Indian Railways: ಮಂಡ್ಯದ ಅಕ್ಕಿಹೆಬ್ಬಾಳುವಿನಲ್ಲಿ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ಎಕ್ಸ್ ಪ್ರೆಸ್‌ಗೆ ತಾತ್ಕಾಲಿಕ ನಿಲುಗಡೆ
ಕನ್ನಡ ಸುದ್ದಿ  /  ಕರ್ನಾಟಕ  /  Indian Railways: ಮಂಡ್ಯದ ಅಕ್ಕಿಹೆಬ್ಬಾಳುವಿನಲ್ಲಿ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ಎಕ್ಸ್ ಪ್ರೆಸ್‌ಗೆ ತಾತ್ಕಾಲಿಕ ನಿಲುಗಡೆ

Indian Railways: ಮಂಡ್ಯದ ಅಕ್ಕಿಹೆಬ್ಬಾಳುವಿನಲ್ಲಿ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ಎಕ್ಸ್ ಪ್ರೆಸ್‌ಗೆ ತಾತ್ಕಾಲಿಕ ನಿಲುಗಡೆ

Indian Railways: ಭಾರತೀಯ ರೈಲ್ವೆಯು ಮೈಸೂರು ತಾಳಗುಪ್ಪ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ ರೈಲನ್ನು ಮಂಡ್ಯದ ಜಿಲ್ಲೆಯ ಅಕ್ಕಿಹೆಬ್ಬಾಳಿನಲ್ಲಿ ತಾತ್ಕಾಲಿಕವಾಗಿ ನಿಲುಗಡೆ ಮಾಡಲು ಆದೇಶಿಸಿದೆ.

ಮೈಸೂರು ತಾಳಗುಪ್ಪ ಇಂಟರ್‌ಸಿಟಿ ರೈಲು ಮಂಡ್ಯ ಜಿಲ್ಲೆ ಅಕ್ಕಿಹೆಬ್ಬಾಳಿನಲ್ಲಿ ನಿಲುಗಡೆಯಾಗಲಿದೆ.
ಮೈಸೂರು ತಾಳಗುಪ್ಪ ಇಂಟರ್‌ಸಿಟಿ ರೈಲು ಮಂಡ್ಯ ಜಿಲ್ಲೆ ಅಕ್ಕಿಹೆಬ್ಬಾಳಿನಲ್ಲಿ ನಿಲುಗಡೆಯಾಗಲಿದೆ.

Indian Railways: ಮಂಡ್ಯ ಜಿಲ್ಲೆಯ ಅಕ್ಕಿಹೆಬ್ಬಾಳಿನ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ, ನೈರುತ್ಯ ರೈಲ್ವೆಯು ಮೈಸೂರು-ತಾಳಗುಪ್ಪ ನಿಲ್ದಾಣಗಳ ನಡುವೆ ಸಂಚರಿಸುವ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲುಗಳಿಗೆ 2025 ರ ಫೆಬ್ರವರಿ 11 ರಿಂದ 16 ರವರೆಗೆ ಅಕ್ಕಿಹೆಬ್ಬಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆ ಒದಗಿಸಲು ಅವಕಾಶ ಕಲ್ಪಿಸಿಲಾಗಿದೆ ಎಂದು ಭಾರತೀಯ ರೈಲ್ವೆ ಹುಬ್ಬಳ್ಳಿ ಕೇಂದ್ರಿತ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಧಿಕಾರಿ ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ. ಪ್ರಯಾಣಿಕರು ಈ ತಾತ್ಕಾಲಿಕ ನಿಲುಗಡೆ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಅಕ್ಕಿಹೆಬ್ಬಾಳುವಿನಲ್ಲಿ ಈ ಕೆಳಗಿನ ವೇಳಾಪಟ್ಟಿಯಂತೆ ರೈಲುಗಳು ಒಂದು ನಿಮಿಷ ನಿಲುಗಡೆ ಹೊಂದಿರಲಿದೆ.

1. ರೈಲು ಸಂಖ್ಯೆ 16206 ಮೈಸೂರು-ತಾಳಗುಪ್ಪ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಅಕ್ಕಿಹೆಬ್ಬಾಳುವಿಗೆ ಬೆಳಗ್ಗೆ 06:55 ಕ್ಕೆ ಆಗಮಿಸಿ, 06:56 ಕ್ಕೆ ನಿರ್ಗಮಿಸಲಿದೆ.

2. ರೈಲು ಸಂಖ್ಯೆ 16205 ತಾಳಗುಪ್ಪ-ಮೈಸೂರು ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಅಕ್ಕಿಹೆಬ್ಬಾಳುವಿಗೆ ರಾತ್ರಿ 09:09 ಕ್ಕೆ ಆಗಮಿಸಿ,09:10 ಕ್ಕೆ ಹೊರಡಲಿದೆ.

Whats_app_banner