ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿ, ರಾಯಚೂರು, ಬಳ್ಳಾರಿ, ಬೀದರ್‌, ಕೊಪ್ಪಳ ಸಹಿತ 7 ಜಿಲ್ಲೆಗಳಿಗೆ ಸಿಎಂ ಬಂಪರ್‌ ಯೋಜನೆಗಳ ಘೋಷಣೆ-kalburgi news kalyana karnataka festival cm siddaramaiah announce programs for ballari bidar yadgir raichur kalburgi kub ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿ, ರಾಯಚೂರು, ಬಳ್ಳಾರಿ, ಬೀದರ್‌, ಕೊಪ್ಪಳ ಸಹಿತ 7 ಜಿಲ್ಲೆಗಳಿಗೆ ಸಿಎಂ ಬಂಪರ್‌ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿ, ರಾಯಚೂರು, ಬಳ್ಳಾರಿ, ಬೀದರ್‌, ಕೊಪ್ಪಳ ಸಹಿತ 7 ಜಿಲ್ಲೆಗಳಿಗೆ ಸಿಎಂ ಬಂಪರ್‌ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ದಿನ ದಶಮಾನೋತ್ಸವ ಅಂಗವಾಗಿ ಆಯೋಜಿಸಿರುವ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಭಾರೀ ಕಾರ್ಯಕ್ರಮಗಳನ್ನು ಏಳು ಜಿಲ್ಲೆಗಳಿಗೆ ಘೋಷಿಸಿದ್ದಾರೆ. ಕಾರ್ಯಕ್ರಮಗಳ ವಿವರ ಇಲ್ಲಿದೆ.

ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಕಲಬುರಗಿ ಡಿಸಿ ಫೌಜಿಯಾ ತರನ್ನುಮ್‌, ಪೊಲೀಸ್‌ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್ಪಿ ಅಡ್ಡೂರು ಶ್ರೀನಿವಾಸುಲು ಹಾಜರಿದ್ದರು.
ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಕಲಬುರಗಿ ಡಿಸಿ ಫೌಜಿಯಾ ತರನ್ನುಮ್‌, ಪೊಲೀಸ್‌ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್ಪಿ ಅಡ್ಡೂರು ಶ್ರೀನಿವಾಸುಲು ಹಾಜರಿದ್ದರು.

ಕಲಬುರಗಿ: ಕಲಬುರಗಿಯಲ್ಲಿ ಮಂಗಳವಾರ ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮ.ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವ 371 (ಜೆ) ವಿಧಿ ಜಾರಿಯ ದಶಮಾನೋತ್ಸವದ ಮಹತ್ವದ ಕ್ಷಣ. 1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದರೂ ಹೈದರಾಬಾದ್ ನಿಜಾಮರ ಆಳ್ವಿಕೆಯಲ್ಲಿದ್ದ ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸ್ವಾತಂತ್ರ್ಯದ ಬೆಳಕು ಬಂದಿದ್ದು ಒಂದು ವರ್ಷದ ನಂತರ. ಈ ದಿನವನ್ನು ಮೊದಲಿನಿಂದಲೂ ಕಲ್ಯಾಣ ಕರ್ನಾಟಕ ದಿನವಾಗಿ ಆಚರಿಸುತ್ತಾ ಬರಲಾಗುತ್ತಿದೆ. ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಹಾಜರಿದ್ದು ಸಚಿವ ಸಂಪುಟದ ಸಹದ್ಯೋಗಿಗಳು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಪ್ರಮುಖರ ಸಮ್ಮುಖದಲ್ಲಿ ಧ್ವಜಾರೋಹಣವನ್ನು ಮಾಡಿದರು. ಈ ವೇಳೆ ಸಿದ್ದರಾಮಯ್ಯ ಅವರು ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳ ಪ್ರಗತಿಗೆ ಹಲವಾರು ಘೋಷಣೆಗಳನ್ನು ಮಾಡಿದ್ದಾರೆ. ಹಿಂದಿನ ಯೋಜನೆಗಳನ್ನು ಪ್ರಸ್ತಾಪಿಸಿದ್ದಾರೆ.

