ಕನ್ನಡ ಸುದ್ದಿ  /  ಕರ್ನಾಟಕ  /  Bjp Janaspandana: ಇಂದು ಬಿಜೆಪಿ ಜನಸ್ಪಂದನ, ದೊಡ್ಡಬಳ್ಳಾಪುರದಲ್ಲಿ ಶಕ್ತಿಪ್ರದರ್ಶನಕ್ಕೆ ರೆಡಿ, 3 ಲಕ್ಷ ಜನ ಸೇರುವ ನಿರೀಕ್ಷೆ

BJP Janaspandana: ಇಂದು ಬಿಜೆಪಿ ಜನಸ್ಪಂದನ, ದೊಡ್ಡಬಳ್ಳಾಪುರದಲ್ಲಿ ಶಕ್ತಿಪ್ರದರ್ಶನಕ್ಕೆ ರೆಡಿ, 3 ಲಕ್ಷ ಜನ ಸೇರುವ ನಿರೀಕ್ಷೆ

ಕರ್ನಾಟಕ ಆಡಳಿತರೂಢ ಬಿಜೆಪಿಯು ದೊಡ್ಡಬಳ್ಳಾಪುರದಲ್ಲಿ ಇಂದು ಜನಸ್ಪಂದನ ಕಾರ್ಯಕ್ರಮ ಆಯೋಜಿಸಿದ್ದು, ಮೂರು ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ. ಈ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಲು ಸಜ್ಜಾಗಿದೆ. ಈ ಸಮಾವೇಶವು ಕಳೆದ ಎರಡು ಬಾರಿ ವಿವಿಧ ಕಾರಣಗಳಿಂದ ಮುಂದೂಡಲ್ಪಟ್ಟಿತ್ತು.

BJP Janaspandana: ಇಂದು ಬಿಜೆಪಿ ಜನಸ್ಪಂದನ, ದೊಡ್ಡಬಳ್ಳಾಪುರದಲ್ಲಿ ಶಕ್ತಿಪ್ರದರ್ಶನಕ್ಕೆ ರೆಡಿ, 3 ಲಕ್ಷ ಜನ ಸೇರುವ ನಿರೀಕ್ಷೆ
BJP Janaspandana: ಇಂದು ಬಿಜೆಪಿ ಜನಸ್ಪಂದನ, ದೊಡ್ಡಬಳ್ಳಾಪುರದಲ್ಲಿ ಶಕ್ತಿಪ್ರದರ್ಶನಕ್ಕೆ ರೆಡಿ, 3 ಲಕ್ಷ ಜನ ಸೇರುವ ನಿರೀಕ್ಷೆ

ಬೆಂಗಳೂರು: ಕರ್ನಾಟಕ ಆಡಳಿತರೂಢ ಬಿಜೆಪಿಯು ದೊಡ್ಡಬಳ್ಳಾಪುರದಲ್ಲಿ ಇಂದು ಜನಸ್ಪಂದನ ಕಾರ್ಯಕ್ರಮ ಆಯೋಜಿಸಿದ್ದು, ಮೂರು ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ. ಈ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಲು ಸಜ್ಜಾಗಿದೆ. ಈ ಸಮಾವೇಶವು ಕಳೆದ ಎರಡು ಬಾರಿ ವಿವಿಧ ಕಾರಣಗಳಿಂದ ಮುಂದೂಡಲ್ಪಟ್ಟಿತ್ತು.

ದೊಡ್ಡಬಳ್ಳಾಪುರದ ದೇವನಹಳ್ಳಿ ರಸ್ತೆಯ ರಘುನಾಥಪುರ ಎಲ್‌ ಅಂಡ್‌ ಟಿ ( L&T) ಮುಂಭಾಗದಲ್ಲಿ ಸುಮಾರು 40 ಎಕರೆ ಮೈದಾನದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಬೃಹತ್‌ ವೇದಿಕೆ ಹಾಕಲಾಗಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನರ ಮುಂದಿಡಲಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ರಾಜ್ಯ, ಕೇಂದ್ರ ಸರಕಾರದ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶಖ್ಕೆ 1200 * 140 ಅಡಿ ಉದ್ದಗಲದ ಬೃಹತ್‌ ವೇದಿಕೆ ನಿರ್ಮಾಣಗೊಂಡಿದೆ. ಸುಮಾರು ನೂರು ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಹಲವು ಲಕ್ಷ ಜನರು ನಿಂತು ಅಥವಾ ಕುಳಿತು ಕಾರ್ಯಕ್ರಮ ನೋಡಲು ವ್ಯವಸ್ಥೆ ಮಾಡಲಾಗಿದೆ. ಸುಮಾರು ಮೂರು ಲಕ್ಷ ಜನರು ಸೇರುವ ನಿರೀಕ್ಷೆಯಿದೆ.

