Kannada News  /  Karnataka  /  Karnataka Assembly Polls People Are On Our Side Once Again Bjp Will Come To Power Says Cm Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Karnataka Assembly polls: 'ಜನತಾ ಜನಾರ್ದನ ನಮ್ಮ ಪರ.. ಮತ್ತೆ 5 ವರ್ಷ ಬಿಜೆಪಿ ಆಡಳಿತ' - ಸಿಎಂ ಬೊಮ್ಮಾಯಿ ಅಭಿಮತ

29 March 2023, 17:04 ISTHT Kannada Desk
29 March 2023, 17:04 IST

ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟವಾದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೇ 10 ನಡೆಯಲಿರುವ ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ಧವಾಗಿದೆ ಎಂದು ತಿಳಿಸಿದರು.

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟವಾದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೇ 10 ನಡೆಯಲಿರುವ ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ಧವಾಗಿದೆ ಎಂದು ತಿಳಿಸಿದರು.

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿ ಬಲಿಷ್ಟ ಕೇಡರ್ ಇರುವ, ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ. ಈಗಾಗಲೇ ಹಲವಾರು ಅಭಿಯಾನ ಮಾಡಿದೆ. ನಿರಂತರವಾಗಿ ಪಕ್ಷದ ಸಂಘಟನೆ ಮಾಡಿಕೊಂಡು ಬಂದಿದ್ದು, ಬೂತ್ ಮಟ್ಟದ ಅಭಿಯಾನ, ಮೋರ್ಚಾಗಳ ಸಮ್ಮೇಳನ, ಸಂಕಲ್ಪ ಯಾತ್ರೆ, ವಿಜಯ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ. ಚುನಾವಣೆ ಎದುರಿಸಲು ಎಲ್ಲಾ ತಯಾರಿ ಮಾಡಿಕೊಂಡಿದೆ ಎಂದರು.

ಜನತಾ ಜನಾರ್ದನ ನಮ್ಮ ಪರ

ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ಯೋಜನೆಗಳು, ಮೂಲಸೌಕರ್ಯಕ್ಕೆ ನೀಡಿರುವ ಅನುದಾನ, ರಾಜ್ಯ ಸರ್ಕಾರ ಕೈಗೊಂಡಿರುವ ಹಲವಾರು ಜನೋಪಯೋಗಿ ಕಾರ್ಯಕ್ರಮಗಳು, ರೈತಾಪಿ ವರ್ಗ, ಮಹಿಳೆಯರು, ಯುವಕರು, ಎಸ್ಸಿ ಎಸ್ಟಿ , ಒಬಿಸಿ ವರ್ಗಕ್ಕೆ, ಸಾಮಾಜಿಕವಾಗಿ, ಆರ್ಥಿಕವಾಗಿ ತೆಗೆದುಕೊಂಡ ತೀರ್ಮಾನಗಳು, ಬಡವರಿಗೆ ನೀಡಿರುವ ಪ್ರೋತ್ಸಾಹ, ಗ್ರಾಮೀಣ ಪ್ರದೇಶಗಳಲ್ಲಿ ನೀಡಿರುವ ಕುಡಿಯುವ ನೀರಿನ ಯೋಜನೆ, ಕೋವಿಡ್ ಸಂದರ್ಭದಲ್ಲಿ 10 ಕೆಜಿ ಅಕ್ಕಿ, ಸ್ತ್ರೀ ಸಾಮರ್ಥ್ಯ, ಸ್ವಾಮಿ ವಿವೇಕಾನಂದ ಯೋಜನೆ, ರೈತ ವಿದ್ಯಾ ನಿಧಿ, ಯೋಜನೆಗಳನ್ನು ನೀಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿದೆ. ಒಳಮೀಸಲಾತಿ ಹೆಚ್ಚಳ, ನೆನೆಗುದಿಗೆ ಬಿದ್ದ ಸಮಸ್ಯೆಗಳಿಗೆ ಪರಿಹಾರ, ಒಬಿಸಿಯಲ್ಲಿ ಬದಲಾವಣೆ ಜನಮಾನಸದಲ್ಲಿ ಪಕ್ಷ ಹಾಗೂ ಸರ್ಕಾರದ ಪರವಾಗಿ ಜನತಾ ಜನಾರ್ದನ ಇದೆ. ಈ ಬಾರಿ ನಮ್ಮ ಕೆಲಸಗಳ ಆಧಾರದ ಮೇಲೆ ಸಕಾರಾತ್ಮಕ ತೀರ್ಪನ್ನು ಕೇಳುತ್ತಿದ್ದೇವೆ. ಜನರ ಆಶೀರ್ವಾದ ನಮ್ಮ ಪರವಾಗಿದೆ ಎಂದರು.

