Kannada News  /  Karnataka  /  Implementation Of Swami Vivekananda Yojana In Karnataka To Provide Self Employment To 5 Lakh People Says Cm Bommai
ಹುಬ್ಬಳ್ಳಿಯ ನಡೆಯುತ್ತಿರುವ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದರು.
ಹುಬ್ಬಳ್ಳಿಯ ನಡೆಯುತ್ತಿರುವ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದರು.

CM Bommai in National Youth Festival: 5 ಲಕ್ಷ ಜನರಿಗೆ ಸ್ವಯಂ ಉದ್ಯೋಗ ನೀಡುವ ಸ್ವಾಮಿ ವಿವೇಕಾನಂದ ಯೋಜ‌ನೆ ರಾಜ್ಯದಲ್ಲಿ ಅನುಷ್ಠಾನ: ಸಿಎಂ

12 January 2023, 19:55 ISTHT Kannada Desk
12 January 2023, 19:55 IST

ಮುಂಬರುವ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ ರಾಜ್ಯವು 75 ಕ್ರೀಡಾಪಟುಗಳನ್ನು ಅಣಿಗೊಳಿಸಲು ಪ್ರತಿಭಾವಂತರನ್ನು ದತ್ತು ಪಡೆದು ತರಬೇತಿ ನೀಡುವ ಕಾರ್ಯಕೈಗೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. 

ಹುಬ್ಬಳ್ಳಿ: ಸುಮಾರು 5 ಲಕ್ಷ ಜನರಿಗೆ ಸ್ವಯಂ ಉದ್ಯೋಗ ನೀಡುವ ಸ್ವಾಮಿ ವಿವೇಕಾನಂದ ಯೋಜ‌ನೆಯನ್ನು ಕರ್ನಾಟಕದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಭಾರತ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯ ಹಾಗೂ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಆಯೋಜಿಸಿರುವ 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ, ದೇಶದಲ್ಲಿಯೇ ಮೊಟ್ಟ ಮೊದಲು ಹೊಸ ಶಿಕ್ಷಣ ನೀತಿ ಜಾರಿಗೊಳಿಸಿದ ಕೀರ್ತಿ ನಮ್ಮ ರಾಜ್ಯದ್ದಾಗಿದೆ ಎಂದರು.

ಮುಂಬರುವ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ ರಾಜ್ಯವು 75 ಜನ ಕ್ರೀಡಾಪಟುಗಳನ್ನು ಅಣಿಗೊಳಿಸಲು ಪ್ರತಿಭಾವಂತರನ್ನು ದತ್ತು ಪಡೆದು ತರಬೇತಿ ನೀಡುವ ಕಾರ್ಯಕೈಗೊಂಡಿದೆ ಎಂದು ಮುಂದಿನ ಒಲಿಂಪಿಕ್ ಕ್ರೀಡಾಕೂಟಕ್ಕೆ ರಾಜ್ಯದ ಕ್ರೀಡಾಪಟುಗಳ ಸಿದ್ಧತೆಗಳನ್ನು ವಿವರಿಸಿದರು.

ಯುವಜನರನ್ನು ಸ್ವಯಂ ಉದ್ಯೋಗಿಗಳನ್ನಾಗಿಸಲು ರಾಜ್ಯ ಸರ್ಕಾರವು ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯೋಜನೆ ಜಾರಿಗೊಳಿಸಲಿದೆ. ಸ್ವಾಮಿ ವಿವೇಕಾನಂದರು ಯುವಕರಿಗೆ ಪ್ರೇರಣೆಕೊಟ್ಟ ಧೀಮಂತ ಯೋಗಿಯಾಗಿದ್ದಾರೆ. ಧ್ಯಾನ ಮತ್ತು ಜ್ಞಾನವನ್ನು ಯುವಜನರಿಗೆ ಬೋಧಿಸಿದ ಮಹಾನ್ ಚೇತನ ಅವರಾಗಿದ್ದಾರೆ. ಜನಸಂಖ್ಯೆ ಎಂದರೆ ಹೊರೆಯಲ್ಲ, ಅದು ಮಾನವಸಂಪತ್ತು ಅದರ ಸದ್ವಿನಿಯೋಗಪಡಿಸಿಕೊಂಡು, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಸ್ಫೂರ್ತಿಯಾಗಿದ್ದಾರೆ. ಖೇಲೋ ಇಂಡಿಯಾ ಮೂಲಕ ಯುವಜನತೆಯಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಇಂದಿನಿಂದ ಪ್ರಾರಂಭವಾಗಲಿರುವ ರಾಷ್ಟ್ರೀಯ ಯುವಜನೋತ್ಸವ ನಾಡಿನ ಯುವಜನರಲ್ಲಿ ಹೊಸ ಸ್ಫೂರ್ತಿ ತುಂಬಲಿ ಎಂದು ಆಶಿಸಿದರು.

