗುಡುಗು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹವಾಮಾನ ಇಲಾಖೆ ಬೆಂಗಳೂರು (Met Centre Bengaluru) ಮೇ 9ರ ಹವಾಮಾನ ವರದಿ (IMD weather forecast karnataka) ಪ್ರಕಟಿಸಿದ್ದು, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ (Bengaluru Rain) ನಿನ್ನೆ ಭಾರೀ ಮಳೆಯಾಗಿದ್ದು, ಇಂದೂ ಕೂಡ ಮಳೆರಾಯನ ಆಗಮನದ ನಿರೀಕ್ಷೆಯಿದೆ. ಅಪರೂಪಕ್ಕೆ ಕರಾವಳಿಯ ಬೆಳ್ತಂಗಡಿ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ ಸೇರಿದಂತೆ (Mangaluru Rain) ವಿವಿಧೆಡೆ ನಿನ್ನೆ ರಾತ್ರಿ ಗುಡುಗು ಮಿಂಚು ಸಹಿತ ಮಳೆಯಾಗಿದೆ. ಮೇ 13ರ ಚುನಾವಣಾ ಫಲಿತಾಂಶದವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಸಂಜೆಯ ವೇಳೆ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಚುನಾವನಾ ಮತಗಟ್ಟೆಯ ಕೆಲಸಗಳಿಗೆ ತುಸು ಅಡಚಣೆಯಾಗುವ ಸಾಧ್ಯತೆಯೂ ಇದೆ.

ಕರಾವಳಿ ಹವಾಮಾನ ವರದಿ

ದಕ್ಷಿಣ ಕನ್ನಡದ ವಿವಿಧೆಡೆ ನಿನ್ನೆ ರಾತ್ರಿಯಿಂದಲೇ ಗುಡುಗು ಮಿಂಚು ಸಹಿತ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಇಂದು ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಒಳನಾಡು ವರದಿ

ಬೆಂಗಳೂರು ಹವಾಮಾನ ಕೇಂದ್ರದ ಅಪ್‌ಡೇಟ್‌ ಪ್ರಕಾರ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಕೊಪ್ಪಳದಲ್ಲಿ ಇಂದು ಒಣಹವೆ ಇರಲಿದೆ. ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು ಸೇರಿದಂತೆ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆಯಾಗಲಿದೆ. ಇಂದು ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ವರೆಗೂ ಕಡಿಮೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು ಹವಮಾನ ವರದಿ

ಇಂದು ದಕ್ಷಿಣ ಒಳನಾಡಿನ ಎಲ್ಲಾ ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರ/ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆಯಾಗಲಿದೆ. ಈ ಪ್ರದೇಶಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್‌ವರೆಗೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಂದ ಜನರನ್ನು ಮತದಾನ ನಡೆಯುವ ಊರುಗಳಿಗೆ ಕರೆದೊಯ್ಯಲು ರಾಜಕಾರಣಿಗಳು ಬಸ್‌ ವ್ಯವಸ್ಥೆ ಮಾಡಿರುತ್ತಾರೆ. ಇಂದು ರಾತ್ರಿ ಅನಿರೀಕ್ಷಿತವಾಗಿ ಮಳೆ ಬಂದರೆ ಮತದಾನಕ್ಕೆ ನಗರ ಬಿಡುವವರು ಕಡಿಮೆಯಾಗುವ ಆತಂಕವೂ ರಾಜಕಾರಣಿಗಳಿಗಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಮಳೆಯಾಗುತ್ತಿದ್ದು, ಬೆಂಗಳೂರಿನಿಂದ ವಿವಿಧ ನಗರಗಳಿಗೆ ಹೋಗುವವರಿಗೆ ಗುಡುಗು ಮಿಂಚು ಸಹಿತ ಮಳೆಯಿಂದ ಅನಾನುಕೂಲವಾಗುವ ಸಾಧ್ಯತೆಯೂ ಇದೆ. ಮಳೆ ಇದ್ದರೂ ಆಯಾ ಊರಿನ ಜನರನ್ನು ಕರೆತರಲು ಗರಿಷ್ಠ ಪ್ರಯತ್ನ ಮಾಡುವಂತೆ ಆಯಾ ಪಕ್ಷಗಳ ನಾಯಕರು ಪ್ರಯತ್ನಿಸುತ್ತಿದ್ದಾರೆ. ಚುನಾವಣೆಗೆ ತೆರಳಲು ಬಸ್‌ಗಾಗಿ ಈ ಸಂಖ್ಯೆಗೆ ಕರೆ ಮಾಡಿ ಎಂಬ ಸಂದೇಶಗಳು ವಾಟ್ಸಪ್‌ಗಳಲ್ಲಿ ಹರಿದಾಡುತ್ತಿದೆ.

IPL_Entry_Point