ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ; BNS 194 ಅಡಿ ಪ್ರಕರಣ ದಾಖಲು, ಇಷ್ಟಕ್ಕೂ ಈ ಸೆಕ್ಷನ್ ಹೇಳುವುದೇನು?
ಕನ್ನಡ ಸುದ್ದಿ  /  ಕರ್ನಾಟಕ  /  ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ; Bns 194 ಅಡಿ ಪ್ರಕರಣ ದಾಖಲು, ಇಷ್ಟಕ್ಕೂ ಈ ಸೆಕ್ಷನ್ ಹೇಳುವುದೇನು?

ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ; BNS 194 ಅಡಿ ಪ್ರಕರಣ ದಾಖಲು, ಇಷ್ಟಕ್ಕೂ ಈ ಸೆಕ್ಷನ್ ಹೇಳುವುದೇನು?

Director Guruprasad: ಕನ್ನಡ ನಿರ್ದೇಶಕ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಭಾರತೀಯ ನ್ಯಾಯ ಸಹಿತ 194 ಸೆಕ್ಷನ್​ ಅಡಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಆದರೆ ಈ ಸೆಕ್ಷನ್ ಹೇಳುವುದೇನು? ಇಲ್ಲಿದೆ ವಿವರ.

ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ; BNS 194 ಅಡಿ ಪ್ರಕರಣ ದಾಖಲು
ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ; BNS 194 ಅಡಿ ಪ್ರಕರಣ ದಾಖಲು

ಬೆಂಗಳೂರು: ಸಾಲಗಾರರ ಕಾಟದಿಂದ ಮಠ ಸಿನಿಮಾದ ನಿರ್ದೇಶಕ ಗುರುಪ್ರಸಾದ್ (Director Guruprasad) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಸೂಸೈಡ್ ಮಾಡಿಕೊಂಡ ಸ್ಥಿತಿಯಲ್ಲಿ 52 ವರ್ಷದ ಗುರುಪ್ರಸಾದ್ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಬಿಎನ್​ಎಸ್​ 194 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಸಿಕೆ ಬಾಬ ಹೇಳಿಕೆ ನೀಡಿದ್ದು, ಹಣಕಾಸಿನ ಸಮಸ್ಯೆಯಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು ಎಂದು ಗೊತ್ತಾಗಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ಬಿಎನ್​ಎಸ್ 194 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಸಾವಿಗೆ ಅಸಲಿ ಕಾರಣ ಏನು ಎಂಬುದರ ಪತ್ತೆ ನಮ್ಮ ತಂಡಗಳು ಸಮಗ್ರ ತನಿಖೆ ನಡೆಸುತ್ತಿವೆ. ಕುಟುಂಬಸ್ಥರ ಜೊತೆ ತನಿಖಾಧಿಕಾರಿ ಮಾಹಿತಿ ಪಡೆಯಲಿದ್ದಾರೆ. ಪ್ರಸ್ತುತ ಅವರ ಕುಟುಂಬ ಸದಸ್ಯರು ನೋವಲ್ಲಿದ್ದಾರೆ. ಈ ವೇಳೆ ಅವರನ್ನು ಪ್ರಶ್ನಿಸುವುದು ಸರಿಯಲ್ಲ. ಐದಾರು ದಿನಗಳ ಹಿಂದೆಯೇ ಈ ಅಪಾರ್ಟ್​ಮೆಂಟ್​ಗೆ ಬಂದಿದ್ದರು. ಆಗಾಗ್ಗೆ ಬಂದು ಹೋಗುತ್ತಿದ್ದರು ಎಂದು ಗೊತ್ತಾಗಿದೆ. ಸದ್ಯ ಹೆಚ್ಚಿನ ತನಿಖೆ ನಯುತ್ತಿದೆ. ತನಿಖೆ ನಂತರ ಇನ್ನೂ ಹೆಚ್ಚಿನ ಮಾಹಿತಿ ಕಲೆ ಹಾಕುತ್ತೇವೆ ಎಂದು ಸಿಕೆ ಬಾಬ ಹೇಳಿದ್ದಾರೆ.