ವಿವೇಕಾನಂದರಿಗೆ ಕರ್ನಾಟಕದೊಂದಿಗೆ ಉತ್ತಮ ಸಂಬಂಧ ಇತ್ತು

26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ವಿವೇಕಾನಂದ ಅವರಿಗೆ ಕರ್ನಾಟಕದೊಂದಿಗೆ ಉತ್ತಮವಾದ ಸಂಬಂಧ ಇತ್ತು. ತಮ್ಮ ಜೀವಿತಾವಧಿಯಲ್ಲಿ ಕರ್ನಾಟಕದ ಯಾತ್ರೆ ಮಾಡಿದ್ದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಭೇಟಿ ನೀಡಿದ್ದರು. ಈ ಯಾತ್ರೆ ಮೂಲಕ ಅವರ ಜೀವನಕ್ಕೆ ಹೊಸ ದೆಸೆ ನೀಡಿತ್ತು ಎಂದು ಹೇಳಿದರು.

ಮೈಸೂರು ಮಹಾರಾಜರು ವಿವೇಕಾನಂದರ ಚಿಕಾಗೋ ಯಾತ್ರೆಗೆ ಸಹಾಯ ಮಾಡಿದ್ದರು. ವಿವೇಕಾನಂದರು ಚಿಕ್ಕ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದರು. ಹಾಗೆ, ರಾಣಿ ಕಿತ್ತೂರು ಚೆನ್ನಮ್ಮ ದೇಶದ ಅಗ್ರಗಣ್ಯ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರಾಗಿದ್ದಾರೆ. ಕಠಿಣ ಪರಿಸ್ಥಿತಿ ಸಂದರ್ಭದಲ್ಲೂ ಸ್ವಾತಂತ್ರ್ಯ ಹೋರಾಟಕ್ಕೆ ಚೆನ್ನಮ್ಮ ನೇತೃತ್ವ ಕೊಟ್ಟಿದ್ದರು. ಚೆನ್ನಮ್ಮನವರ ಬಂಟ, ವೀರ ಯೋಧ ರಾಯಣ್ಣ ಬ್ರಿಟಿಷ್​ ಸೈನ್ಯವನ್ನು ಎದುರಿಸಿದ್ದರು ಎಂದು ಪ್ರಧಾನಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.

ಯುವ ಜನ ಶಕ್ತಿಯಿಂದ ಭವಿಷ್ಯ ಮತ್ತು ರಾಷ್ಟ್ರವನ್ನು ನಿರ್ಮಾಣ ಮಾಡುವುದ ಸುಲಭವಾಗುತ್ತದೆ ಎಂದು ಸ್ವಾಮಿ ವಿವೇಕಾನಂದ ಅವರು ಹೇಳಿದ್ದರು. ದೇಶದ ಅಮೃತ ಕಾಲದ ಸಂದರ್ಭದಲ್ಲಿ ನಮ್ಮ ಕರ್ತವ್ಯಗಳನ್ನು ಅರ್ಥಮಾಡಿಕೊಂಡು, ನಮ್ಮ ರಾಷ್ಟ್ರವನ್ನು ಮುಂದಕ್ಕೆ ಕೊಂಡೊಯ್ಯಬೇಕಾಗಿದೆ. ಭಾರತದ ಪ್ರತಿಯೊಂದು ಭಾಗದಲ್ಲೂ ನಮ್ಮ ಯುವಕರ ಪ್ರತಿಭೆ ಅಸಾಧಾರಣವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಭಾಷಣದ ಆರಂಭದಲ್ಲಿ ಮೂರು ಸಾವಿರ ಮಠ, ಸಿದ್ಧರೂಢ ಮಠ ಇಂತಹ ಅನೇಕ ಮಠಗಳ ಕ್ಷೇತ್ರಗಳಿಗೆ ನನ್ನ ನಮಸ್ಕಾರಗಳು. ರಾಣಿ ಚೆನ್ನಮ್ಮನ ನಾಡು, ಸಂಗೊಳ್ಳಿ ರಾಯಣ್ಣನ ಬೀಡು, ಈ ಪುಣ್ಯ ಭೂಮಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿ ಮಾತು ಆರಂಭಿಸಿದರು. ಈ ವೇಳೆ ನೆರದಿದ್ದ ಜನಸಾಗರ ಚಪ್ಪಾಳೆ ತಟ್ಟಿ ಹರ್ಷೋದ್ಗಾರ ಮೊಳಗಿಸಿದರು.

ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ವೇಳೆ ಆಗಿದ್ದ ಭದ್ರತಾ ಲೋಪ ಸಂಬಂಧ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.