ಕನ್ನಡ ಸುದ್ದಿ / ಕರ್ನಾಟಕ /
ಮೈಸೂರು: ಕಬಿನಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ 13 ಸಾವಿರ ಕ್ಯೂಸೆಕ್‌ಗೆ ಏರಿಕೆ
ಮೈಸೂರು ಜಿಲ್ಲೆ ಹೆಗ್ಗಡದೇವನಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದಲ್ಲಿ ನೀರಿನ ಪ್ರಮಾಣ 13 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿದೆ.

ಕಬಿನಿ ಜಲಾಶಯದಲ್ಲಿ ನೀರಿನ ಪ್ರಮಾಣ 13 ಸಾವಿರ ಕ್ಯೂಸೆಕ್‌ಗೆ ಏರಿಕೆ
ಮೈಸೂರು : ಕಬಿನಿ ಜಲಾನಯನ ಪ್ರದೇಶ ಹಾಗು ಕೇರಳದ ವಯನಾಡಿನಲ್ಲಿ ಮಳೆ ಹೆಚ್ಚಾಗಿರುವುದರಿಂದ ಕಬಿನಿ ಜಲಾಶಯದ ಒಳಹರಿವು ಹೆಚ್ಚಳವಾಗಿದೆ. ಕಬಿನಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ 13 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿದೆ. ಮೈಸೂರು ಜಿಲ್ಲೆ ಹೆಗ್ಗಡದೇವನಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬಂದಿದೆ.
ನೆಲಮಟ್ಟದಿಂದ 84 ಅಡಿ ಸಾಮರ್ಥ್ಯದ ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 63.52 ಅಡಿಗಳಿಗೆ ಏರಿಕೆ ಕಂಡಿದೆ. ಕಬಿನಿ ಜಲಾಶಯ 19.52 ಟಿಎಂಸಿ ನೀರನ್ನು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ.
ಸದ್ಯಕ್ಕೆ ಜಲಾಶಯದಲ್ಲಿ 8.72 ಟಿಎಂಸಿ ನೀರು ಸಂಗ್ರಹವಿದ್ದು, ಮೈಸೂರು, ಬೆಂಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಪೂರೈಸುವುದರ ಜೊತೆಗೆ ರೈತರ ಜೀವನಾಡಿಯಾಗಿರುವ ಕಬಿನಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಲು ಜಲಾನಯನ ಪ್ರದೇಶದ ಮಳೆ ಹೆಚ್ಚಿನ ಕೊಡುಗೆ ನೀಡುತ್ತಿದೆ.