ಕನ್ನಡ ಸುದ್ದಿ  /  Karnataka  /  Karnataka: 15,000 Graduate Primary Teachers Revised Provisional List Released

GPTSR Result Karnataka: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕದ ತಾತ್ಕಾಲಿಕ ಆಯ್ಕೆ ಪಟ್ಟಿ ಇಂದು ಪ್ರಕಟ, ನೋಡುವುದು ಹೇಗೆ?

15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ ‘1:1 ತಾತ್ಕಾಲಿಕ ಆಯ್ಕೆ ಪಟ್ಟಿ’ಯನ್ನು ಇಂದು ರಾತ್ರಿ 8 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿಸಿ ನಾಗೇಶ್‌ ತಿಳಿಸಿದ್ದಾರೆ.

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ, ಪರಿಷ್ಕೃತ ತಾತ್ಕಾಲಿಕ ಸದ್ಯದಲ್ಲಿಯೇ ಪ್ರಕಟ
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ, ಪರಿಷ್ಕೃತ ತಾತ್ಕಾಲಿಕ ಸದ್ಯದಲ್ಲಿಯೇ ಪ್ರಕಟ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ ‘1:1 ತಾತ್ಕಾಲಿಕ ಆಯ್ಕೆ ಪಟ್ಟಿ’ಯನ್ನು ಇಂದು ರಾತ್ರಿ 8 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿಸಿ ನಾಗೇಶ್‌ ತಿಳಿಸಿದ್ದಾರೆ.

ಹೈ ಕೋರ್ಟ್ ಆದೇಶ ಬೆನ್ನಲ್ಲೆ ನೇಮಕಾತಿ ಪಟ್ಟಿ ಹೊಸದಾಗಿ ಸಿದ್ಧವಾಗಿದ್ದು, 1:1 ತಾತ್ಕಾಲಿಕ ಆಯ್ಕೆ ಪಟ್ಟಿ’ಯನ್ನು ಇಂದು ರಾತ್ರಿ 8 ಗಂಟೆ ಬಳಿಕ ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ. ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿವಾಹಿತ ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಭ್ಯರ್ಥಿಗಳ ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್, ವಿವಾಹಿತ ಮಹಿಳೆಯರು ಸಲ್ಲಿಸಿರುವ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪರಿಗಣಿಸಿ ನೇಮಕಾತಿ ಪ್ರಕ್ರಿಯೆ ಮುಂದುವರೆಸುವಂತೆ ಆದೇಶದಲ್ಲಿ ತಿಳಿಸಿತ್ತು.

ಈ ಕುರಿತು ಮುಖ್ಯ ಕಾರ್ಯದರ್ಶಿಯವರು, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿ ಪರಿಷ್ಕರಿಸಲು ತೀರ್ಮಾನಿಸಲಾಗಿತ್ತು. ಮುಂದಿನ ಶೈಕ್ಷಣಿಕ ವರ್ಷದ ಆರಂಭದ ವೇಳೆಗೆ ಹೊಸ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು

ಖಾಲಿ ಇರುವ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿ ಹೊರಡಿಸಿದ್ದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಹೈಕೋರ್ಟ್‌ ರದ್ದುಪಡಿಸಿತ್ತು.

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆಪಟ್ಟಿ ರದ್ದುಪಡಿಸುವಂತೆ ಕೋರಿ 40ಕ್ಕೂ ಅಧಿಕ ಶಿಕ್ಷಕ ಹುದ್ದೆ ಆಕಾಂಕ್ಷಿ ಮಹಿಳಾ ಅಭ್ಯರ್ಥಿಗಳು ತಕರಾರು ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಹಿಂದಿನ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿತ್ತು.

ಈ ಹಿಂದೆ ಪ್ರಕಟಿಸಿದ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ವಿವಾಹಿತ ಮಹಿಳಾ ಅಭ್ಯರ್ಥಿಗಳ ಪತಿಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪರಿಗಣಿಸಿರುವ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬದಲು ತಂದೆಯ ಆದಾಯ ಮತ್ತು ಜಾತಿ ಪ್ರಮಾಣಪತ್ರವನ್ನು ಪರಿಗಣಿಸಿ ಹೊಸದಾಗಿ ಆಯ್ಕೆ ಪಟ್ಟಿ ರಚಿಸುವಂತೆ ಸರಕಾರ ಮತ್ತು ಶಿಕ್ಷಣ ಇಲಾಖೆಗೆ ಕೋರ್ಟ್‌ ನಿರ್ದೇಶನ ನೀಡಿತ್ತು.

ತಾತ್ಕಾಲಿಕ ಆಯ್ಕೆ ಪಟ್ಟಿ ನೋಡುವುದು ಹೇಗೆ?

schooleducation.kar.nic.in ವೆಬ್‌ಸೈಟ್‌ಗೆ ಹೋಗಿ ಆಯ್ಕೆ ಪಟ್ಟಿ ವೀಕ್ಷಿಸಬಹುದು.

IPL_Entry_Point