ರಾಜ್ಯ ಸರ್ಕಾರದಿಂದಲೆ ಸುಮಾರು 1,685 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಯೋಚಿಸಲಾಗುತ್ತಿದೆ. ಹಿಂದುಳಿದ ಜಿಲ್ಲೆಗಳಲ್ಲಿ ಹೂಡಿಕೆಯನ್ನು ಆಕರ್ಷಿಸುವುದಲ್ಲದೆ ಇಲ್ಲಿನ ನಗರ ವಾಸಿಗಳ ಜೀವನ ಗುಣಮಟ್ಟ ಹೆಚ್ಚಿಸುವ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸಲು ಇದು ಸಹಕಾರಿಯಾಗಲಿದೆ ಎಂದೂ ಘೋಷಣೆ ಮಾಡಿದ್ದಾರೆ.

ಕೆಕೆಆರ್‌ಡಿಬಿಗೆ ಅನುದಾನ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪ್ರಸಕ್ತ 2024-25ನೇ ಸಾಲಿನ ಆಯವ್ಯಯದಲ್ಲಿ ದಾಖಲೆ ಪ್ರಮಾಣದಲ್ಲಿ 5,000 ಕೋಟಿ ರೂ. ಘೋಷಿಸಿ ಅನುದಾನ ಹಂಚಿಕೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ಮಂಡಳಿಯು ಈ ವರ್ಷ ಸಹ 1250 ಕೋಟಿ ರೂ ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಟ್ಟು “ಅಕ್ಷರ ಆವಿಷ್ಕಾರ” ಕಾರ್ಯಕ್ರಮಕ್ಕೆ ಶಕ್ತಿ ತಂದಿದೆ. ಕೆ.ಕೆ.ಆರ್.ಡಿ.ಬಿ.ಯು 2023-24 ಮತ್ತು 2024-25 ಎರಡೂ ವರ್ಷಗಳನ್ನು ಶೈಕ್ಷಣಿಕ ವರ್ಷಗಳೆಂದು ಘೋಷಣೆ ಮಾಡಿದೆ. ಈ ವರ್ಷ 1008 ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಎಂಬ ಹೊಸ ಮಾದರಿಯನ್ನು ಪ್ರಾರಂಭಿಸಲಾಗಿದೆ. ನಮ್ಮ ನಿರೀಕ್ಷೆ ಮೀರಿ 36,445 ಮಕ್ಕಳು ಪ್ರವೇಶ ಪಡೆದು ದಾಖಲೆ ಬರೆದಿದ್ದಾರೆ. ಇದಕ್ಕಾಗಿ ಹೊಸದಾಗಿ 1353 ಅತಿಥಿ ಶಿಕ್ಷಕರನ್ನು ಹಾಗೂ 892 ಸಹಾಯಕಿಯರನ್ನು ನೇಮಕ ಮಾಡಲಾಗಿದೆ.

