ಕನ್ನಡ ಸುದ್ದಿ  /  Karnataka  /  Investment In Coastal Belt: Hydrogen Fuel Plant And Ammonium Production From Sea Water Plant Will Come In Coastal Belt Announced Cm Basavaraja Bommai

Investment in Coastal belt: ಕರಾವಳಿಯಲ್ಲಿ ಜಲಜನಕ ಇಂಧನ, ಸಮುದ್ರನೀರಿನಿಂದ ಅಮೋನಿಯಂ ಘಟಕ; ಮುಖ್ಯಮಂತ್ರಿ ಬೊಮ್ಮಾಯಿ

Investment in Coastal belt: ಹೈಡ್ರೋಜನ್ ಹಾಗೂ ಅಮೋನಿಯಾ ಉತ್ಪಾದನೆಯ ಎರಡು ಪ್ರಮುಖ ಯೋಜನೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಬರಲಿದ್ದು, ಗಲ್ಫ್ ದೇಶದಲ್ಲಿ ಮತ್ತು ಮಂಗಳೂರಿನಲ್ಲಿ ತಲೆ ಎತ್ತಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಂಗಳೂರು: ನವೀಕರಿಸಬಹುದಾದ ಇಂಧನ, ಹೈಡ್ರೋಜನ್ ಇಂಧನ ಮತ್ತು ಕಡಲನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಂದೂವರೆಯಿಂದ ಎರಡು ಲಕ್ಷ ಕೋಟಿ ರೂಪಾಯಿ ಬಂಡವಾಳ ಈ ಸಲದ ಹೂಡಿಕೆ ಸಮಾವೇಶದ ಮೂಲಕ ಹರಿದುಬರುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಶನಿವಾರ ಮಂಗಳೂರಿನ ಬಾವುಟಗುಡ್ಡದಲ್ಲಿ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲು ಮಂಗಳೂರಿಗೆ ಆಗಮಿಸಿದ ವೇಳೆ ಸುದ್ದಿಗಾರರ ಜತೆಗೆ ಮಾತನಾಡಿದರು.

ಉತ್ಪಾದನೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ತಯಾರಿ ನಡೆಸಲಾಗಿದೆ. ಈಗಾಗಲೇ ಮೂರು ನವೀಕರಿಸಬಹುದಾದ ಇಂಧನ ಕಂಪೆನಿಗಳೊಂದಿಗೆ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿ ಯಲ್ಲಿ ಅನುಮೋದನೆ ನೀಡಲಾಗಿದೆ. ಬಹಳ ವೇಗದಲ್ಲಿ ಕೆಲಸಗಳಾಗುತ್ತಿದ್ದು, ಮಾರ್ಚ್ ಏಪ್ರಿಲ್ ವೇಳೆಗೆ ಕೆಲಸ ಪ್ರಾರಂಭ ಮಾಡುವುದಾಗಿ 2-3 ಕಂಪನಿಗಳು ಹೇಳಿವೆ. ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರಾವಳಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಮುಖ್ಯ ಪಾತ್ರ ವಹಿಸಿದೆ.

ಹೈಡ್ರೋಜನ್ ಹಾಗೂ ಅಮೋನಿಯಾ ಉತ್ಪಾದನೆಯ ಎರಡು ಪ್ರಮುಖ ಯೋಜನೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಬರಲಿದ್ದು, ಗಲ್ಫ್ ದೇಶದಲ್ಲಿ ಮತ್ತು ಮಂಗಳೂರಿನಲ್ಲಿ ತಲೆ ಎತ್ತಲಿದೆ. ಮಂಗಳೂರಿನ ಆಸುಪಾಸಿನಲ್ಲಿ ಕಡಲ ನೀರಿನಿಂದ ಅಮೋನಿಯಾ ತಯಾರು ಮಾಡುವ ಪ್ರಮುಖ ಘಟ್ಟ ಬರಲಿದೆ. ನವೀಕರಿಸಬಹುದಾದ ಇಂಧನ ಘಟಕ್ಕೆ ಅಗತ್ಯ ವಿರುವ ಇಂಧವನ್ನೂ ನವೀಕರಿಸಬಹುದಾದ ಇಂಧನ ಮೂಲಗಳಾದ ಸೋಲಾರ್, ವಿಂಡ್ ಮಿಲ್ ಗಳಿಂದಲೇ ಪಡೆಯಲಾಗುವುದು. ಸಂಪೂರ್ಣವಾಗಿ ಹಸಿರು ಯೋಜನೆಯಾಗಲಿದೆ ಎಂದರು.

ರಾಜ್ಯದಲ್ಲಿ ಈಗಾಗಲೇ 100 ನವೀಕರಿಸಬಹುದಾದ ಇಂಧನ ಕಂಪನಿಗಳ ಯೋಜನೆಗೆ ಸ್ಟೇಟ್‌ ಕ್ಲಿಯರೆನ್ಸ್‌ ಕಮಿಟಿ ಕ್ಲಿಯರೆನ್ಸ್‌ ಕೊಟ್ಟಾಗಿದೆ. ಎರಡು ಮೂರು ಕಂಪನಿಗಳು ಮಾರ್ಚ್‌ ಏಪ್ರಿಲ್‌ನಲ್ಲಿ ಕೆಲಸ ಶುರುಮಾಡಲಿವೆ. ಇವುಗಳ ಮೂಲಕ ನೇರ ಹಾಗೂ ಪರೋಕ್ಷವಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಜನೆಯಾಗಿ ಈ ಭಾಗದ ಯುವಕರಿಗೆ ಅವಕಾಶಗಳ ಬಾಗಿಲು ತೆರೆಯಲಿದೆ ಎಂದರು.

ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ‌ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಅವರನ್ನು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಹಾಗೂ ಜನಪ್ರತಿನಿಧಿಗಳು ಆತ್ಮೀಯವಾಗಿ ಸ್ವಾಗತಿಸಿದರು.

ಶಾಸಕಾರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಸಹಾಯಕ‌ ಆಯುಕ್ತ ಮದನ್ ಮೋಹನ್ ಹಾಗೂ ಇತರೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

ವಿಮಾನ ನಿಲ್ದಾಣದಿಂದ ಕಾರ್ಯಕ್ರಮ ಸ್ಥಳಕ್ಕೆ ಹೋಗುವ ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎ.ಜೆ. ಆಸ್ಪತ್ರೆಯಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಕುಶಲ ವಿಚಾರಿಸಿದರು. ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಮತ್ತಿತರರು ಜತೆಗಿದ್ದರು.

IPL_Entry_Point