ಮಂಗಳೂರಿನಿಂದ ವಿವಿಧೆಡೆ ತೆರಳುವ ಹತ್ತು ರೈಲುಗಳಿಗೆ ಹೆಚ್ಚುವರಿ ಬೋಗಿ ಸೇರ್ಪಡೆ; ಪ್ರಯಾಣಿಕರ ದಟ್ಟಣೆ ಹಿನ್ನೆಲೆ
ಕನ್ನಡ ಸುದ್ದಿ  /  ಕರ್ನಾಟಕ  /  ಮಂಗಳೂರಿನಿಂದ ವಿವಿಧೆಡೆ ತೆರಳುವ ಹತ್ತು ರೈಲುಗಳಿಗೆ ಹೆಚ್ಚುವರಿ ಬೋಗಿ ಸೇರ್ಪಡೆ; ಪ್ರಯಾಣಿಕರ ದಟ್ಟಣೆ ಹಿನ್ನೆಲೆ

ಮಂಗಳೂರಿನಿಂದ ವಿವಿಧೆಡೆ ತೆರಳುವ ಹತ್ತು ರೈಲುಗಳಿಗೆ ಹೆಚ್ಚುವರಿ ಬೋಗಿ ಸೇರ್ಪಡೆ; ಪ್ರಯಾಣಿಕರ ದಟ್ಟಣೆ ಹಿನ್ನೆಲೆ

ಮಂಗಳೂರಿನಿಂದ ವಿವಿಧೆಡೆ ತೆರಳುವ ಹತ್ತು ರೈಲುಗಳಿಗೆ ಹೆಚ್ಚುವರಿ ಬೋಗಿ ಸೇರ್ಪಡೆಯಾಗಿದೆ. ಪ್ರಯಾಣಿಕರ ದಟ್ಟಣೆ ಹಿನ್ನೆಲೆ ಭಾರತೀಯ ರೈಲ್ವೆ ಈ ಕ್ರಮ ತೆಗೆದುಕೊಂಡಿದ್ದು, ರೈಲುಗಳ ವಿವರ ಇಲ್ಲಿದೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

ಪ್ರಯಾಣಿಕ ದಟ್ಟಣೆ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಿವಿಧೆಡೆ ತೆರಳುವ ಹತ್ತು ರೈಲುಗಳಿಗೆ ಹೆಚ್ಚುವರಿ ಬೋಗಿ ಸೇರ್ಪಡೆಯಾಗಿದೆ. (ಸಾಂಕೇತಿಕ ಚಿತ್ರ)
ಪ್ರಯಾಣಿಕ ದಟ್ಟಣೆ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಿವಿಧೆಡೆ ತೆರಳುವ ಹತ್ತು ರೈಲುಗಳಿಗೆ ಹೆಚ್ಚುವರಿ ಬೋಗಿ ಸೇರ್ಪಡೆಯಾಗಿದೆ. (ಸಾಂಕೇತಿಕ ಚಿತ್ರ)

ಮಂಗಳೂರು: ಮಂಗಳೂರಿಗೆ ತೆರಳುವ ಹಾಗೂ ಮಂಗಳೂರಿನಿಂದ ವಿವಿಧೆಡೆಗೆ ಹೋಗುವ ಹತ್ತು ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಸೇರಿಸಲಾಗಿರುವುದಾಗಿ ರೈಲ್ವೆ ಪ್ರಕಟಣೆ ತಿಳಿಸಿದೆ. ಬೇಸಗೆ ರಜೆ ಹಿನ್ನೆಲೆಯಲ್ಲಿ ಕರಾವಳಿ ಕಡೆಗೆ ಬರುವ ಹಾಗೂ ಅಲ್ಲಿಂದ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಮಂಗಳೂರಿನಿಂದ ವಿವಿಧೆಡೆ ತೆರಳುವ ಹತ್ತು ರೈಲುಗಳಿಗೆ ಹೆಚ್ಚುವರಿ ಬೋಗಿ ಸೇರ್ಪಡೆ

