Indian Railways: ಬೇಸಿಗೆ ಅವಧಿಯಲ್ಲಿ ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ, ಏಪ್ರಿಲ್ 5ರಿಂದ ಆರಂಭ
ಕನ್ನಡ ಸುದ್ದಿ  /  ಕರ್ನಾಟಕ  /  Indian Railways: ಬೇಸಿಗೆ ಅವಧಿಯಲ್ಲಿ ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ, ಏಪ್ರಿಲ್ 5ರಿಂದ ಆರಂಭ

Indian Railways: ಬೇಸಿಗೆ ಅವಧಿಯಲ್ಲಿ ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ, ಏಪ್ರಿಲ್ 5ರಿಂದ ಆರಂಭ

Indian Railways: ಬೇಸಿಗೆ ರಜೆ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಮುಂಬೈ ನಡುವೆ 13 ಟ್ರಿಪ್‌ಗಳಲ್ಲಿ ರೈಲುಗಳು ಏಪ್ರಿಲ್‌, ಮೇ ಹಾಗೂ ಜೂನ್‌ ತಿಂಗಳಲ್ಲಿ ಸಂಚರಿಸಲಿದೆ. ಇದರ ವಿವರ ಇಲ್ಲಿದೆ.

ಬೇಸಿಗೆ ರಜೆ ಹಿನ್ನೆಲೆಯಲ್ಲಿ ಮುಂಬೈ ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಇರಲಿದೆ.
ಬೇಸಿಗೆ ರಜೆ ಹಿನ್ನೆಲೆಯಲ್ಲಿ ಮುಂಬೈ ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಇರಲಿದೆ.

Indian Railways: ಬಹುತೇಕ ಪರೀಕ್ಷೆಗಳು ಮುಕ್ತಾಯಗೊಂಡಿದ್ದು. ಇನ್ನೇನು ಬೇಸಿಗೆ ರಜೆಗಳು ಶುರುವಾಗಲಿವೆ. ಯುಗಾದಿ ಹಾಗೂ ರಂಜಾನ್‌ ಹಬ್ಬ ಮುಗಿಯುತ್ತಿದ್ದಂತೆ ಜನ ಬೇಸಿಗೆ ರಜೆ ವೇಳೆ ವಿವಿಧ ಭಾಗಗಳಿಗೆ ಪ್ರಯಾಣ ಬೆಳೆಸಲಿದ್ದಾರೆ. ದಕ್ಷಿಣ ಭಾರತದವರು ಉತ್ತರ ಭಾರತಕ್ಕೆ,.ಮುಂಬೈ ಭಾಗದವರು ಕರ್ನಾಟಕಕ್ಕೆ. ಈ ಭಾಗದವರು ಮುಂಬೈ ಕಡೆ ಹೋಗಲಿದ್ದಾರೆ. ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಮಧ್ಯ ರೈಲ್ವೇಯು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮುಂಬೈ ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ 13 ಟ್ರಿಪ್‌ಗಳ ಬೇಡಿಕೆಯ ಮೇರೆಗೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಸಂಚರಿಸಲು ನಿರ್ಧರಿಸಿದೆ. ಈ ವಿಶೇಷ ರೈಲು ಸೇವೆಗಳ ವಿವರಗಳು ಹೀಗಿವೆ:

ರೈಲು ಸಂಖ್ಯೆ 01013/01014 ಸಿಎಸ್ಎಂಟಿ ಮುಂಬೈ-ಎಸ್ಎಂವಿಟಿ ಬೆಂಗಳೂರು-ಸಿಎಸ್ಎಂಟಿ ಮುಂಬೈ ವಿಶೇಷ ಎಕ್ಸ್‌ಪ್ರೆಸ್

ರೈಲು ಸಂಖ್ಯೆ 01013 ಸಿಎಸ್ಎಂಟಿ ಮುಂಬೈ - ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 5, 12, 19, 26; ಮೇ 3, 10, 17, 24, 31; ಮತ್ತು ಜೂನ್ 7, 14, 21, 28 (ಶನಿವಾರ) ರಂದು ಸಿಎಸ್ಎಂಟಿ ಮುಂಬೈನಿಂದ 00:30 ಗಂಟೆಗೆ ಹೊರಟು, ಅದೇ ದಿನ 23:55 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ತಲುಪಲಿದೆ.