ವಿರೋಧ ಪಕ್ಷದ ಆರೋಪ ಯಶಸ್ವಿಯಾಗಿಲ್ಲ

ವಿರೋಧ ಪಕ್ಷದವರು ಹಲವಾರು ಆರೋಪಗಳನ್ನು ಮಾಡಿದ್ದು ಅವರು ಮಾಡಿರುವ ಯಾವುದೇ ಆರೋಪ ಯಶಸ್ವಿ ಆಗಿಲ್ಲ. ಜನರ ಮಧ್ಯೆ ನಿಂತಿಲ್ಲ. ಭ್ರಷ್ಟಾಚಾರದ ವಿಚಾರ ಸೇರಿದಂತೆ ಎಲ್ಲವೂ ಅವರಿಗೆ ತಿರುಗುಬಾಣವಾಗಿದೆ. ಅವರ ಮೇಲೆಯೇ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ನಮ್ಮ ಶಾಸಕರ ಮೇಲೆ ದಾಳಿ ಮಾಡಿರುವುದು, ನಾವು ಲೋಕಾಯುಕ್ತವನ್ನು ಬಲ ಪಡಿಸಿದ್ದರಿಂದ‌. ನ್ಯಾಯಸಮ್ಮತವಾಗಿ ಅಧಿಕಾರ ನೀಡಿದ್ದರಿಂದ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತ ಬ್ಯಾಂಕ್ ಸಂಪೂರ್ಣ ಛಿದ್ರವಾಗಿದೆ. ಹೀಗಾಗಿ ಅವರು ಹತಾಶರಾಗಿ ಕೀಳುಮಟ್ಟದ ಹೇಳಿಕೆ ನೀಡುತ್ತಿದ್ದಾರೆ. ಅವರ ಕೀಳು ಮಟ್ಟದ ಭಾಷೆಯೇ ಅವರ ಹತಾಶೆಯನ್ನು ತೋರಿಸುತ್ತದೆ ಎಂದರು.

ನಮ್ಮ ಸರ್ಕಾರ‌ 5 ವರ್ಷ ಆಡಳಿತ ಮಾಡುವುದರಲ್ಲಿ ಸಂಶಯವಿಲ್ಲ

ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿನ ಕಳೆದ ಮೂರು ತಿಂಗಳು ಮಾಡಿರುವ ಪ್ರವಾಸ ಸಕಾರಾತ್ಮಕ ಪರಿಣಾಮ ಬೀರಿದೆ. 2023 ರ ಮೇ 13 ರಂದು ಸ್ಪಷ್ಟವಾದ ಬಹುಮತ ಭಾರತೀಯ ಜನತಾ ಪಕ್ಷಕ್ಕೆ ಸಿಗಲಿದೆ. ಮತ್ತೆ ನಮ್ಮ ಸರ್ಕಾರ‌ 5 ವರ್ಷ ಆಡಳಿತ ಮಾಡುವುದರಲ್ಲಿ ಸಂಶಯವಿಲ್ಲ ಎಂದರು.

ಡಿಕೆಶಿ ನಮ್ಮ ಶಾಸಕರಿಗೆ ಕರೆ ಮಾಡಿ ಟಿಕೆಟ್ ಕೊಡುವ ಭರವಸೆ ನೀಡಿದ್ದಾರೆ. ನಮ್ಮ ಪಕ್ಷದ ಯಾವುದೇ ಶಾಸಕರು ಕಾಂಗ್ರೆಸ್ ಹೋಗುವುದಿಲ್ಲ. ಎಲ್ಲರೂ ನಮ್ಮವರೇ ಯಾರೂ ವಲಸಿಗರಲ್ಲ ಎಂದು ಬೊಮ್ಮಾಯಿ ತಿಳಿಸಿದರು.