ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಮತ್ತು ಮಾಹಿತಿ ಆಯುಕ್ತರ ನೇಮಕ
ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮುಖ್ಯ ಮಾಹಿತಿ ಆಯುಕ್ತರನ್ನಾಗಿ ನಿವೃತ್ತ ಐಪಿಎಸ್ ಅಧಿಕಾರಿ ಆಶಿತ್ ಮೋಹನ್ ಪ್ರಸಾದ್ ಅವರನ್ನು ನೇಮಕಗೊಳಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಮಾಹಿತಿ ಆಯೋಗದ (Information Commission) ರಾಜ್ಯ ಮುಖ್ಯ ಮಾಹಿತಿ ಆಯುಕ್ತರು (State Chief Information Commissioner) ಮತ್ತು ರಾಜ್ಯ ಮಾಹಿತಿ ಆಯುಕ್ತರನ್ನು ನೇಮಕಗೊಳಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawar Chand Gehlot) ಆದೇಶ ಹೊರಡಿಸಿದ್ದಾರೆ.
ಇದೇ ವೇಳೆ ರಾಜ್ಯ ಮಾಹಿತಿ ಆಯುಕ್ತರಾಗಿ 7 ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ರಾಮನ್. ಕೆ, ಡಾ.ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ. ಚನ್ನಾಳ, ರಾಜಶೇಖರ ಎಸ್, ಬದ್ರುದ್ದೀನ್ ಕೆ. ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಡಾ.ಮಮತಾ ಬಿ.ಆರ್. ಅವರನ್ನು ನೇಮಕ ಮಾಡಲಾಗಿದೆ.
----------
ಮಂಡ್ಯದಲ್ಲಿ ನೂತನ ಕೃಷಿ, ತೋಟಗಾರಿಕೆ ವಿವಿಗೆ ವಿಶೇಷಾಧಿಕಾರಿ ಸದ್ಯವೇ ನೇಮಕ
ಕಳೆದ ವರ್ಷದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದ ಮಂಡ್ಯದ ಕೃಷಿ ವಿಶ್ವವಿದ್ಯಾನಿಲಯಕ್ಕೆ ಅಧಿಕೃತವಾಗಿ ಅನುಮತಿ ನೀಡಲಾಗಿದ್ದು, ಸರ್ಕಾರಿ ಆದೇಶ ಹೊರ ಬಿದ್ದಿದೆ. ಮಂಡ್ಯ ಜಿಲ್ಲೆಯ ವಿ.ಸಿ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪನೆಗೆ ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಲಾಗಿದೆ. ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ, ಹಾಸನ ಸಹಿತ ಈ ಭಾಗದ ಕೆಲವು ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ಕೃಷಿ ಹಾಗೂ ತೋಟಗಾರಿಕೆ ಸಂಸ್ಥೆಗಳು ಮಂಡ್ಯ ಕೃಷಿ ವಿವಿ ವ್ಯಾಪ್ತಿಗೆ ಬರಲಿವೆ.
ನೂತನ ಬಜೆಟ್ ಘೋಷಣೆಯಂತೆ ಬೆಂಗಳೂರು ಕೃಷಿ ವಿ.ವಿಯ ವಿಶ್ರಾಂತಿ ಕುಲಪತಿ ಡಾರಾಜೇಂದ್ರಪ್ರಸಾದ್‌ರವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. ಈ ತಂಡವು ಹಲವು ಭಾರಿ ಸ್ಥಳ ಪರಿಶೀಲಿಸಿ, ಸಭೆಗಳನ್ನು ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.
