ಶಿಗ್ಗಾಂವಿಯಲ್ಲಿ ಬಂಡಾಯ ತಪ್ಪಿಸಲು ಕಾಂಗ್ರೆಸ್‌ ನಾಯಕರ ಹರಸಾಹಸ, ನಾಮಪತ್ರ ವಾಪಸ್ ಪಡೆದ ಖಾದ್ರಿ
ಕನ್ನಡ ಸುದ್ದಿ  /  ಕರ್ನಾಟಕ  /  ಶಿಗ್ಗಾಂವಿಯಲ್ಲಿ ಬಂಡಾಯ ತಪ್ಪಿಸಲು ಕಾಂಗ್ರೆಸ್‌ ನಾಯಕರ ಹರಸಾಹಸ, ನಾಮಪತ್ರ ವಾಪಸ್ ಪಡೆದ ಖಾದ್ರಿ

ಶಿಗ್ಗಾಂವಿಯಲ್ಲಿ ಬಂಡಾಯ ತಪ್ಪಿಸಲು ಕಾಂಗ್ರೆಸ್‌ ನಾಯಕರ ಹರಸಾಹಸ, ನಾಮಪತ್ರ ವಾಪಸ್ ಪಡೆದ ಖಾದ್ರಿ

ಹಾವೇರಿ ಜಿಲ್ಲೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಬಂಡಾಯ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಮಾಜಿ ಶಾಸಕ ಅಜ್ಜಂಪೀರ್‌ ಖಾದ್ರಿ ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆದುಕೊಂಡಿದ್ದಾರೆ.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿದ್ದ ಮಾಜಿ ಶಾಸಕ ಅಜ್ಜಂಪೀರ್‌ ಖಾದ್ರಿ ತಮ್ಮ ನಾಮಪತ್ರ ವಾಪಾಸ್‌ ಪಡೆದು ಅಧಿಕೃತ ಅಭ್ಯರ್ಥಿ ಯಾಸೀರ್‌ ಅಹಮದ್‌ ಖಾನ್‌ ಪಠಾಣ್‌ಗೆ ಬೆಂಬಲ ಸೂಚಿಸಿದರು.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿದ್ದ ಮಾಜಿ ಶಾಸಕ ಅಜ್ಜಂಪೀರ್‌ ಖಾದ್ರಿ ತಮ್ಮ ನಾಮಪತ್ರ ವಾಪಾಸ್‌ ಪಡೆದು ಅಧಿಕೃತ ಅಭ್ಯರ್ಥಿ ಯಾಸೀರ್‌ ಅಹಮದ್‌ ಖಾನ್‌ ಪಠಾಣ್‌ಗೆ ಬೆಂಬಲ ಸೂಚಿಸಿದರು.

ಶಿಗ್ಗಾಂವಿ: ಕಾಂಗ್ರೆಸ್‌ ಟಿಕೆಟ್‌ ಬಯಸಿದರೂ ಅವಕಾಶ ನೀಡದ್ದರಿಂದ ಮುನಿಸಿಕೊಂಡು ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಉಪ ಚುನಾವಣೆಗೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಮಾಜಿ ಶಾಸಕ ಸೈಯದ್ ಅಜ್ಜಂಪೀರ್ ಖಾದ್ರಿ ಕೊನೆಗೂ ನಾಮಪತ್ರ ವಾಪಸ್‌ ಪಡೆದಿದ್ಧಾರೆ. ಕಾಂಗ್ರೆಸ್‌ನ ಹಿರಿಯ ನಾಯಕರು, ಸಚಿವರು ನಿರಂತರ ಮನ ಒಲಿಸಿದ ಪರಿಣಾಮವಾಗಿ ಖಾದ್ರಿ ನಾಮಪತ್ರ ಹಿಂಪಡೆಯುವ ಮೂಲಕ ಕಾಂಗ್ರೆಸ್ ಪಾಳೆಯ ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ. ಖಾದ್ರಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರ ಬಳಿಯೇ ಕರೆದೊಯ್ದು ಮಾತುಕತೆ ನಡೆಸಲಾಗಿತ್ತು. ಚುನಾವಣೆಯಲ್ಲಿ ಪಕ್ಷದ ಪರವಾಗಿ ಕೆಲಸ ಮಾಡಿ. ಪಕ್ಷ ಗೆದ್ದರೆ ನಿಮಗೆ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಭರವಸೆ ನೀಡಿದ ಬಳಿಕ ಅಜ್ಜಂಪೀರ್‌ ಖಾದ್ರಿ ಕಣದಿಂದ ಹಿಂದೆ ಸರಿದರು.