1) ತಿರುವನಂತಪುರಂ ಸೆಂಟ್ರಲ್ ನಿಂದ ಮಂಗಳೂರಿಗೆ ತೆರಳುವ ಮಾವೇಲಿ ಎಕ್ಸ್ ಪ್ರೆಸ್ ರೈಲು ಸಂಖ್ಯೆ 1604ಕ್ಕೆ ಮೇ 17 ಮತ್ತು 19ರಂದು, ಮಂಗಳೂರು ಸೆಂಟ್ರಲ್ ನಿಂದ ತಿರುವನಂತಪುರಂ ಸೆಂಟ್ರಲ್ ಗೆ ತೆರಳುವ ಮಾವೇಲಿ ಎಕ್ಸ್ ಪ್ರೆಸ್ ರೈಲು ಸಂಖ್ಯೆ 16603 ಮೇ 16 ಮತ್ತು 18ರಂದು ಹೆಚ್ಚುವರಿ ಎರಡು ಸ್ಲೀಪರ್ ಕ್ಲಾಸ್ ಬೋಗಿಗಳನ್ನು ಸೇರಿಸಲಾಗುತ್ತಿದೆ.

2) ತಿರುವನಂತಪುರಂ ಸೆಂಟ್ರಲ್ ನಿಂದ ಮಂಗಳೂರು ಸೆಂಟ್ರಲ್ ಗೆ ತೆರಳುವ ಮಲಬಾರ್ ಎಕ್ಸ್ ಪ್ರೆಸ್ ರೈಲು ಸಂಖ್ಯೆ 16629ಕ್ಕೆ ಮೇ 16ರಿಂದ 19ರವರೆಗೆ ಮಂಗಳೂರು ಸೆಂಟ್ರಲ್ ನಿಂದ ತಿರುವನಂದಪುರಂ ಸೆಂಟ್ರಲ್ ಮಲಬಾರ್ ಎಕ್ಸ್ ಪ್ರೆಸ್ ನಂ. 16630ಕ್ಕೆ ಮೇ 15ರಿಂದ 18ರವರೆಗೆ ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಸೇರ್ಪಡೆಯಾಗಲಿದೆ.

3) ತಿರುವನಂತಪುರಂ ಸೆಂಟ್ರಲ್ ನಿಂದ ಮಧುರೈ ಜಂಕ್ಷನ್ ಅಮೃತ ಎಕ್ಸ್ ಪ್ರೆಸ್ ನಂ16343 ಮೇ 16ರಿಂದ 19ರವರೆಗೆ, ಮಧುರೈ ಜಂಕ್ಷನ್ ತಿರುವನಂತಪುರಂ ಸೆಂಟ್ರಲ್ ಅಮೃತ ಎಕ್ಸ್ ಪ್ರೆಸ್ ಸಂಖ್ಯೆ 16344 ಮೇ 17ರಿಂದ 20ರವರೆಗೆ ಹ ೆಚ್ಚುವರಿ 1 ಸ್ಲೀಪರ್ ಕ್ಲಾಸ್ ಬೋಗಿ ಸೇರ್ಪಡೆಗೊಂಡಿದೆ.

4) ಕಾರೈಕಲ್ ನಿಂದ ಎರ್ನಾಕುಲಂ ಜಂಕ್ಷನ್ ಎಕ್ಸ್ ಪ್ರೆಸ್ ಗೆ ನಂ 16187 ಮೇ 17ರಿಂದ 20ರವರೆಗೆ ಹಾಗೂ ಎರ್ನಾಕುಲಂ ಜಂಕ್ಷನ್ ಕರೈಕಲ್ ಎಕ್ಸ್ ಪ್ರೆಸ್ ಗೆ ನಂ 16188 ಮೇ 18ರಿಂದ 21ರವರೆಗೆ ಹೆಚ್ಚುವರಿ ಒಂದು ಸ್ಲೀಪರ್ ಕ್ಲಾಸ್ ಬೋಗಿ ಸೇರ್ಪಡೆಯಾಗಲಿದೆ.

5) ಡಾ. ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ – ತಿರುವನಂತಪುರಂ ಸೆಂಟ್ರಲ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ನಂ 12695 ಮೇ 16 ಮತ್ತು 17ರಂದು ತಿರುವನಂತಪುರಂ ಸೆಂಟ್ರಲ್ ನಿಂದ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ನಂ 12696 ಮೇ 17 ಮತ್ತು 18ರಂದು ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಸೇರಿಸುವುದಾಗಿ ರೈಲ್ವೆ ಇಲಾಖೆ ತಿಳಿಸಿದೆ.

(ವರದಿ- ಹರೀಶ್ ಮಾಂಬಾಡಿ, ಮಂಗಳೂರು)

ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.