ಬಂಟ್ವಾಳ ತಾಲೂಕು ಇರಾಕೋಡಿ ರಹಿಮಾನ್ ಹತ್ಯೆ, 15 ಮಂದಿ ವಿರುದ್ಧ ಎಫ್ಐಆರ್, ಶೀಘ್ರ ಆರೋಪಿಗಳ ಬಂಧನ : ಎಡಿಜಿಪಿ
ಕನ್ನಡ ಸುದ್ದಿ  /  ಕರ್ನಾಟಕ  /  ಬಂಟ್ವಾಳ ತಾಲೂಕು ಇರಾಕೋಡಿ ರಹಿಮಾನ್ ಹತ್ಯೆ, 15 ಮಂದಿ ವಿರುದ್ಧ ಎಫ್ಐಆರ್, ಶೀಘ್ರ ಆರೋಪಿಗಳ ಬಂಧನ : ಎಡಿಜಿಪಿ

ಬಂಟ್ವಾಳ ತಾಲೂಕು ಇರಾಕೋಡಿ ರಹಿಮಾನ್ ಹತ್ಯೆ, 15 ಮಂದಿ ವಿರುದ್ಧ ಎಫ್ಐಆರ್, ಶೀಘ್ರ ಆರೋಪಿಗಳ ಬಂಧನ : ಎಡಿಜಿಪಿ

ರಹಿಮಾನ್ ಹತ್ಯೆ ಕೇಸ್ ಸಂಬಂಧ ತಂಡಗಳಲ್ಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.15 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುತ್ತದೆ ಎಂದು ಎಡಿಜಿಪಿ ಹಿತೇಂದ್ರ ಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

ಬಂಟ್ವಾಳ ತಾಲೂಕು ಇರಾಕೋಡಿ ರಹಿಮಾನ್ ಹತ್ಯೆ ಕೇಸ್‌ನಲ್ಲಿ 15 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಎಡಿಜಿಪಿ ಹಿತೇಂದ್ರ ಪ್ರಸಾದ್ ಹೇಳಿದರು.
ಬಂಟ್ವಾಳ ತಾಲೂಕು ಇರಾಕೋಡಿ ರಹಿಮಾನ್ ಹತ್ಯೆ ಕೇಸ್‌ನಲ್ಲಿ 15 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಎಡಿಜಿಪಿ ಹಿತೇಂದ್ರ ಪ್ರಸಾದ್ ಹೇಳಿದರು.

ಮಂಗಳೂರು: ಬಂಟ್ವಾಳ ತಾಲೂಕು ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಮೇ 27ರಂದು ನಡೆದ ಟೆಂಪೊ ಚಾಲಕ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಅಂತಿಮ ವಿಧಿ ವಿಧಾನಗಳು ಬುಧವಾರ ಕೊಳತ್ತಮಜಲು ಮಸೀದಿಯಲ್ಲಿ ನಡೆಯಿತು. ಈ ವೇಳೆ ಸಾವಿರಾರು ಮಂದಿ ಭಾಗವಹಿಸಿದ್ದರು. ಇದಕ್ಕೂ ಮೊದಲು ಅವರ ಪಾರ್ಥಿವ ಶರೀರವನ್ನು ಕರೆತರುವ ವೇಳೆ ಫರಂಗಿಪೇಟೆ, ತುಂಬೆ, ಬಿ.ಸಿ.ರೋಡ್ ನ ಕೈಕಂಬ ಪ್ರದೇಶಗಳಲ್ಲಿ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಲಾಯಿತು.

ರಹಿಮಾನ್ ಹತ್ಯೆ, 15 ಮಂದಿ ವಿರುದ್ಧ ಎಫ್ಐಆರ್

ಸ್ಥಳಕ್ಕೆ ರಾಜ್ಯ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಪ್ರಸಾದ್ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂಡಗಳಲ್ಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು, ಈ ಕೇಸ್ ಸಂಬಂಧ 15 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳನ್ನು ಶೀಘ್ರ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಕರಣದಲ್ಲಿ ಯಾರ್ಯಾರಿದ್ದಾರೆ ಅವರನ್ನು ಪತ್ತೆಹಚ್ಚಲು ತಂಡಗಳನ್ನು ರಚಿಸಲಾಗಿದೆ. ಶೀಘ್ರ ಬಂಧನ ಪ್ರಕ್ರಿಯೆ ನಡೆಯಲಿದೆ. ನಿಸಾರ್ ಎಂಬವರು ನೀಡಿದ ದೂರಿನಂತೆ ಎಫ್.ಐ.ಆರ್. ದಾಖಲಾಗಿದೆ. ಈ ಕುರಿತು ಸಮಗ್ರ ತನಿಖೆಯನ್ನು ನಡೆಸಲಾಗುತ್ತದೆ. ಘಟನೆಗೆ ಕಾರಣವೇನು ಎಂಬುದು ಇನ್ನೂ ಕೂಲಂಕಷ ತನಿಖೆಯಿಂದ ಗೊತ್ತಾಗಬೇಕಷ್ಟೇ. ಆದರೆ ತನಿಖೆ ಪ್ರಗತಿಯಲ್ಲಿದ್ದು, ಶೀಘ್ರ ಮಾಹಿತಿಯನ್ನು ನೀಡಲಾಗುವುದು ಎಂದು ಎಡಿಜಿಪಿ ಹಿತೇಂದ್ರ ಪ್ರಸಾದ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ

ಈಗಾಗಲೇ ಮಂಗಳೂರು ಸಿಟಿ ಸಹಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿಯಲ್ಲಿದೆ. ಸಾವಿರದಷ್ಟು ಪೊಲೀಸರು ಬಂದೋಬಸ್ತ್ ನಲ್ಲಿ ನಿರತರಾಗಿದ್ದಾರೆ. ಇದೇ ವೇಳೆ ಸೋಶಿಯಲ್ ಮೀಡಿಯಾ ಮೂಲಕ ತರಹೇವಾರಿ ಮೆಸೇಜ್ ಗಳನ್ನು ಹರಡುವುದು, ಪ್ರಚೋದನಕಾರಿ ಸಂದೇಶಗಳನ್ನು ನೀಡುವುದು, ವದಂತಿಗಳನ್ನು ಹರಡಿಸುವುದರ ಕುರಿತು ನಿಗಾ ವಹಿಸಲಾಗುತ್ತಿದ್ದು, ಕಠಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಎಚ್ಚರಿಸಿದ್ದಾರೆ. ಪ್ರಚೋದನಕಾರಿ ಬರೆಹಗಳನ್ನು ಹಾಕದಂತೆ ಹಾಗೂ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ನೀಡಲಾಗಿದ್ದು, ಅಂಥದ್ದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.

(ವರದಿ- ಹರೀಶ್ ಮಾಂಬಾಡಿ, ಮಂಗಳೂರು)

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.