ಕನ್ನಡ ಸುದ್ದಿ  /  Karnataka  /  Kannada Pustaka Pradhikara: Restructuring Of Kannada Book Policy; Kannada Pustaka Pradhikara Invited Suggestions And Comments From The Public

Kannada Pustaka Pradhikara: ಕನ್ನಡ ಪುಸ್ತಕ ನೀತಿ ಪುನರ್ ರಚನೆ; ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯ ಆಹ್ವಾನ

Kannada Pustaka Pradhikara: ಪುಸ್ತಕೋದ್ಯಮದ ಎಲ್ಲ ಸಾಧ್ಯತೆ ಮತ್ತು ಸವಾಲುಗಳನ್ನು ಹೊಸ ದೃಷ್ಠಿಕೋನದಿಂದ ನೋಡುವ ಅಗತ್ಯವನ್ನು ಕನ್ನಡ ಪುಸ್ತಕ ಪ್ರಾಧಿಕಾರ ಗಮನಿಸಿದೆ. ಹೀಗಾಗಿ ಅನುಷ್ಠಾನಗೊಳಿಸಬಹುದಾದ ಸಲಹೆ, ಅಭಿಪ್ರಾಯಗಳನ್ನು ಸಾರ್ವಜನಿಕರಿಂದ ಪ್ರಾಧಿಕಾರ ಆಹ್ವಾನಿಸಿದೆ.

ಕನ್ನಡ ಪುಸ್ತಕ ಪ್ರಾಧಿಕಾರ (ಸಾಂಕೇತಿಕ ಚಿತ್ರ)
ಕನ್ನಡ ಪುಸ್ತಕ ಪ್ರಾಧಿಕಾರ (ಸಾಂಕೇತಿಕ ಚಿತ್ರ) (KPP)

ಬೆಂಗಳೂರು: ಕನ್ನಡ ಪುಸ್ತಕ ಲೋಕವು ಆಧುನಿಕ ಮಾಧ್ಯಮಗಳ ನೂತನ ಅವಿಷ್ಕಾರಗಳ ಫಲವಾಗಿ ವಿಸ್ತಾರಗೊಳ್ಳುತ್ತಿದೆ. ಹೀಗಾಗಿ ಪುಸ್ತಕೋದ್ಯಮದ ಎಲ್ಲ ಸಾಧ್ಯತೆ ಮತ್ತು ಸವಾಲುಗಳನ್ನು ಹೊಸ ದೃಷ್ಠಿಕೋನದಿಂದ ನೋಡುವ ಅಗತ್ಯ ಇದೆ. ಆದ್ದರಿಂದ ಕನ್ನಡ ಪುಸ್ತಕ ನೀತಿಯನ್ನು ಪುನರ್ ರಚಿಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಹೇಳಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪ್ರಾಧಿಕಾರ, ಇ-ಪುಸ್ತಕ, ಆಡಿಯೋ ಪುಸ್ತಕ ಒಳಗೊಂಡಂತೆ ಆಧುನಿಕ ಪುಸ್ತಕೋದ್ಯಮದ ಸಾಧಕ-ಬಾಧಕಗಳು ಹಾಗೂ ಕನ್ನಡ ಪುಸ್ತಕ ಲೋಕದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಈ ಪುಸ್ತಕ ನೀತಿ ರಚನೆ ಆಗಬೇಕಿದೆ. ಇದಕ್ಕಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ಹಿರಿಯ ಚಿಂತಕ, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯಯವರ ಅಧ್ಯಕ್ಷತೆಯಲ್ಲಿ ಉಪ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಅಂತಿಮ ಹಂತದ ಕರಡನ್ನು ಸಿದ್ಧಪಡಿಸುತ್ತಿದೆ ಎಂದು ಹೇಳಿದೆ.