ರೈಲು ಸಂಖ್ಯೆ 01014 ಎಸ್ಎಂವಿಟಿ ಬೆಂಗಳೂರು - ಸಿಎಸ್ಎಂಟಿ ಮುಂಬೈ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 6, 13, 20, 27; ಮೇ 4, 11, 18, 25; ಮತ್ತು ಜೂನ್ 1, 8, 15, 22, 29 (ಭಾನುವಾರ) ರಂದು ಎಸ್ಎಂವಿಟಿ ಬೆಂಗಳೂರಿನಿಂದ 04:40 ಗಂಟೆಗೆ ಹೊರಟು, ಮರುದಿನ 04:05 ಗಂಟೆಗೆ ಸಿಎಸ್ಎಂಟಿ ಮುಂಬೈ ತಲುಪಲಿದೆ.

ಈ ರೈಲು ಎರಡೂ ದಿಕ್ಕುಗಳಲ್ಲಿ ದಾದರ, ಥಾಣೆ, ಕಲ್ಯಾಣ್, ಲೋನಾವಾಲ, ಪುಣೆ, ಸತಾರಾ, ಕರಾಡ್, ಸಾಂಗ್ಲಿ, ಮಿರಜ್, ಕುಡಚಿ, ರಾಯಬಾಗ್, ಘಟಪ್ರಭಾ, ಬೆಳಗಾವಿ, ಲೋಂಡಾ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಈ ರೈಲಿನಲ್ಲಿ 22 ಬೋಗಿಗಳಿದ್ದು, ಅವುಗಳಲ್ಲಿ 1-ಎಸಿ ಟು ಟೈರ್, 5-ಎಸಿ ತ್ರಿ ಟೈರ್, 10-ಸ್ಲೀಪರ್ ಕ್ಲಾಸ್, 4-ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2-ಎಸ್‌ಎಲ್‌ಆರ್‌ಡಿ ಬೋಗಿಗಳು ಸೇರಿವೆ.

ಮುಂಗಡ ಬುಕ್ಕಿಂಗ್ ಮತ್ತು ಆಗಮನ/ನಿರ್ಗಮನ ಸಮಯಗಳ ಕುರಿತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್‌ಗಳನ್ನು ಸಂಪರ್ಕಿಸಬಹುದು.

ಮದ್ದೂರು ನಿಲ್ದಾಣದಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ

ಮೈಸೂರು-ತಿರುವನಂತಪುರಂ ನಾರ್ತ್-ಮೈಸೂರು ಎಕ್ಸ್ ಪ್ರೆಸ್ (16315/16316) ರೈಲುಗಳಿಗೆ ಮದ್ದೂರು ನಿಲ್ದಾಣದಲ್ಲಿ ಒದಗಿಸಲಾಗಿರುವ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಏಪ್ರಿಲ್ 1, 2025 ರಿಂದ ಜೂನ್ 30, 2025 ರವರೆಗೆ ಮೂರು ತಿಂಗಳ ಕಾಲ ಮುಂದುವರಿಸಲು ನೈಋತ್ಯ ರೈಲ್ವೆಯು ನಿರ್ಧರಿಸಿದೆ.

ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಮೈಸೂರು-ವಿಜಯಪುರ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು

ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ವಿಜಯಪುರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ:

ರೈಲು ಸಂಖ್ಯೆ 06567 ಮೈಸೂರು-ವಿಜಯಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಮಾ.28ರಂದು ಸಂಜೆ 7.10ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಮಧ್ಯಾಹ್ನ 2.05ಕ್ಕೆ ವಿಜಯಪುರ ತಲುಪಲಿದೆ.

ರೈಲು ಸಂಖ್ಯೆ 06568 ವಿಜಯಪುರ - ಮೈಸೂರು ವಿಶೇಷ ಎಕ್ಸ್ ಪ್ರೆಸ್ ರೈಲು ಮಾ.31ರಂದು ಸಂಜೆ 7.00 ಗಂಟೆಗೆ ವಿಜಯಪುರದಿಂದ ಹೊರಟು, ಮರುದಿನ ಮಧ್ಯಾಹ್ನ 2.20ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಬದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಈ ರೈಲು 3 ಎಸಿ ಟು ಟೈರ್, 6 ಎಸಿ ತ್ರಿ ಟೈರ್, 10 ಸ್ಲೀಪರ್ ಕ್ಲಾಸ್, 2 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್ / ಡಿ ಬೋಗಿಗಳನ್ನು ಒಳಗೊಂಡಿರಲಿದೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.
Whats_app_banner