ಈ ಭಾಗದ 872 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್ ಭಾಷಾ ಕಲಿಕೆಯನ್ನೂ ಪ್ರಾರಂಭಿಸಿದ್ದೇವೆ. 306 ಪ್ರೌಢಶಾಲೆಗಳಲ್ಲಿ ಈ ವರ್ಷ 9 ನೇ ತರಗತಿಯ ಮಕ್ಕಳ ಕೌಶಲ್ಯ ವೃದ್ಧಿಗಾಗಿ ಕಂಪ್ಯೂಟರ್ ಕಲಿಕೆಯನ್ನು ಪ್ರಾರಂಭಿಸಿದ್ದೇವೆ. ಶಿಕ್ಷಣದ ಗುಣಮಟ್ಟ ಸುಧಾರಿಸಿ ಇಲ್ಲಿನ ಮಕ್ಕಳೂ ಕೂಡ ತಾವು ಇತರರಂತೆಯೇ ತಲೆ ಎತ್ತಿ ನಿಲ್ಲಲು ಅನುಕೂಲವಾಗುವಂತೆ ಮಾಡಲು ಈ ವರ್ಷ “ಕಲಿಕಾಸರೆ” ಎಂಬ ಹೆಸರಿನಲ್ಲಿ ವಿಶೇಷ ಅಭ್ಯಾಸ ಪುಸ್ತಕವನ್ನು ಒದಗಿಸಲಾಗುತ್ತಿದೆ.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ಮಂಡಳಿಯು ಈ ವರ್ಷ ಸಹ 1250 ಕೋಟಿ ರೂ ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಟ್ಟು “ಅಕ್ಷರ ಆವಿಷ್ಕಾರ” ಕಾರ್ಯಕ್ರಮವು ಇನ್ನಷ್ಟು ಶಕ್ತಿ ತಂದಿದೆ. ಕೆ.ಕೆ.ಆರ್.ಡಿ.ಬಿ.ಯು 2023-24 ಮತ್ತು 2024-25 ಎರಡೂ ವರ್ಷಗಳನ್ನು ಶೈಕ್ಷಣಿಕ ವರ್ಷಗಳೆಂದು ಘೋಷಣೆ ಮಾಡಿದೆ. ಈ ವರ್ಷ 1008 ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಎಂಬ ಹೊಸ ಮಾದರಿಯನ್ನು ಪ್ರಾರಂಭಿಸಲಾಗಿದೆ. ನಮ್ಮ ನಿರೀಕ್ಷೆ ಮೀರಿ 36,445 ಮಕ್ಕಳು ಪ್ರವೇಶ ಪಡೆದು ದಾಖಲೆ ಬರೆದಿದ್ದಾರೆ. ಇದಕ್ಕಾಗಿ ಹೊಸದಾಗಿ 1353 ಅತಿಥಿ ಶಿಕ್ಷಕರನ್ನು ಹಾಗೂ 892 ಸಹಾಯಕಿಯರನ್ನು ನೇಮಕ ಮಾಡಲಾಗಿದೆ. ಈ ಭಾಗದ 872 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್ ಭಾಷಾ ಕಲಿಕೆಯನ್ನೂ ಪ್ರಾರಂಭಿಸಿದ್ದೇವೆ. 306 ಪ್ರೌಢಶಾಲೆಗಳಲ್ಲಿ ಈ ವರ್ಷ 9 ನೇ ತರಗತಿಯ ಮಕ್ಕಳ ಕೌಶಲ್ಯ ವೃದ್ಧಿಗಾಗಿ ಕಂಪ್ಯೂಟರ್ ಕಲಿಕೆಯನ್ನು ಪ್ರಾರಂಭಿಸಿದ್ದೇವೆ. ಶಿಕ್ಷಣದ ಗುಣಮಟ್ಟ ಸುಧಾರಿಸಿ ಇಲ್ಲಿನ ಮಕ್ಕಳೂ ಕೂಡ ತಾವು ಇತರರಂತೆಯೇ ತಲೆ ಎತ್ತಿ ನಿಲ್ಲಲು ಅನುಕೂಲವಾಗುವಂತೆ ಮಾಡಲು ಈ ವರ್ಷ “ಕಲಿಕಾಸರೆ” ಎಂಬ ಹೆಸರಿನಲ್ಲಿ ವಿಶೇಷ ಅಭ್ಯಾಸ ಪುಸ್ತಕವನ್ನು ಒದಗಿಸಲಾಗುತ್ತಿದೆ.

