ಕನ್ನಡ ಸುದ್ದಿ  /  Karnataka  /  Karnataka Bjp Leaders Shared Stage With Notorious Rowdy Sheeter Silent Sunil Congress Opposed

BJP leaders with rowdy sheeter Sunil: ರೌಡಿ ಶೀಟರ್ ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ನಾಯಕರು; ಕಾಂಗ್ರೆಸ್ ಕಿಡಿ

ರಾಜ್ಯ ಬಿಜೆಪಿ ನಾಯಕರೊಂದಿಗೆ ಕುಖ್ಯಾತ ರೌಡಿ ಶೀಟರ್ ಸೈಲೆಂಟ್ ಸುನೀಲ್ ವೇದಿಕೆ ಹಂಚಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದ್ದು, ಕೇಸರಿ ನಾಯಕರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಕಾರ್ಯಕ್ರಮವೊಂದರಲ್ಲಿ ಬಿಜೆಪಿ ನಾಯಕರ ಜೊತೆ ಕಾಣಿಸಿಕೊಂಡ ಕುಖ್ಯಾತ ರೌಡಿ ಶೀಟರ್ ಸೈಲೆಂಟ್ ಸುನೀಲ್
ಕಾರ್ಯಕ್ರಮವೊಂದರಲ್ಲಿ ಬಿಜೆಪಿ ನಾಯಕರ ಜೊತೆ ಕಾಣಿಸಿಕೊಂಡ ಕುಖ್ಯಾತ ರೌಡಿ ಶೀಟರ್ ಸೈಲೆಂಟ್ ಸುನೀಲ್

ಬೆಂಗಳೂರು: ನಗರದ ಕಾರ್ಯಕ್ರಮವೊಂದರಲ್ಲಿ ಕುಖ್ಯಾತ ರೌಡಿ ಶೀಟರ್ ಸೈಲೆಂಟ್ ಸುನೀಲ್ ಜೊತೆ ಬಿಜೆಪಿಯ ಪ್ರಮುಖ ನಾಯಕರು ವೇದಿಕೆೆ ಹಂಚಿಕೊಂಡಿರುವುದಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ.

ಚಾಮರಾಜಪೇಟೆಯಲ್ಲಿ ರಾಜ್ಯ ಕೂಲಿ ಕಾರ್ಮಿಕರ ಹಾಗೂ ಆಟೋ ಚಾಲಕರ ಸಂಘ ಸೇರಿದಂತೆ ವಿವಿಧ ಸಂಸ್ಥೆಗಳು ಜಂಟಿಯಾಗಿ ಕಳೆದ ಭಾನುವಾರ ಅಪ್ಪು ನಮನ ಮತ್ತು ರಕ್ತದಾನ ಕಾರ್ಯಕ್ರಮವನ್ನು ಆಯೋಜಿಸಿದ್ದವು. ಈ ಕಾರ್ಯಕ್ರಮದಲ್ಲಿ ರೌಡಿ ಶೀಟರ್ ಸೈಲೆಂಟ್ ಸುನೀಲ್ ಜೊತೆ ಸಂಸದರಾದ ಪಿಸಿ ಮೋಹನ್, ತೇಜಸ್ವಿ ಸೂರ್ಯ, ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಸುನೀಲ್ ಪಕ್ಕದಲ್ಲಿ ಕುಳಿತಿದ್ದಾರೆ. ಹೀಗಾಗಿ ಸುನೀಲ್ ಬಿಜೆಪಿ ಸೇರುತ್ತಾನೆ ಎಂದು ಹೇಳಲಾಗುತ್ತಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್, ಬಿಜೆಪಿಯಲ್ಲಿ ಈ ಮೊದಲು ವೈಟ್ ಕಾಲರ್ ರೌಡಿಗಳಿದ್ದರು, ಈಗ ರಿಯಲ್ ರೌಡಿಗಳು ಸೇರಿದ್ದಾರೆ. ಮುಂದೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೂಡ ಬಿಜೆಪಿ ಸೇರಿ ಪಾವನನಾಗಬಹುದು! ಪಾತಕಿಗಳು, ದರೋಡೆಕೋರರು, ಡ್ರಗ್ ಪೆಡ್ಲರ್‌ಗಳು, ಕ್ರೀಮಿನಲ್‌ಗಳು, ಭ್ರಷ್ಟರು, ರೇಪಿಸ್ಟರು ಎಲ್ಲರಿಗೂ ಭಾರತೀಯ ಜನತಾ ಪಕ್ಷ ತವರು ಮನೆ ಇದ್ದಂತೆ! ಎಂದು ತರಾಟೆಗೆ ತೆಗೆದುಕೊಂಡಿದೆ.

ಮತ್ತೊಂದು ಟ್ವೀಟ್ ನಲ್ಲಿ, ವಾಂಟೆಂಡ್ ಕ್ರಿಮಿನಲ್‌ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್! ರೌಡಿ ಶೀಟರ್‌ಗಳನ್ನು ಪಕ್ಕದಲ್ಲಿಟ್ಟುಕೊಳ್ಳುವ ಹಾಗೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ. ಬಿಜೆಪಿ ಈಗ ಮತ್ತೊಬ್ಬ ರೌಡಿ ಫೈಟರ್ ರವಿ ಎಂಬಾತನನ್ನು ಪಕ್ಷಕ್ಕೆ ಸೇರಿಸಿಕೊಂಡ ಸಂಸ್ಕೃತಿ ಪಾಲನೆಗೆ ಮುಂದಾಗಿದೆ! ಎಂದು ಹೇಳಿದೆ.

ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನಿಲ್ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ಸೈಲೆಂಟ್! ಜ್ಞಾನೇಂದ್ರ ಆರಗ ಅವರೇ, ಸೈಲೆಂಟ್ ಸುನಿಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ? ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರೀರಲಿಲ್ಲವೇ? ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ?

ಕ್ರಿಮಿನಲ್‌ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ? ಆರಗ ಜ್ಞಾನೇಂದ್ರ ಅವರೇ, ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ? ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ ಬಿಜೆಪಿ ನಾಯಕರ ಕೈಗೆ ಸಿಕ್ಕಿದ್ದು ಹೇಗೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸೈಲೆಂಟ್ ಸುನಿಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ

ಸೈಲೆಂಟ್ ಸುನಿಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ. ಸೈಲೆಂಟ್ ಸುನಿಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು ಎಂದು ತಿಳಿಸಿದ್ದಾರೆ.