ಕಾರ್ಯಕ್ರಮ ವೀಕ್ಷಣೆಗೆ ಅನುಕೂಲವಾಗುವಂತೆ ಬೃಹತ್‌ ಎಲ್‌ಇಡಿ ಪರದೆ ಹಾಕಲಾಗಿದೆ. ಸಮಾವೇಶಕ್ಕೆ ಆಗಮಿಸುವವರಿಗೆ ಊಟ, ಉಪಹಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಉಪಹಾರ, ಊಟಕ್ಕಾಗಿ 203 ಕೌಂಟರ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಬಿಗಿ ಭದ್ರತೆಗಾಗಿ ಎರಡು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ.

ಸೋಮವಾರದಿಂದ ಆರಂಭಗೊಳ್ಳುವ ವಿಧಾನಮಂಡಲದ ಅಧಿವೇಶನದ ಬಳಿಕ ರಾಜ್ಯದ ಆರು ಭಾಗಗಳಲ್ಲಿ ಇಂತಹ ಬೃಹತ್‌ ಜನಸ್ಪಂದನ ಆಯೋಜಿಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ. ಈ ವರ್ಷದ ಅಂತ್ಯದೊಳಗೆ ಎಲ್ಲಾ ಸಮಾವೇಶಗಳನ್ನು ಮುಗಿಸಿ ಮುಂದಿನ ವರ್ಷ ಬೇರೆ ರೀತಿಯ ಕಾರ್ಯಕ್ರಮಗಳ ಮೂಲ ವಿಧಾನಸಭಾ ಚುನಾವಣೆಗೆ ಅಡಿಯಿಡಲು ಬಿಜೆಪಿ ನಿರ್ಧರಿಸಿದೆ.

ರಾಜ್ಯ ಬಿಜೆಪಿ ಸರಕಾರದಲ್ಲಿ ಬಸವರಾಜ ಬೊಮ್ಮಾಯಿ ಅವರ ಒಂದು ವರ್ಷಗಳ ಅವಧಿ ಮತ್ತು ಅದಕ್ಕೂ ಹಿಂದೆ ಬಿಎಸ್‌ ಯಡಿಯೂರಪ್ಪ ಅವರ ಎರಡು ವರ್ಷಗಳ ಅವಧಿಯಲ್ಲಿ ಬಿಜೆಪಿ ಸರಕಾರದ ಸಾಧನೆಗಳನ್ನು ಜನರ ಮುಂದಿಡಲು ಈ ಜನಸ್ಪಂದನ ಕಾರ್ಯಕ್ರಮವನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ದೊಡ್ಡಬಳ್ಳಾಪುರದಲ್ಲಿ ಇಂದು ನಡೆಯಲಿರುವ ಜನಸ್ಪಂದನ ಕಾರ್ಯಕ್ರಮದ ಜವಾಬ್ದಾರಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಅವರಿಗೆ ನೀಡಲಾಗಿದೆ. ಕಾರ್ಯಕ್ರಮದ ಉದ್ಘಾಟನೆಗೆ ಬಿಜೆಪಿ ಅಧ್ಯಕ್ಷರಾದ ಜೆ.ಪಿ. ನಡ್ಡಾ ಆಗಮಿಸಬೇಕಿತ್ತು. ನಿಗದಿತ ಕಾರ್ಯಕ್ರಮಗಳಿಂದಾಗಿ ಅವರಿಗೆ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಇವರ ಬದಲು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.

IPL_Entry_Point