20 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿ ಸರ್ಕಾರಿ (ಪುರುಷರ) ಐ.ಟಿ.ಐ. ತರಬೇತಿ ಸಂಸ್ಥೆಯನ್ನು ಪುನಶ್ಚೇತನಗೊಳಿಸಲಾಗುತ್ತಿದೆ.ಉತ್ತಮ ಶಿಕ್ಷಣ ನೀಡುವ ಜೊತೆಗೆ ಉದ್ಯೋಗಾವಾಕಾಶಗಳನ್ನು ಸೃಜಿಸುವ ಉದ್ದೇಶದಿಂದ ಉದ್ಯೋಗ ಆವಿಷ್ಕಾರ ಯೋಜನೆಯನ್ನು ರೂಪಿಸಿದ್ದೇವೆ. ಇದರ ಅಡಿಯಲ್ಲಿ ಸುಮಾರು 10 ಕೋಟಿ ರೂ ವೆಚ್ಚದಲ್ಲಿ ಸುಮಾರು 25,000 ಮಕ್ಕಳಿಗೆ ಕಲಿಕೆ ಜೊತೆ ಕೌಶಲ್ಯ, ಸಿಡಾಕ್ ಹಾಗೂ “ಇಂಡಸ್ಟ್ರಿ ಲಿಂಕೇಜ್ ಸೆಲ್” ಮುಖಾಂತರ ತರಬೇತಿ ನೀಡಲಾಗುತ್ತಿದೆ.

20 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿ ಸರ್ಕಾರಿ (ಪುರುಷರ) ಐ.ಟಿ.ಐ. ತರಬೇತಿ ಸಂಸ್ಥೆಯನ್ನು ಪುನಶ್ಚೇತನಗೊಳಿಸಲಾಗುತ್ತಿದೆ.

ಖರ್ಗೆ ಕನಸಿನ ರಿಜನಲ್ ಹೆಲ್ತ್ ಹಬ್

ಮಲ್ಲಿಕಾರ್ಜುನ ಖರ್ಗೆ ಅವರ ಆಶಯದಂತೆ ಕಲಬುರಗಿಯನ್ನು ರಿಜನಲ್ ಹೆಲ್ತ್ ಹಬ್ ಮಾಡುವತ್ತ ಹೆಜ್ಜೆ ಇಟ್ಟಿದ್ದೇವೆ. ದೂರದ ಬೆಂಗಳೂರು, ಮುಂಬೈ, ಹೈದರಾಬಾದಿಗೆ ಹೋಗುವುದನ್ನು ತಪ್ಪಿಸಿ ಇಲ್ಲಿಯೇ ಗುಣಮಟ್ಟದ ಚಿಕಿತ್ಸೆ ನೀಡುವುದು ಇದರ ಮೂಲ ಉದ್ದೇಶವಾಗಿದೆ.ವಿಧ ಹಂತದ ಆಸ್ಪತ್ರೆಗಳ ಕಾಮಗಾರಿಗಳನ್ನು ಆರೋಗ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ಸಮರ್ಪಕ ಅನುಷ್ಠಾನಕ್ಕಾಗಿ ಪ್ರಸಕ್ತ ಸಾಲಿನಲ್ಲಿ 220 ಕೋಟಿ ರೂ. ಗಳ ವಿಶೇಷ ಅನುದಾನವನ್ನು ಮಂಡಳಿ ಒದಗಿಸುತ್ತಿದೆ. ಕಲ್ಯಾಣ ಕರ್ನಾಟಕದ ಆಸ್ಪತ್ರೆಗಳಿಗೆ 50 ಹೊಸ ಆಂಬ್ಯುಲೆನ್ಸ್‍ಗಳನ್ನು ಒದಗಿಸಲಾಗುತ್ತಿದೆ.