ಜೆಡಿಎಸ್‌ ನಿಂದ ಒಮ್ಮೆ ಶಾಸಕರೂ ಆಗಿದ್ದ ಖಾದ್ರಿ ಇಲ್ಲಿ ಮೂರು ಬಾರಿ ಸೋತಿದ್ದಾರೆ. ಹಿಂದಿನ ಚುನಾವಣೆಯಲ್ಲೂ ಈಗಿನ ಅಧಿಕೃತ ಅಭ್ಯರ್ಥಿ ಯಾಸೀನ್‌ ಅಹ್ಮದ್‌ ಖಾನ್‌ ಪಠಾಣ್‌ ಅವರಿಗೆ ಟಿಕೆಟ್‌ ನೀಡಲಾಗಿತ್ತು. ಇದರಿಂದ ಬೇಸರಗೊಂಡ ಖಾದ್ರಿ ನಾಮಪತ್ರ ಸಲ್ಲಿಸಿದ್ದರು.

ನಾಮಪತ್ರ ಸಲ್ಲಿಸುವ ದಿನವೇ ತಡೆದಿದ್ದರೂ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ಕಾರಿಗೆ ಅಭಿಮಾನಿಗಳು ಕಲ್ಲು ತೂರಾಟ ನಡೆಸಿದ್ದರು. ಕೊನೆಗೆ ಅಂದು ಖಾದ್ರಿ ಉಮೇದುವಾರಿಕೆ ಸಲ್ಲಿಸಿದ್ದರು.

ಕಳೆದ ಕೆಲವು ದಿನಗಳಿಂದ ಅಜ್ಜಂಪೀರ್ ಖಾದ್ರಿ ಬೆಂಗಳೂರಿನ ಸಚಿವ ಜಮೀರ್ ಅಹ್ಮದ್ ಖಾನ್ ಸರ್ಕಾರಿ ನಿವಾಸದಲ್ಲಿ ಇದ್ದರು. ಅಜ್ಜಂಪೀರ್ ಖಾದ್ರಿಯಿಂದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿ ಡಿಕೆ ಶಿವಕುಮಾರ್ ಅವರನ್ನು ಜಮೀರ್ ಭೇಟಿ ಮಾಡಿಸಿದ್ದರು. ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾದ ಬೆನ್ನಲ್ಲೆ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡಿದ್ದರು.

ಇದೀಗ ಇಂದು ಅಜ್ಜಂಪೀರ್ ಖಾದ್ರಿ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೊತೆಗೆ ಬಂದು ನಾಮಪತ್ರ ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.

ಶಿಗ್ಗಾಂವಿಗೆ ಹೋಗುವ ಮಾರ್ಗ ಮಧ್ಯದಲ್ಲಿಯೂ ಖಾದ್ರಿ ಬೆಂಬಲಿಗರು ಯಾವುದೇ ಕಾರಣಕ್ಕೂ ಹಿಂಪಡೆಯದಂತೆ ಗೋಗರೆದರಾದರೂ ಅವರೆಲ್ಲರನ್ನೂ ಜಮೀರ ಅಹ್ಮದ ಮನವೊಲಿಸಿದರು.ಕೊನೆಗೂ ಸಚಿವರಾದ ಜಮೀರ್‌ ಅಹಮದ್‌ ಖಾನ್‌, ಶಿವಾನಂದ ಪಾಟೀಲ್‌ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಕೂಡ ಜೊತೆಗಿದ್ದರು.

ನಾಮಪತ್ರ ಹಿಂಪಡೆದಿರುವ ಅಜ್ಜಂಪೀರ್ ಖಾದ್ರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿರುವ ಯಾಸೀರ್ ಅಹಮದ್ ಖಾನ್ ಅವರ ಗೆಲುವಿಗೆ ಕೈ ಜೋಡಿಸಿ, ನಾವೆಲ್ಲ ಒಂದಾಗಿ ಕಾಂಗ್ರೆಸ್ ಪಕ್ಷದ ಜಯಭೇರಿಗೆ ಕೆಲಸ ಮಾಡೋಣ ಎಂದು ಭರವಸೆ ನೀಡಿದರು.

Whats_app_banner