ಕನ್ನಡ ಸುದ್ದಿ  /  Karnataka  /  Investigation Into Pakistan Zindabad Controversy In Vidhana Soudha Home Minister G Parameshwara Gave A New Update Prs

ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ವಿವಾದದ ತನಿಖೆ; ಗೃಹ ಸಚಿವ ಜಿ ಪರಮೇಶ್ವರ ಕೊಟ್ರು ಹೊಸ ಅಪ್ಡೇಟ್​!

Pak slogans raised in Karnataka assembly : ಪಾಕಿಸ್ತಾನ ಪರ ಘೋಷಣೆ ಕೂಗಿದ ವಿವಾದಕ್ಕೆ ಸಂಬಂಧಿಸಿ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದು, ವರದಿ ಮುಚ್ಚಿಡುವ ಅಗತ್ಯವೇ ಇಲ್ಲ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ವಿವಾದದ ತನಿಖೆ; ಗೃಹ ಸಚಿವ ಜಿ ಪರಮೇಶ್ವರ ಕೊಟ್ರು ಹೊಸ ಅಪ್ಡೇಟ್​!
ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ವಿವಾದದ ತನಿಖೆ; ಗೃಹ ಸಚಿವ ಜಿ ಪರಮೇಶ್ವರ ಕೊಟ್ರು ಹೊಸ ಅಪ್ಡೇಟ್​!

ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣದ ಆರೋಪಿಯ ಬಗ್ಗೆ ಕೆಲವು‌ ಪ್ರಮುಖವಾದ ಕುರುಹುಗಳು ಸಿಕ್ಕಿವೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಹೇಳಿದ್ದಾರೆ.

ನಗರ‌ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಈವರೆಗಿನ ತನಿಖೆ ಹಾಗೂ ಮುಂದೆ ಕೈಗೊಳ್ಳಬೇಕಿರುವ ವಿಚಾರಗಳನ್ನು ಚರ್ಚಿಸಲಾಗಿದೆ. ಆರೋಪಿ ಚಹರೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ತನಿಖೆ ಕೈಗೊಳ್ಳಲಾಗಿದೆ‌ ಎಂದರು.

ಎನ್‌ಐಎ, ಎನ್‌ಎಸ್‌ಜಿ ಅಧಿಕಾರಿಗಳು ಸಹ ತಮ್ಮದೇ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಒಬ್ಬೊಬ್ಬರಿಗೆ ಸಹಕಾರದಿಂದ ಪ್ರಕರಣವನ್ನು ಪತ್ತೆ ಹಚ್ಚುತ್ತೇವೆ. ಯಾರು ಆತಂಕಪಡುವ ಅಗತ್ಯವಿಲ್ಲ ಎಂದು ಬೆಂಗಳೂರು ನಗರದ ಜನತೆಗೆ ಮನವಿ ಮಾಡುತ್ತೇನೆ. ನಗರವನ್ನು ಸೇಫ್‌ ಸಿಟಿ ಮಾಡಲು ಮೊದಲಿನಿಂದಲೂ ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಪೊಲೀಸರು ಹಸ್ತು ತಿರುಗುವುದು, ಸೂಕ್ಷ್ಮ ಚಲನವಲನಗಳ ಮೇಲೆ ನಿಗಾವಹಿಸುವುದು ಸೇರಿದಂತೆ ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಎಲ್ಲ ವಿಭಾಗದ ಡಿಸಿಪಿಗಳಿಗೆ ಸೂಚಿಸಿದ್ದೇನೆ. ತನಿಖೆಗೆ ತೊಂದರೆಯಾಗುವುದರಿಂದ ಟೆಕ್ನಿಕಲ್ ಮಾಹಿತಿಯನ್ನು ಬಹಿರಂಗ ಪಡಿಸಲು ಆಗುವುದಿಲ್ಲ ಎಂದು ತಿಳಿಸಿದರು.

ವರದಿ ಮುಚ್ಚಿಡುವ ಪ್ರಶ್ನೆಯೇ ಇಲ್ಲ

ವಿಧಾನಸೌಧದ ಆವರಣದಲ್ಲಿ ಘೋಷಣೆ ಕೂಗಿದ ಆರೋಪದ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು,‌ ಎಫ್‌ಎಸ್‌ಎಲ್‌ನ ವೈಜ್ಞಾನಿಕ ವರದಿಗಾಗಿ ಕಾಯುತ್ತಿದ್ದು, ಸಂಪೂರ್ಣ ವರದಿ ಬಂದ ನಂತರ ಅದನ್ನು ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಯಾವುದೇ ಮುಲಾಜಿಲ್ಲದೇ, ಒತ್ತಡಕ್ಕೆ ಮಣಿಯದೇ ತಪ್ಪಿತಸ್ಥನ ವಿರುದ್ಧ ಕ್ರಮ ಜರುಗಿಸಲಾಗುವುದು.‌ ಈ ಮಾತನ್ನು ಸದನದಲ್ಲಿಯೂ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

ಮೂರು‌ ದಿನದ ಹಿಂದೆ ಎಫ್‌ಎಸ್‌ಎಲ್‌ ವರದಿ ಬಂದಿದೆ. ಅದರ ಸ್ಪಷ್ಟಿಕರೀಣಕ್ಕಾಗಿ ಮತ್ತೆ ವಾಪಸ್ ಕಳುಹಿಸಲಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ಪಷ್ಟೀಕರಣದ ಪ್ರಶ್ನೆ ಬರುವುದಿಲ್ಲ.‌ ಒಮ್ಮೆ ವರದಿ ಬಂದರೆ ಮುಗಿಯಿತು. 2ನೇ ವರದಿ, 3ನೇ ವರದಿ ಕೊಡುವಂತೆ ನಾವು‌ ಹೇಳಲು ಹೋಗುವುದಿಲ್ಲ. ವರದಿ ಮುಚ್ಚಿಡುವ ಅಗತ್ಯವೇ ಇಲ್ಲ. ಬಿಜೆಪಿಯವರು ಆರೋಪ ಮಾಡಿಕೊಳ್ಳಲಿ, ನಾವು ಉತ್ತರ ನೀಡುತ್ತೇವೆ. ನಾನು ಅಧಿಕೃತವಾಗಿ ಹೇಳುತ್ತಿದ್ದೇನೆ. ವರದಿ ಕೈ ಸೇರಿದ ತಕ್ಷಣ ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್, ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ, ಗುಪ್ತಚರ ದಳದ ಎಡಿಜಿಪಿ ಶರತ್ ಚಂದ್ರ, ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್, ಸಂಚಾರ ವಿಭಾಗದ ಜಂಟಿ ಆಯುಕ್ತ ಎಂಎನ್ ಅನುಚೇತ್ ಸೇರಿದಂತೆ ನಗರದ ಎಲ್ಲ ವಿಭಾಗದ ಡಿಸಿಪಿಗಳು ಸಭೆಯಲ್ಲಿ ಹಾಜರಿದ್ದರು.

IPL_Entry_Point