ಕೆ.ಕೆ.ಆರ್.ಡಿ.ಬಿ. ಮಂಡಳಿಯ ಸಂಪೂರ್ಣ ಆರ್ಥಿಕ ನೆರವಿನೊಂದಿಗೆ ಕಲಬುರಗಿಯಲ್ಲಿ ನಿರ್ಮಾಣವಾಗುತ್ತಿರುವ 371 ಹಾಸಿಗೆಯ ಶ್ರೀ ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಆಸ್ಪತ್ರೆಯ ಶಾಖಾ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು 262 ಕೋಟಿ ರೂ. ಪರಿಷ್ಕøತ ಅಂದಾಜಿಗೆ ಈಗಾಗಲೆ ಅನುಮೋದನೆ ನೀಡಿದ್ದು, ಅಂತಿಮ ಘಟ್ಟದ ಕೆಲಸ ಭರದಿಂದ ಸಾಗಿದೆ. ಶೀಘ್ರವೇ ಇದನ್ನು ಈ ಪ್ರದೇಶಕ್ಕೆ ಲೋಕಾರ್ಪಣೆ ಮಾಡಲಾಗುವುದು.

ಕಲಬುರಗಿ ನಗರದಲ್ಲಿ ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿಯೆ ಜಿಮ್ಸ್ ವೈದ್ಯಕೀಯ ಕಾಲೇಜು, ಜಯದೇವ ಆಸ್ಪತ್ರೆ, ಇತ್ತೀಚೆಗೆ ಟ್ರಾಮಾ ಸೆಂಟರ್‍ಗಳನ್ನು ಸ್ಥಾಪಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಲಾಗುತ್ತಿದೆ. ಇದಲ್ಲದೆ ಪ್ರಗತಿಯಲ್ಲಿರುವ 163 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಹ ಶೀಘ್ರ ಸಾರ್ವಜನಿಕರ ಬಳಕೆಗೆ ಬರಲಿದೆ. 30 ಕೋಟಿ ರೂ. ವೆಚ್ಚದಲ್ಲಿ 50 ಹಾಸಿಗೆ ಸಾಮಥ್ರ್ಯದ ತೀವ್ರ ನಿಗಾ ಘಟಕ ಮತ್ತು 15.6 ಕೋಟಿ ರೂ. ವೆಚ್ಚದಲ್ಲಿ 30 ಹಾಸಿಗೆ ಸಾಮಥ್ರ್ಯದ ಸುಟ್ಟ ಗಾಯಗಳ ಘಟಕಕ್ಕೆ ಇತ್ತೀಚೆಗೆ ಅಡಿಗಲ್ಲು ಹಾಕಲಾಗಿದೆ.

ಹೊಸ ಬಸ್‌ ಬಂದವು

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಸಕ್ತ ಸಾಲಿನಲ್ಲಿ ಈ ಪ್ರದೇಶದ ಜನರ ಅನುಕೂಲಕ್ಕಾಗಿ ಹೊಸದಾಗಿ 222 ಬಸ್ಸುಗಳನ್ನು ಖರೀದಿಸಲು ಮಂಡಳಿಯು ಕೆ.ಕೆ.ಆರ್.ಟಿ.ಸಿ. ಸಂಸ್ಥೆಗೆ 90 ಕೋಟಿ ರೂ. ಅನುದಾನ ಒದಗಿಸಿದೆ 2023-24 ರಿಂದ ಇಲ್ಲಿಯವರೆಗೆ ಒಟ್ಟಾರೆ 964 ಬಸ್ಸುಗಳನ್ನು ಖರೀದಿಸಿ ಜನರ ಸುಗಮ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಲಾಗಿದೆ.

ಯಾವ ಜಿಲ್ಲೆ ಏನೇನು

ರಾಯಚೂರಿನಲ್ಲಿ ಏಮ್ಸ್ ಸಂಸ್ಥೆಯನ್ನು ಸ್ಥಾಪನೆಗೆ ಒತ್ತು

ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಾನವ ಹಾಲಿನ ಹೊಸ ಘಟಕಗಳನ್ನು ಸ್ಥಾಪನೆ

ಶಹಾಪುರದಲ್ಲಿ 292 ಕೋಟಿ ರೂ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆ

ಬಳ್ಳಾರಿಯಲ್ಲಿ ಜೀನ್ಸ್ ಉದ್ದಿಮೆಗಳನ್ನು ಸಂಘಟಿಸಿ, ವಿಶ್ವದರ್ಜೆಗೆ ಉನ್ನತೀಕರಿಸಲು ಮೂಲ ಸೌಕರ್ಯ

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.

