School College Holiday: ಮಂಡ್ಯ ಜಿಲ್ಲೆಯ ಪ್ರಾಥಮಿಕಶಾಲೆ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ 2 ದಿನಗಳ ರಜೆ
ಕನ್ನಡ ಸುದ್ದಿ  /  ಕರ್ನಾಟಕ  /  School College Holiday: ಮಂಡ್ಯ ಜಿಲ್ಲೆಯ ಪ್ರಾಥಮಿಕಶಾಲೆ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ 2 ದಿನಗಳ ರಜೆ

School College Holiday: ಮಂಡ್ಯ ಜಿಲ್ಲೆಯ ಪ್ರಾಥಮಿಕಶಾಲೆ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ 2 ದಿನಗಳ ರಜೆ

ಮಂಡ್ಯ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದರಿಂದ ಶುಕ್ರವಾರ ಹಾಗೂ ಶನಿವಾರದಂದು ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಡಿಸಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಭಾನುವಾರವೂ ರಜೆ ಇರುವುದರಿಂದ ಮಕ್ಕಳಿಗೆ ಮೂರು ದಿನ ರಜೆ ಸಿಕ್ಕಂತಾಗಲಿದೆ.

ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20 ರಿಂದ 22 ರವರೆಗೆ ಮಂಡ್ಯ ನಗರದ ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ರಸ್ತೆ ಬಳಿಯ ಅಮರಾವತಿ ಹೋಟೆಲ್ ಹಾಗೂ ಸ್ಯಾಂಟೋ ಆಸ್ಪತ್ರೆ ಹಿಂಭಾಗದ ಸ್ಥಳದಲ್ಲಿ ನಡೆಯಲಿದೆ. ಸಮ್ಮೇಳನ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ನ್ಯಾಯಾಧೀಶರು ಹಾಗೂ ಗಣ ವ್ಯಕ್ತಿಗಳು ಆಗಮಿಸಲಿದ್ದು ಗಣ್ಯ ವ್ಯಕ್ತಿಗಳಿಗೆ ಮತ್ತು ನೋಂದಾಯಿತ ಪ್ರತಿನಿಧಿಗಳಿಗೆ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ವಾಸ್ತವ್ಯಕ್ಕೆ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲೆಯ ಸಮಸ್ತ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಸಮ್ಮೇಳವನ್ನು ಯಶಸ್ವಿಗೊಳಿಸಬೇಕಾಗಿದೆ. ಆದ್ದರಿಂದ ಡಿಸೆಂಬರ್ 20 ಮತ್ತು 21 ರಂದು ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿದೆ ಎಂದು ಮಂಡ್ಯ ಡಿಸಿ ಡಾ.ಕುಮಾರ ಹೇಳಿದ್ದಾರೆ.

ಕನ್ನಡದ ಐಕ್ಯತೆಯ ಧೋತಕವಾಗಿ ನಮ್ಮ ಸಾಹಿತ್ಯ-ಸಂಸ್ಕೃತಿ-ಪರಂಪರೆಯನ್ನು ಬಿಂಬಿಸುವ ಹಾಗೂ ನಾಡು-ನುಡಿಯ ಬಗೆಗಿನ ಅಭಿಮಾನವನ್ನು ಮೂಡಿಸುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಉಪಾನ್ಯಾಸಕರು ಭಾಗವಹಿಸುವ ಮೂಲಕ ಸಾಹಿತ್ಯಾಭಿರುಚಿ ಹೆಚ್ಚಿಸಿಕೊಳ್ಳವ ಮತ್ತು ಕನ್ನಡ ನಾಡು ನುಡಿ ಬಗ್ಗೆ ವಿವಿಧ ಗೋಷ್ಠಿಗಳು ಇರುವುದರಿಂದ ಜ್ಞಾನಾರ್ಜನ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಡಿಸೆಂಬರ್ 20 ಮತ್ತು 21 ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಎರಡು ದಿನಗಳ ರಜೆ ಘೋಷಿಸಿದೆ.

ಸದರಿ ರಜೆ ಅವಧಿಯನ್ನು ಸರ್ಕಾರಿ ರಜಾ ದಿನದಂದು ಸರಿದೂಗಿಸಿ ಪಾಠ-ಪ್ರವಚನ ನಡೆಸಬೇಕೆಂದು ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ ಕುಮಾರ ಅವರು ಆದೇಶ ಹೊರಡಿಸಿದ್ದಾರೆ.

ಕಳೆದ ವಾರ ಮಾಜಿ ಸಿಎಂ ಎಸ್‌ಎಂ ಕೃಷ್ಣ ಅವರು ನಿಧನರಾಗಿದ್ದರಿಂದ ಮಂಡ್ಯ ಜಿಲ್ಲೆಯ ಜತೆಗೆ ಇಡೀ ರಾಜ್ಯದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಈಗ ಮಂಡ್ಯ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ಸತತ ಮೂರು ದಿನ ರಜೆ ಸಿಕ್ಕಂತಾಗಿದೆ.

ನೋಂದಣಿಗೆ ಅವಕಾಶ

ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20 ರಿಂದ 22 ರವರೆಗೆ ಜರುಗಲಿದ್ದು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬೇರೆ ಜಿಲ್ಲೆಗಳಿಂದ ಆಗಮಿಸುವ ಸರ್ಕಾರಿ ನೌಕರರುಗಳು ಸ್ಥಳದಲ್ಲಿಯೇ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ಸ್ಥಳದಲ್ಲಿಯೇ ಸಮ್ಮೇಳನಕ್ಕೆ ಆಗಮಿಸಿರುವ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗಳ ಸಹಿಯ ಸಹಿತ ಹಾಜರಾತಿಯನ್ನು ಡಿಜಿಟಲ್ ಮೂಲಕ ಅವರ ವಾಟ್ಸ್ ಆಪ್ ಅಥವಾ ಇ-ಮೇಲ್ ಮೂಲಕ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸ್ಥಳದಲ್ಲಿ ನೋಂದಾಯಿಸಿಕೊಳ್ಳದ ಸರ್ಕಾರಿ ನೌಕರರಿಗೆ ಮ್ಯಾನ್ಯೂಯಲ್(Manual) ಮೂಲಕ ಹಾಜರಾತಿಯನ್ನು ನೀಡಲು ಅವಕಾಶವಿರುವುದಿಲ್ಲ. ಆದ್ದರಿಂದ ಡಿಸೆಂಬರ್ 20 ರಿಂದ 22 ರವರೆಗೆ ಜರುಗುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಸರ್ಕಾರಿ ನೌಕರರುಗಳು ಸ್ಥಳದಲ್ಲಿಯೇ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು ಹಾಜರಾತಿಯನ್ನು ಪಡೆಯಬಹುದು ಎಂದು ಮಂಡ್ಯ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೊಂದಣಿ ಸಮಿತಿಯ ಉಪ ವಿಭಾಗಾಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Whats_app_banner