Kotekaru Bank Robbery: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ; ಮೂವರ ಸೆರೆ
ಕನ್ನಡ ಸುದ್ದಿ  /  ಕರ್ನಾಟಕ  /  Kotekaru Bank Robbery: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ; ಮೂವರ ಸೆರೆ

Kotekaru Bank Robbery: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ; ಮೂವರ ಸೆರೆ

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿಕೆ.ಸಿ.ರೋಡ್‌ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಲಾಗಿದೆ.

ಕೋಟೆಕಾರು ಬ್ಯಾಂಕ್ ದರೋಡೆ - ಮೂವರ ಸೆರೆ
ಕೋಟೆಕಾರು ಬ್ಯಾಂಕ್ ದರೋಡೆ - ಮೂವರ ಸೆರೆ

ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್‌ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ಮೂವರು ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ನಂತರ ಹೆಚ್ಚಿನ ಮಾಹಿತಿ ನೀಡುವುದಾಗಿ ಅವರು ತಿಳಿಸಿದ್ದಾರೆ.

ಕೇರಳಕ್ಕೆ ಪರಾರಿಯಾಗಿದ್ದ ದರೋಡೆಕೋರರು

ಬಂಧಿತ ಆರೋಪಿಗಳ ಬಳಿ ಶಸ್ತ್ರಾಸ್ತ್ರಗಳು, 2 ತಲವಾರು, 2 ಪಿಸ್ತೂಲುಗಳು ಮತ್ತು ಗೋಣಿಚೀಲಗಳನ್ನು ಕೂಡ ವಶ ಪಡಿಸಿಕೊಂಡಿರುವ ಬಗ್ಗೆ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ. ರಾಜ್ಯದ ಅತಿದೊಡ್ಡ ದರೋಡೆ ಪ್ರಕರಣ ಭೇದಿಸಲು ಪೊಲೀಸರು ಭಾರೀ ಕಾರ್ಯಾಚರಣೆ ನಡೆಸಿದ್ದರು. ದರೋಡೆ ಕೃತ್ಯಕ್ಕೆ ಬಳಸಿದ್ದ ಕಾರನ್ನು ಬೆನ್ನಟ್ಟಿ ಪೊಲೀಸ ತಂಡಗಳು ಕಾರ್ಯಾಚರಣೆಗೆ ಇಳಿದಿದ್ದವು.ದರೋಡೆ ನಡೆಸಿದ ಬಳಿಕ ತಲಪಾಡಿ ಟೋಲ್ ಮೂಲಕ ಕೇರಳಕ್ಕೆ ಪರಾರಿಯಾಗಿದ್ದರು.

ಜನವರಿ 17ರಂದು ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್ ಬ್ರಾಂಚ್ ನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಸಿಟಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ತಿಳಿಸಿದ್ದಾರೆ. ತಿರುನಲ್ವೇಲಿಯ ಮುರುಗಂಡಿ ತೇವರ್, ಮುಂಬೈನ ಯುಸೊವಾ ರಾಜೆಂದ್ರನ್, ಮುಂಬಯಿ ನಿವಾಸಿ ಕಣ್ಣನ್ ಮಣಿ ಬಂಧಿತ ಆರೋಪಿಗಳು. ಘಟನೆಗೆ ಸಂಬಂಧಿಸಿ ಹೆಚ್ಚಿನ ಮಾಹಿತಿಗಳನ್ನು ಇವರಿಂದ ಕಲೆಹಾಕಲಾಗುತ್ತಿದೆ.

ಸುಮಾರು 4 ಕೋಟಿ ರೂಪಾಯಿ ಲೂಟಿ

ಚಿನ್ನ ನಗದು ಸೇರಿ ಅಂದಾಜು ಸುಮಾರು 4 ಕೋಟಿ ರೂಪಾಯಿಗಳನ್ನು ಆರೋಪಿಗಳು ಲೂಟಿದ್ದರು. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಬಂಧನಕ್ಕೆ ಹಲವು ತಂಡಗಳನ್ನು ಮಾಡಲಾಗಿತ್ತು. ತಮಿಳುನಾಡಿನ ಪದ್ಮನೇರಿ ಎಂಬ ಹಳ್ಳಿಯಲ್ಲಿ ಮೂವರನ್ನು ಈಗ ಬಂಧಿಸಲಾಗಿದೆ. ಕಾರ್ಯಾಚರಣೆಯಲ್ಲಿ ಪೊಲೀಸರು ಆರೋಪಿಗಳು ಬಳಸಿದ್ದ ಕಾರು, ಎರಡು ಪಿಸ್ತೂಲ್ ಗಳು, ಹಾಗೂ ನಗ, ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಆರೋಪಿಗಳ ಹೆಚ್ಚಿನ ವಿಚಾರಣೆ ಬಳಿಕ ಕೃತ್ಯದ ಹಿಂದೆ ಯಾರೆಲ್ಲ ಇದ್ದರು ಎಂಬುದು ಗೊತ್ತಾಗಲಿದೆ.

Whats_app_banner