Bangalore Karwar Train: ಬೆಂಗಳೂರು-ಕಾರವಾರ ನಡುವೆ ಜುಲೈ 26ರಿಂದ ವಿಶೇಷ ರೈಲು ಸೇವೆ
ಕನ್ನಡ ಸುದ್ದಿ  /  ಕರ್ನಾಟಕ  /  Bangalore Karwar Train: ಬೆಂಗಳೂರು-ಕಾರವಾರ ನಡುವೆ ಜುಲೈ 26ರಿಂದ ವಿಶೇಷ ರೈಲು ಸೇವೆ

Bangalore Karwar Train: ಬೆಂಗಳೂರು-ಕಾರವಾರ ನಡುವೆ ಜುಲೈ 26ರಿಂದ ವಿಶೇಷ ರೈಲು ಸೇವೆ

Indian Railways ಬೆಂಗಳೂರಿನಿಂದ ಕಾರವಾರವರೆಗೆ ವಿಶೇಷ ರೈಲು ಸೇವೆಯನ್ನು ಭಾರತೀಯ ರೈಲ್ವೆ ನೈರುತ್ಯ ವಲಯದಿಂದ ಒದಗಿಸಲಾಗುತ್ತಿದೆ.

ಬೆಂಗಳೂರಿನಿಂದ ಕಾರವಾರಕ್ಕೆ ವಿಶೇಷ ರೈಲು ಸೇವೆ ಇರಲಿದೆ.
ಬೆಂಗಳೂರಿನಿಂದ ಕಾರವಾರಕ್ಕೆ ವಿಶೇಷ ರೈಲು ಸೇವೆ ಇರಲಿದೆ.

ಬೆಂಗಳೂರು: ಬೆಂಗಳೂರಿನಿಂದ( Bangalore) ಹಾಸನ( Hassan), ಉಡುಪಿ( Udupi), ಕುಂದಾಪುರ( Kundapur) ಮಾರ್ಗವಾಗಿ ಉತ್ತರ ಕನ್ನಡ ಜಿಲ್ಲೆಯ ಕೇಂದ್ರ ಸ್ಥಳ ಕಾರವಾರಕ್ಕೆ( Karwar) ವಿಶೇಷ ರೈಲು ಓಡಿಸಲು ಭಾರತೀಯ ರೈಲ್ವೆಯ ಹುಬ್ಬಳ್ಳಿ ಕೇಂದ್ರಿತ ನೈರುತ್ಯ ವಲಯ ಮುಂದಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಭಾರೀ ಮಳೆಯಿಂದ ಸಂಚಾರಕ್ಕೆ ವ್ಯತ್ಯಯವಾಗುತ್ತಿರುವುದರಿಂದ ವಿಶೇಷ ರೈಲನ್ನು ಓಡಿಸಲಾಗುತ್ತಿದೆ. ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾರವಾರ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಈ ವಿಶೇಷ ರೈಲುಗಳು ಈ ಕೆಳಗಿನ ದಿನಾಂಕಗಳಲ್ಲಿ ಕಾರ್ಯನಿರ್ವಹಿಸಲಿವೆ ಎಂದು ನೈರುತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ.

1.ಜುಲೈ 26 ಮತ್ತು 28 ರಂದು ರೈಲು ಸಂಖ್ಯೆ 06567 ಎಸ್ಎಂವಿಟಿ ಬೆಂಗಳೂರು-ಕಾರವಾರ ವಿಶೇಷ ಎಕ್ಸ್ ಪ್ರೆಸ್ ರೈಲು ಎಸ್ಎಂವಿಟಿ ಬೆಂಗಳೂರಿನಿಂದ ಮಧ್ಯ ರಾತ್ರಿ 12 :30 ಗಂಟೆಗೆ ಹೊರಟು, ಅದೇ ದಿನ ಸಂಜೆ 4 ಗಂಟೆಗೆ ಕಾರವಾರ ನಿಲ್ದಾಣ ತಲುಪಲಿದೆ.

2. ಪುನಃ ಇದೇ ರೈಲು (06568) ಜುಲೈ 26 ಮತ್ತು 28 ರಂದು ಕಾರವಾರ ನಿಲ್ದಾಣದಿಂದ ರಾತ್ರಿ 11:30 ಗಂಟೆಗೆ ಹೊರಟು, ಮರುದಿನ ಸಂಜೆ 3:30 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ವಿಶೇಷ ರೈಲು ಬಾಣಸವಾಡಿ, ಚಿಕ್ಕಬಾಣಾವರ, ಕುಣಿಗಲ್, ಚನ್ನಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳಲ್ಲಿ ನಿಲುಗಡೆ ಇರಲಿವೆ.

ಈ ವಿಶೇಷ ರೈಲು ಎಸಿ-ಟು ಟೈಯರ್-2, ಎಸಿ-ತ್ರಿ ಟೈಯರ್-2, ಸ್ಲೀಪರ್ ಕ್ಲಾಸ್-6, ಸಾಮಾನ್ಯ ದ್ವಿತೀಯ ದರ್ಜೆ-6 ಮತ್ತು ಎಸ್ಎಲ್ಆರ್/ಡಿ -2 ಸೇರಿದಂತೆ 18 ಬೋಗಿಗಳು ಒಳಗೊಂಡಿರಲಿದೆ ಎಂದು ತಿಳಿಸಲಾಗಿದೆ.

Whats_app_banner