ಕನ್ನಡ ಸುದ್ದಿ  /  Karnataka  /  It Is Not The Right Time For Maharashtra Ministers To Visit Belagavi Says Cm Basavaraj Bommai

Basavaraj Bommai: ಇಲ್ಲಿ ಬಂದು ಏನು 'ಮಹಾ' ಮಾಡೋದಿದೆ?: ಕರ್ನಾಟಕಕ್ಕೆ ಬರಕೂಡದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದು ಯಾರಿಗೆ?

ನಾಳೆ(ಡಿ.06-ಮಂಗಳವಾರ) ಬೆಳಗಾವಿಗೆ ಭೇಟಿ ನೀಡುವುದಾಗಿ ಹೇಳಿರುವ ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ್‌ ಪಾಟೀಲ್‌ ಹಾಗೂ ಶಂಭುರಾಜ್‌ ದೇಸಾಯಿ ಅವರಿಗೆ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಈಗಿನ ಸನ್ನಿವೇಶದಲ್ಲಿ ಮಹಾರಾಷ್ಟ್ರದ ಸಿಎಂ ಆಗಲಿ ಅಥವಾ ಯಾವುದೇ ಸಚಿವರಾಗಲಿ ಕರ್ನಾಟಕಕ್ಕೆ ಭೇಟಿ ನೀಡುವ ಅವಶ್ಯಕತೆಯಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ) (Verified Twitter)

ಹುಬ್ಬಳ್ಳಿ: ನಾಳೆ(ಡಿ.06-ಮಂಗಳವಾರ) ಬೆಳಗಾವಿಗೆ ಭೇಟಿ ನೀಡುವುದಾಗಿ ಹೇಳಿರುವ ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ್‌ ಪಾಟೀಲ್‌ ಹಾಗೂ ಶಂಭುರಾಜ್‌ ದೇಸಾಯಿ ಅವರಿಗೆ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಮಹಾರಾಷ್ಟ್ರದ ಸಚಿವರು ಕರ್ನಾಟಕಕ್ಕೆ ಬಂದು ಮಾಡುವುದು ಏನೂ ಇಲ್ಲ ಎಂದು ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಸ್ತುತ ಸನ್ನಿವೇಶವನ್ನು ಪರಿಗಣಿಸಿ ಮಹಾರಾಷ್ಟ್ರದ ಮುಖ್ಯಮಂತ್ರಿ ಅಥವಾ ಯಾವುದೇ ಸಚಿವರು ಕರ್ನಾಟಕಕ್ಕೆ ಭೇಟಿ ನೀಡುವುದು ಬೇಡ ಎಂದು ಹೇಳಿದರು.

ಈ ಕುರಿತು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಲಿಖಿತವಾಗಿ ತಿಳಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಹಿತದೃಷ್ಟಿಯಿಂದ ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರದಿರುವುದೇ ಒಳಿತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ನಡುವಿನ ಗಡಿ ವಿವಾದ, ಉಭಯ ರಾಜ್ಯಗಳ ಜನರ ನಡುವಿನ ಸಾಮರಸ್ಯಕ್ಕೆ ಧಕ್ಕೆ ತರಬಾರದು. ಈಗಿನ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಭೇಟಿ ನೀಡುವುದು ಸಮಂಜಸವಾದ ನಿರ್ಣಯವಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ನಮ್ಮ ಪ್ರಕಾರ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮುಗಿದು ಹೋಗಿರುವ ಅಧ್ಯಾಯ. ಆದರೆ ಮಹಾರಾಷ್ಟ್ರ ಪದೇ ಪದೇ ಗಡಿ ಖ್ಯಾತೆ ತೆಗೆದು ಸುಪ್ರೀಂಕೋರ್ಟ್ ಕದ ತಟ್ಟುತ್ತದೆ. ಇದರಿಂದ ಉಭಯ ರಾಜ್ಯಗಳ ಗಡಿ ಭಾಗದಲ್ಲಿ ತ್ವೇಷಮಯ ವಾತಾವರಣ ನಿರ್ಮಾಣವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವ ಸಾಹಸ ಮಾಡಿದರೆ, ಕಾನೂನು ರೀತಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ನಾನು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ಸಿಎಂ ಬೊಮ್ಮಾಯಿ ಮಾಹಿತಿ ನೀಡಿದರು.

ನೆರೆ ರಾಜ್ಯದ ಮುಖ್ಯಮಂತ್ರಿ ಅಥವಾ ಸಚಿವರನ್ನು ನಮ್ಮ ರಾಜ್ಯಕ್ಕೆ ಬಾರದಂತೆ ತಡೆಯಲು ಪ್ರತಿಬಂಧಕ ಕಾಯ್ದೆ ಜಾರಿ ಮಾಡಬಹುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಬಸವರಾಜ ಬೊಮ್ಮಾಯಿ, ಇಂತಹ ಸಂದರ್ಭಗಳಲ್ಲಿ ಈ ಹಿಂದಿನ ಸರ್ಕಾರಗಳು ಯಾವ ರೀತಿ ಕ್ರಮ ಕೈಗೊಂಡಿವೆ ಎಂಬುದನ್ನು ಪರಿಶೀಲಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಒಟ್ಟಿನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವೆಂಬ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಉದ್ದೇಶ ಹೊಂದಿರುವ ಮಹಾರಾಷ್ಟ್ರದ ಇಬ್ಬರು ಸಚಿವರು, ನಾಳೆ ಬೆಳಗಾವಿಗೆ ಭೇಟಿ ನೀಡುವುದಾಗಿ ಹೇಳಿದ್ದಾರೆ. ಆದರೆ ಮಹಾರಾಷ್ಟ್ರದ ಸಿಎಂ ಸೇರಿದಂತೆ ಯಾವುದೇ ಸಚಿವರು ಕರ್ನಾಟಕಕ್ಕೆ ಬರುವುದು ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್‌ ಸಂದೇಶ ರವಾನಿಸಿದ್ದಾರೆ.

ಇಂದಿನ ಪ್ರಮುಖ ಸುದ್ದಿಗಳು

Somabhai Modi: ತಮ್ಮನ ಆರೋಗ್ಯದ ಬಗ್ಗೆ ಚಿಂತಿಸಿ ಭಾವುಕರಾದ ಪ್ರಧಾನಿ ಅವರ ಹಿರಿಯ ಸಹೋದರ ಸೋಮಭಾಯಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹಿರಿಯ ಸಹೋದರ ಸೋಮಭಾಯಿ ಮೋದಿ ಅವರು, ಇಂದು (ಡಿ.05-ಸೋಮವಾರ) ಅಹಮದಾಬಾದ್‌ನಲ್ಲಿ ಎರಡನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದರು. ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ ಹಿರಿಯ ಸಹೋದರ ಸೋಮಭಾಯಿ ಮೋದಿ, ತಮ್ಮನ್ನು ಭೇಟಿ ಮಾಡಿದ ಪ್ರಧಾನಿ ಬಗ್ಗೆ ಮಾತನಾಡುತ್ತಾ ಭಾವುಕರಾದರು. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.

BJP Meeting: ದೆಹಲಿಯಲ್ಲಿ ಬಿಜೆಪಿ ಪದಾಧಿಕಾರಿಗಳ ಸಭೆ ಆರಂಭ: ಚರ್ಚೆಗೆ ಬರಲಿರುವ ಸಂಗತಿಗಳೇನು?

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಇಂದು(ಡಿ.05-ಸೋಮವಾರ) ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆಯುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.

IPL_Entry_Point

ವಿಭಾಗ