ಕನ್ನಡ ಪುಸ್ತಕ ನೀತಿಯ ಕರಡು ಅಂತಿಮಗೊಳಿಸುವ ಮೊದಲು ನಾಡಿನ ಬರಹಗಾರರು, ಚಿಂತಕರು, ಓದುಗರು, ಪ್ರಕಾಶಕರು ಹಾಗೂ ಆಸಕ್ತ ಸಾರ್ವಜನಿಕರಿಂದ ಪುಸ್ತಕ ಲೋಕಕ್ಕೆ ಸಂಬಂಧಿಸಿ ಅನುಷ್ಠಾನ ಮಾಡಬಹುದಾದ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳನ್ನು ಪಡೆಯಲು ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯಯವರ ಅಧ್ಯಕ್ಷತೆಯ ಈ ಸಮಿತಿಯು ನಿರ್ಧರಿಸಿದೆ.

ಆದ್ದರಿಂದ, ನಾಡಿನ ಬರಹಗಾರರು, ಚಿಂತಕರು, ಓದುಗರು, ಪ್ರಕಾಶಕರು ಹಾಗೂ ಆಸಕ್ತ ಸಾರ್ವಜನಿಕರು “ಪುಸ್ತಕ ನೀತಿ”ಯಲ್ಲಿ ಅಳವಡಿಸಬೇಕಾದ ಅಂಶಗಳ ಬಗ್ಗೆ ತಮ್ಮ ಸಲಹೆ ಸೂಚನೆ ಮತ್ತು ಅಭಿಪ್ರಾಯಗಳನ್ನು 10ನೇ ಫೆಬ್ರವರಿ 2023 ರೊಳಗೆ ಅಂಚೆ ಮೂಲಕ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, 1ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ ಅಥವಾ ಪ್ರಾಧಿಕಾರದ ಇ-ಮೇಲ್ ವಿಳಾಸ kannadappradhikara@gmail.com ಮೂಲಕ ಕಳುಹಿಸಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಮನಿಸಬಹುದಾದ ಸುದ್ದಿಗಳು

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023ರ ಕೇಂದ್ರ ಮುಂಗಡಪತ್ರವನ್ನು ಫೆಬ್ರವರಿ 1 ರಂದು (ಬುಧವಾರ) ಬೆಳಗ್ಗೆ 11 ಗಂಟೆಗೆ ಮಂಡಿಸಲಿದ್ದಾರೆ. ಇದು ಏಪ್ರಿಲ್ 1 ರಿಂದ ಪ್ರಾರಂಭವಾಗುವ ಆರ್ಥಿಕ ವರ್ಷಕ್ಕೆ ಅನ್ವಯವಾಗುವ ಬಜೆಟ್‌. ನಿರ್ಮಲಾ ಸೀತಾರಾಮನ್ ಅವರು ಮಂಡಿಸುವ ಸತತ ಐದನೇ ಸಲ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಹಿಂದಿನ ಎರಡರಂತೆ, 2023-24 ರ ಕೇಂದ್ರ ಬಜೆಟ್ ಸಹ ಕಾಗದರಹಿತ ರೂಪದಲ್ಲಿ ಇರಲಿದೆ. 2024ರ ಲೋಕಸಭೆ ಚುನಾವಣೆಗೆ ಮುನ್ನ ಮೋದಿ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ವರದಿಯ ಪೂರ್ಣ ವಿವರಕ್ಕೆ ಇಲ್ಲಿ ಕ್ಲಿಕ್‌ ಮಾಡಿ

ಕೇಂದ್ರ ಸರ್ಕಾರ ಇಂದು (ಮಂಗಳವಾರ) 2022-23ರ ಆರ್ಥಿಕ ಸಮೀಕ್ಷೆ (Economic Survey 2022-23) ಯನ್ನು ಮಂಡಿಸಲಿದೆ. ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಿದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಬಜೆಟ್ ಪೂರ್ವ ದಾಖಲೆಯನ್ನು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ವರದಿಯ ಪೂರ್ಣ ವಿವರಕ್ಕೆ ಇಲ್ಲಿ ಕ್ಲಿಕ್‌ ಮಾಡಿ

IPL_Entry_Point