ಬಿಎನ್​ಎಸ್ 194 ಎಂದರೇನು?

ಭಾರತೀಯ ನ್ಯಾಯ ಸಹಿತ 194 ಸೆಕ್ಷನ್​ ಅಡಿ (What Is BNS Section 194) ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಆದರೆ ಈ ಸೆಕ್ಷನ್ ಹೇಳುವುದೇನು? ಇದು 2023ರ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 194 ಗಲಾಟೆ ಅಪರಾಧವನ್ನು ವ್ಯಾಖ್ಯಾನಿಸುತ್ತದೆ. ಇಬ್ಬರು ಅಥವಾ ಅದಕ್ಕಿಂತ ಹೆಚ್ಚು ಜನರು ಸಾರ್ವಜನಿಕ ಸ್ಥಳದಲ್ಲಿ ಜಗಳವಾಡಿದರೆ ಮತ್ತು ಶಾಂತಿ ಕದಡಿದರೆ ಈ ಸೆಕ್ಷನ್​ ಅಡಿಯಲ್ಲಿ ಕೇಸ್​ ಫೈಲ್ ಮಾಡಲಾಗುತ್ತದೆ. ಈ ಪ್ರಕರಣದಲ್ಲಿ ಒಂದು ತಿಂಗಳು ಜೈಲು ಶಿಕ್ಷೆ, 1000 ರೂಪಾಯಿ ದಂಡ ವಿಧಿಸಲಾಗುತ್ತದೆ. ಕೆಲವೊಮ್ಮೆ ಎರಡು ಶಿಕ್ಷೆ ನೀಡಲಾಗುತ್ತದೆ. ಉದಾಹರಣೆ: ಬೀದಿಯಲ್ಲಿ, ಮಾರುಕಟ್ಟೆ ಅಥವಾ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಜಗಳ ಮಾಡುವುದು. ಆದರೆ ಗುರು ಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಯಾವ ಕಾರಣಕ್ಕೆ ಈ ಸೆಕ್ಷನ್​ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

10 ದಿನಗಳ ಹಿಂದೆಯೇ ಆತ್ಮಹತ್ಯೆಯ ಶಂಕೆ

ಗುರುಪ್ರಸಾದ್‌ ಅವರು ಇತ್ತೀಚೆಗೆ ಎರಡನೇ ಮದುವೆ ಆಗಿದ್ದರು. ಅವರು ನಿನ್ನೆಯಷ್ಟೆ (ನವೆಂಬರ್ 2) ಜನ್ಮದಿನವಿತ್ತು. ಹಲವು ರಿಯಾಲಿಟಿ ಶೋಗಳಲ್ಲಿ ಜಡ್ಜ್‌ ಆಗಿಯೂ ಕೆಲಸ ಮಾಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಡೆತ್‌ನೋಟ್‌ ಕೂಡ ಸಿಕ್ಕಿಲ್ಲ. 5 ಕನ್ನಡ ಚಿತ್ರಗಳನ್ನ ನಿರ್ದೇಶಿಸಿರುವ ಗುರುಪ್ರಸಾದ್ ಅವರು ಸಾಕಷ್ಟು ಜನರಿಗೆ ಪರಿಚಿತರು. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಅವರ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನೆಲದ ಮೇಲೆ ರಕ್ತ ಚೆಲ್ಲಿದೆ. ತಲೆಗೆ ಒಂದು ಬಟ್ಟೆಯನ್ನು ಕಟ್ಟಿಕೊಂಡಿದ್ದಾರೆ. ಇದೆಲ್ಲವನ್ನೂ ಗಮನಿಸಿದರೆ ಅವರು ಹತ್ತು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ಇದೆ.

Whats_app_banner