ಬೀದರ್ ಜಿಲ್ಲೆಯ ಹೊನ್ನಿಕೇರಿ ಮೀಸಲು ಅರಣ್ಯ ಮತ್ತು ಇತರೆ ಜೀವವೈವಿಧ್ಯ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಿಕ್ಕಲಪರ್ವಿ ಹತ್ತಿರ ತುಂಗಭದ್ರಾ ನದಿಗೆ ಅಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ 397 ಕೋಟಿ ರೂ. ವೆಚ್ಚ

ರಾಯಚೂರಿನಲ್ಲಿ ನೂತನ ಜವಳಿ ಪಾರ್ಕ್‌ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭ.

140 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಯ ಜಿಲ್ಲೆಯ ಸೇಡಂ ತಾಲೂಕಿನ ಯಡ್ಡಳ್ಳಿ-ಕಾಚೂರು ಏತ ನೀರಾವರಿ ಯೋಜನೆ

ಬಸವ ಕಲ್ಯಾಣದ ಅನುಭವ ಮಂಟಪ ಮತ್ತಷ್ಟು ಅಭಿವೃದ್ದಿಗೆ ಹೆಚ್ಚಿನ ಅನುದಾನ

ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಬಳ್ಳಾರಿ ಸೇರಿ ರಾಜ್ಯದ ಐದು ಕಡೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಒಟ್ಟು 50 ಕೋಟಿ ರೂ. ವೆಚ್ಚದಲ್ಲಿ ಹಾಗೂ ರಾಯಚೂರಿನಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ಶೀತಲಗೃಹ ಸ್ಥಾಪನೆ

ಕೇಂದ್ರ ಸರ್ಕಾರದ “ಪ್ರಸಾದ” ಯೋಜನೆಯಡಿ ಕಲಬುರಗಿ ಜಿಲ್ಲೆಯ ಸುಪ್ರಸಿದ್ದ ದೇವಲಗಾಣಗಾಪೂರ ಕ್ಷೇತ್ರ ಅಭಿವೃದ್ದಿ

ರಾಯಚೂರಿನಲ್ಲಿ ಸುಸಜ್ಜಿತ ಒಣಮೆಣಸಿನಕಾಯಿ ಮಾರುಕಟ್ಟೆಯನ್ನು ಅಂದಾಜು 25 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ

ವಚನ ಸಂಗ್ರಹಾಲಯ/ವಚನ ಮಂಟಪವನ್ನು ಕಲಬುರಗಿಯಲ್ಲಿ ಸ್ಥಾಪಿಸಲಾಗುತ್ತಿದ್ದು, ಜಮೀನು ಗುರುತಿಸಲಾಗಿದೆ. ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಿಸಲಾಗುವುದು.

ಕಲಬುರಗಿಯ ಕೆ.ಜಿ.ಟಿ.ಟಿ.ಐ.ನಲ್ಲಿ ಸಿ.ಎನ್.ಸಿ. (Computer numerical control) ಯಂತ್ರವನ್ನು ಕೇಂದ್ರೀಕರಿಸುವ ಮೊದಲ ಶ್ರೇಷ್ಠತಾ ಕೇಂದ್ರವನ್ನು 16 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ.

ಬಳ್ಳಾರಿ ಮಾರುಕಟ್ಟೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಗಳಾಗಿ ಪರಿವರ್ತನೆ.

ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ವ್ಯಾಪ್ತಿಯ 18 ಹೊಸ ತಾಲೂಕುಗಳಲ್ಲಿ ಕಂದಾಯ ಇಲಾಖೆ ಮತ್ತು ಮಂಡಳಿಯ ಸಹಭಾಗಿತ್ವದಲ್ಲಿ “ತಾಲ್ಲೂಕು ಆಡಳಿತ ಭವನ”ಗಳನ್ನು [ಮಿನಿ ವಿಧಾನ ಸೌಧ] ನಿರ್ಮಾಣ ಮಾಡಲು 130 ಕೋಟಿ ರೂ. ವೆಚ್ಚ

ಗ್ಯಾರಂಟಿ ಲಾಭ ಎಷ್ಟು

“ಶಕ್ತಿ” ಯೋಜನೆಯಡಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಆಗಸ್ಟ್-2024ರ ಅಂತ್ಯಕ್ಕೆ ದಿನನಿತ್ಯ 17.11 ಲಕ್ಷದಂತೆ 41.45 ಕೋಟಿ ಟ್ರಿಪ್‍ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದಾರೆ. ಇದರ ವೆಚ್ಚ 1,387 ಕೋಟಿ ರೂ. ಗಳನ್ನು ನಮ್ಮ ಸರ್ಕಾರ ಭರಿಸುತ್ತಿದೆ.

“ಅನ್ನ ಭಾಗ್ಯ” ಯೋಜನೆಯಡಿ ಪ್ರದೇಶದ 7 ಜಿಲ್ಲೆಗಳಲ್ಲಿ ಕಳೆದ ಜೂನ್-2024 ಮಾಹೆಗೆ ಒಟ್ಟು 22.59 ಲಕ್ಷ ಪಡಿತರ ಚೀಟಿಯ ಕುಟುಂಬದ ಸದಸ್ಯರಿಗೆ 1,551 ಕೋಟಿ ರೂ. ಹಣ ಪಾವತಿಸಿದೆ.

“ಗೃಹ ಜ್ಯೋತಿ” ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗದ ಜೆಸ್ಕಾಂ ವ್ಯಾಪ್ತಿಯಲ್ಲಿ 21.88 ಲಕ್ಷ ಗ್ರಾಹಕರು ನೋಂದಣಿ ಮಾಡಿಕೊಂಡು ಯೋಜನೆಯ ಲಾಭ ಪಡೆದಿದ್ದಾರೆ. ಇದಕ್ಕಾಗಿ ಸರ್ಕಾರ 1,104 ಕೋಟಿ ರೂ. ಜೆಸ್ಕಾಂಗೆ ಸಬ್ಸಿಡಿ ಪಾವತಿಸಿದೆ.

ಮಾಸಿಕ 2,000 ರೂ. ಒದಗಿಸುವ “ಗೃಹ ಲಕ್ಷ್ಮಿ” ಯೋಜನೆಯಡಿ ಕಲಬುರಗಿ ವಿಭಾಗದ 7 ಜಿಲ್ಲೆಗಳಲ್ಲಿ ಇದುವರೆಗೆ 24.53 ಲಕ್ಷ ಮಹಿಳೆಯರಿಗೆ ತಲಾ 2,000 ರೂ. ಗಳಂತೆ 5000 ಕೋಟಿ ರೂ. ಗಳನ್ನು ಡಿ.ಬಿ.ಟಿ. ಮೂಲಕ ಪಾವತಿಸಿದೆ.

ನಿರುದ್ಯೋಗಿಗಳಿಗೆ ಕ್ರಮವಾಗಿ ಮಾಸಿಕ 1,500 ಮತ್ತು 3,000 ಭತ್ಯೆ ನೀಡುವ “ಯುವ ನಿಧಿ” ಯೋಜನೆಯಡಿ ಇದೂವರೆಗೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 49,691 ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ಇದರಲ್ಲಿ ಅರ್ಹ 22,272 ನಿರುದ್ಯೋಗಿಗಳಿಗೆ 28.39 ಕೋಟಿ ರೂ.ಗಳನ್ನು ಡಿ.ಬಿ.ಟಿ. ಮೂಲಕ ಹಣ ಪಾವತಿಸಲಾಗಿದೆ.

mysore-dasara_Entry_Point